ವಿಶ್ವ ಪರಂಪರೆ ಸಪ್ತಾಹದ ಅಂಗವಾಗಿ ಐತಿಹಾಸಿಕ ಪಟ್ಟದಕಲ್ಲಿನಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ‘ಕಲಾಧಾರ’ ಭಾರತೀಯ ಶಾಸ್ತ್ರೀಯ ಸಂಗೀತ ಮತ್ತು ನೃತ್ಯೋತ್ಸವ ಆಯೋಜಿಸಲಾಗಿದೆ.
ಭಾರತೀಯ ವಿದ್ಯಾಭವನ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಕರ್ನಾಟಕ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾಡಳಿತದ ಸಹಯೋಗದಲ್ಲಿ, ಸುಧಾ ಮೂರ್ತಿ ಅವರ ಬೆಂಬಲದೊಂದಿಗೆ ಉತ್ಸವ ನಡೆಯಲಿದೆ.
ಇಂದು ಸಂಜೆ ಸಂಜೆ ಉತ್ಸವ ಉದ್ಘಾಟನೆಯಾಗಲಿದ್ದು, ಖ್ಯಾತ ಗಾಯಕ ಪಂ. ಜಯತೀರ್ಥ ಮೇವುಂಡಿ ಅವರಿಂದ ಹಿಂದೂಸ್ತಾನಿ ಸಂಗೀತ ಹಾಗೂ ಕಥಕ್-ಭರತನಾಟ್ಯ ಜುಗಲ್ಬಂದಿ ನಡೆಯಲಿದೆ.
ನ.22ರಂದು ಬೆಳಿಗ್ಗೆ ಉದಯರಾಗ ಸಂಗೀತ, ಸಂಜೆ ಪಂ. ವೆಂಕಟೇಶ್ ಅಲ್ನೋಡ್ ಅವರ ಸಂಗೀತ ಹಾಗೂ ರಸಿಕಾ ನೃತ್ಯ ತಂಡದಿಂದ ಭರತನಾಟ್ಯ ಪ್ರದರ್ಶನ ಇರಲಿದೆ.ಚಾಲುಕ್ಯರ ಐತಿಹಾಸಿಕ ದೇವಾಲಯಗಳ ಸಾನ್ನಿಧ್ಯದಲ್ಲಿ ನಡೆಯುವ ಈ ಉತ್ಸವಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಕೋರಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ, ಸಂಸದ ಪಿ.ಸಿ. ಗದ್ದಿಗೌಡರ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.



