ಬಾಗಲಕೋಟೆ | ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಕೆ.ರಾಜೇಂದ್ರ

Date:

ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರು ಹಾಗೂ ಇತರ ವಿವರಗಳನ್ನು ಪ್ರತಿಯೊಬ್ಬರೂ ಪರಿಶೀಲಿಸಿಕೊಳ್ಳಬೇಕು. ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಮತದಾರರ ಪಟ್ಟಿಯ ವೀಕ್ಷಕ ಕೆ.ರಾಜೇಂದ್ರ ಹೇಳಿದರು.

- Advertisement -

ಬಾಗಲಕೋಟೆ ನಗರದ ವಿದ್ಯಾಗಿರಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 92ಕ್ಕೆ ಭೇಟಿ ನೀಡಿದ ಅವರು, ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಹಾಗೂ ವಿಶೇಷ ನೋಂದಣಿ ಅಭಿಯಾನದಡಿ ನಡೆಯುತ್ತಿರುವ ಕಾರ್ಯಗಳ ಪರಿಶೀಲನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಮತಗಟ್ಟೆ ಅಧಿಕಾರಿಗಳಿಂದ ನೋಂದಣಿ ಪ್ರಕ್ರಿಯೆಯ ಮಾಹಿತಿ ಪಡೆದ ಅವರು, ಹೊಸ ಮತದಾರರ ಸೇರ್ಪಡೆ, ಹೆಸರು ಮತ್ತು ವಿಳಾಸ ಸೇರಿದಂತೆ ಮತದಾರರ ವಿವರಗಳಲ್ಲಿನ ತಿದ್ದುಪಡಿ, ಸ್ಥಳಾಂತರಗೊಂಡಿರುವ ಮತದಾರರು ಹಾಗೂ ಅರ್ಹತೆ ಹೊಂದಿರದ ಮತದಾರರ ವಿವರಗಳ ಪರಿಶೀಲನೆ ಕುರಿತು ಮಾಹಿತಿ ಪಡೆದುಕೊಂಡರು.

*ಯುವ ಮತದಾರರ ನೋಂದಣಿಗೆ ಆದ್ಯತೆ

18 ವರ್ಷ ವಯಸ್ಸು ಪೂರ್ಣಗೊಳಿಸಿರುವ ಯುವಜನರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ಕೆ ವಿಶೇಷ ಆದ್ಯತೆ ನೀಡಬೇಕು. ಅರ್ಹತೆ ಹೊಂದಿರುವ ಯಾವುದೇ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಕೆ.ರಾಜೇಂದ್ರ ಸೂಚಿಸಿದರು.

ಬಳಿಕ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಮತದಾರರ ನೋಂದಣಿ ಪ್ರಕ್ರಿಯೆ ಯಶಸ್ವಿಯಾಗಲು ರಾಜಕೀಯ ಪಕ್ಷಗಳ ಸಹಕಾರವೂ ಪ್ರಮುಖವಾಗಿದೆ. ವಿಶೇಷವಾಗಿ ಹೊಸದಾಗಿ ಅರ್ಹತೆ ಪಡೆದ ಯುವ ಮತದಾರರಿಗೆ ನೋಂದಣಿ ಕುರಿತು ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆಗೆ ಉದ್ಯೋಗ ನಿಧಿ ಬಲ: ಕೈಗಾರಿಕೆಗಳಿಗೆ ಉತ್ತೇಜನ, ಯುವಜನರಿಗೆ ಉದ್ಯೋಗದ ನಿರೀಕ್ಷೆ

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಪಾರದರ್ಶಕತೆ, ಅರ್ಹರಿಗೆ ನೋಂದಣಿ ಅವಕಾಶ ಹಾಗೂ ನಿಯಮಬದ್ಧ ಆಕ್ಷೇಪಣೆ ಮತ್ತು ತಿದ್ದುಪಡಿಗಳಿಗೆ ಅವಕಾಶ ಕಲ್ಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ತಹಶೀಲ್ದಾರ್ ವಾಸುದೇವ ಸ್ವಾಮಿ ಸೇರಿದಂತೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...