ಬಾಗಲಕೋಟೆ | 422 ಶಾಲಾ ಅಡುಗೆ ಕೋಣೆಗಳ ದುರಸ್ತಿ ಯಾವಾಗ? ಅಧಿಕಾರಿಗಳಿಗೆ ಸಿಇಒ ಗಜಾನನ ಬಾಲೆ ಚಾಟಿ

Date:

ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿನ ದುರಸ್ತಿ ಅಗತ್ಯವಿರುವ 422 ಅಡುಗೆ ಕೋಣೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ ಸಿಇಒ ಗಜಾನನ ಬಾಲೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

- Advertisement -

ಬಾಗಲಕೋಟೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಗುರುವಾರ ನಡೆದ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟ ಮತ್ತು ನಿರ್ವಹಣೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ವಿತರಿಸುವ ಆಹಾರದ ಗುಣಮಟ್ಟದಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು. ಅಡುಗೆ ಕೋಣೆಗಳ ದುರಸ್ತಿಗೆ ಕೇವಲ ಪಟ್ಟಿ ಸಿದ್ಧಪಡಿಸಿದರೆ ಸಾಲದು, ಕಾಮಗಾರಿಗಳನ್ನು ಪೂರ್ಣಗೊಳಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇತ್ತ ಬೆಲೆ ಏರಿಕೆಯ ‘ಬರೆ’, ಅತ್ತ 1 ಟ್ರಿಲಿಯನ್‌...

ಒಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದ್ದರೆ, ಇನ್ನೊಂದೆಡೆ ರಾಜ್ಯ ಕಾಂಗ್ರೆಸ್‌ ಸರ್ಕಾರ "ಟ್ರಿಲಿಯನ್ ಡಾಲರ್ ಆರ್ಥಿಕತೆ"ಯ ಭವ್ಯ ಚಿತ್ರಣವನ್ನು ಸಾರ್ವಜನಿಕರ ಮುಂದಿಡುತ್ತಿವೆ. ಸದ್ಯ ಕರ್ನಾಟಕದಲ್ಲಿ ಕಂಡುಬರುತ್ತಿರುವ...

ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗರ್ವಭಂಗ: ಸೊಕ್ಕು ಮುರಿದ...

ಈ ಚುನಾವಣಾ ಫಲಿತಾಂಶದಿಂದ ಟ್ರಂಪ್ ಅವರು ತಮ್ಮ ಅಧ್ಯಕ್ಷ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮುಂದಿನ ಜನವರಿ 3ರಂದು ಹೊಸ ಕಾಂಗ್ರೆಸ್ (ಸಂಸತ್ತು) ಅಸ್ತಿತ್ವಕ್ಕೆ ಬಂದ ಬಳಿಕ ಅವರ ಆಡಳಿತದ ಹಾದಿ ಅತ್ಯಂತ ದುರ್ಗಮವಾಗಲಿದೆ....

ಶಾಲೆಗಳಿಗೆ ಭೇಟಿ ನೀಡದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರಂತರವಾಗಿ ಶಾಲೆಗಳಿಗೆ ಭೇಟಿ ನೀಡಿ ಅಡುಗೆ ಕೋಣೆಗಳ ನಿರ್ವಹಣೆ ಹಾಗೂ ಬಿಸಿಯೂಟದ ಗುಣಮಟ್ಟ ಪರಿಶೀಲಿಸಬೇಕು ಎಂದು ಸೂಚಿಸಿದರು.

ಆಹಾರದ ರುಚಿ ಪರೀಕ್ಷಿಸಿದರೆ ಸಾಲದುಸರಬರಾಜಾಗುವ ಆಹಾರ ಧಾನ್ಯಗಳ ಗುಣಮಟ್ಟ, ಪ್ರಮಾಣ, ಬಳಕೆ ಹಾಗೂ ಆಹಾರ ತಯಾರಿಸುವ ವಿಧಾನವನ್ನು ಸಮಗ್ರವಾಗಿ ಪರಿಶೀಲಿಸಬೇಕು. ಕೇವಲ ಆಹಾರದ ರುಚಿ ನೋಡುವುದಷ್ಟೇ ಗುಣಮಟ್ಟದ ಪರಿಶೀಲನೆಯಲ್ಲ ಎಂದು ತಿಳಿಸಿದರು.

ಬಿಸಿಯೂಟದ ತಂತ್ರಾಂಶದಲ್ಲಿ ಮಕ್ಕಳ ಹಾಜರಾತಿಯನ್ನು ಪ್ರತಿದಿನ ಸಮರ್ಪಕವಾಗಿ ದಾಖಲಿಸಬೇಕು. ಅಧಿಕಾರಿಗಳ ನಿರಂತರ ಮೇಲ್ವಿಚಾರಣೆಯಿಂದ ಶಾಲೆಗಳ ನಿರ್ವಹಣೆ ಸುಧಾರಿಸುವುದರ ಜತೆಗೆ ಮಕ್ಕಳಿಗೆ ಗುಣಮಟ್ಟದ ಆಹಾರ ದೊರೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪೂರ, ಮುಖ್ಯ ಲೆಕ್ಕಾಧಿಕಾರಿ ಸಿದ್ರಾಮೇಶ್ವರ ಉಕ್ಕಲಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೀತಾರಾಮು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಾವಂಜೆ ಗೋಳಿಕಟ್ಟೆಯಲ್ಲಿ ನೂತನ ಅಲ್ ಫಲಾಹ್ ಜುಮ್ಮಾ ಮಸೀದಿ ಉದ್ಘಾಟನೆ

ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಲಾದ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನಾ...

ವಿಜಯಪುರ |ಹಾಲು, ಬಸ್ ದರ ಏರಿಕೆ ಹಿಂಪಡೆಯಲು ಅಪ್ಪುರಾಜ್ ನಿಮಾದಾರ ಆಗ್ರಹ

ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರುತ್ತಿರುವ...

ಚಿಕ್ಕಮಗಳೂರು | ಯುವತಿ ಸಾವು : ಠಾಣೆ ಎದುರು ಪ್ರತಿಭಟನೆ 

ವಿಷ ಸೇವಿಸಿ ಯುವತಿ ಸಾವನಪ್ಪಿರುವ ಘಟನೆ ಬಗ್ಗೆ ಠಾಣೆ ಮುಂದೆ ಪ್ರತಿಭಟನೆ...