ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ಯುವಕ

Date:

ಬಾಲಿವುಡ್ ಖ್ಯಾತ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಖಾಸಗಿ ವಾಹಿನಿಯಲ್ಲಿ ನಡೆಸಿಕೊಡುವ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮದಲ್ಲಿ ಮಹಾಲಿಂಗಪುರದ ಬಡಕುಟುಂಬದ 22 ರ ಹರೆಯದ ಯುವಕ ರಮಜಾನ್ ಮಲಿಕ್ ಸಾಬ ಫಿರಜಾದೆ ಭಾಗವಹಿಸಿ 50 ಲಕ್ಷ ರೂಪಾಯಿಗಳನ್ನು ಗೆದಿದ್ದಾರೆ.

- Advertisement -

ಚಿಮ್ಮಡಗಲ್ಲಿಯ ಬಡಕುಟುಂಬದ ರಮಜಾನ ತಂದೆ ಮಲ್ಲಿಸಾಬಸಾಬ-ಮುನೇರಾ ದಂಪತಿಯ ಸುಪುತ್ರ. ಇವರ ತಂದೆ ಗೋಕಾಕ ರಸ್ತೆಯಲ್ಲಿ ಗ್ಯಾರೇಜ್‌ನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಾರೆ. ಗ್ಯಾಸ್ ವೆಲ್ಡರ್ ಕೆಲಸದ ಆದಾಯದಲ್ಲಿ ಮಕ್ಕಳ ಶಿಕ್ಷಣ ಮತ್ತು ಮನೆ ನಿರ್ವಹಣೆ ಮಾಡುತ್ತಿದ್ದಾರೆ. ರಮಜಾನಗೆ ಒಬ್ಬ ತಮ್ಮ, ಇಬ್ಬರು ತಂಗಿಯರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರ್ಯಕ್ರಮದಲ್ಲಿ ಹದಿನಾಲ್ಕು ಜಟೀಲ ಪ್ರಶ್ನೆಗಳಿಗೆ ಉತ್ತರಿಸಿ, ಕೊನೆಯ 15ನೇ ಪ್ರಶ್ನೆಗೆ ಜಾಣ್ಮೆಯ ಕ್ವಿಟ್ ಪಡೆದು ಅಗ್ರ ಶ್ರೇಯಾಂಕದ ಒಂದು ಕೋಟಿ ಸಿಗದೇ ಹೋದರೂ 50 ಲಕ್ಷ ಮೊತ್ತದ ಚೆಕ್‌ ಪಡೆದುಕೊಂಡಿದ್ದಾರೆ. ಸಂದರ್ಭದಲ್ಲಿ ನಟ ಅಮಿತಾಬ್ ಅವರು ರಮಜಾನ್‌ಗೆ ಶುಭ ಹಾರೈಸಿ ಕೆಬಿಸಿ ನೀಡಿರುವ ಹಣದಿಂದ ಸುಭದ್ರ ಬದುಕು ಕಟ್ಟಿಕೊಂಡು ಹಣವನ್ನು ಸದುಪಯೋಗ ಮಾಡಿಕೊಳ್ಳಲು ಸಲಹೆ ನೀಡಿದ್ದಾರೆ. ರಮಜಾನ್ ಭಾಗವಹಿಸಿದ ಕಾರ್ಯಕ್ರಮ ಮುಂದಿನ ವಾರದ ಸಂಚಿಕೆಯಲ್ಲಿ ಪ್ರಸಾರವಾಗಲಿದೆ.

ಇದನ್ನು ಓದಿದ್ದೀರಾ?: ಹೋಗಿ ರಣಜಿ ಕ್ರಿಕೆಟ್‌ ಆಡಿ: ವಿರಾಟ್‌, ರೋಹಿತ್‌ ವಿರುದ್ಧ ರವಿ ಶಾಸ್ತ್ರಿ ಕಿಡಿ

ಕರೋಡ್ ಪತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಎರಡು ಬಾರಿ ಪ್ರಯತ್ನಿಸಿ ವಿಫಲರಾಗಿದ್ದರು. ಮೂರನೇ ಬಾರಿಯ ಪ್ರಯತ್ನದಲ್ಲಿ ಆಯ್ಕೆಯಾದ ರಮಜಾನ್ ಜ.10ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಟ್ ಸೀಟ್ ಅಲಂಕರಿಸುವ ಸುವರ್ಣಾವಕಾಶ ಪಡೆದುಕೊಂಡಿದ್ದರು.

ರಮಜಾನ ಅವರು ಚಿಕ್ಕಂದಿನಿಂದಲೂ ಬಡತನದಲ್ಲಿಯೇ ಬೆಳೆದ ಹುಡುಗ. ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್‌ಸಿ ಪದವಿ ಕಾಲೇಜಿನಲ್ಲಿ ಪದವಿ ಪೂರ್ಣಗೊಳಿಸಿದ ರಮಜಾನ ಪಟ್ಟಣದ ಎಸ್.ಎಚ್ ಮೆಳವಂಕಿ ಅವರ ಆಕಾಶ ಕೋಚಿಂಗ್ ಸೆಂಟರ್‌ನಲ್ಲಿ ತರಬೇತಿ ಪಡೆದುಕೊಂಡಿದ್ದಾನೆ. ಸದ್ಯ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಪಡೆಯುತ್ತಿದ್ದಾರೆ.

ಮನೆಯ ಆರ್ಥಿಕ ಪರಿಸ್ಥಿತಿ ಕಠಿಣವಾಗಿದ್ದರೂ ಪಟ್ಟಣದ ಹೋಟೆಲ್ ಒಂದರಲ್ಲಿ ನಿತ್ಯ 5 ಗಂಟೆಗಳ ಕಾಲ ಸರ್ವಿಸ್ ಕೆಲಸ ಮತ್ತು ರಾತ್ರಿ ವೇಳೆ ಪಟ್ಟಣದ ಕೆಎಲ್ಇ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ವಾಚಮನ್ ಆಗಿ ಕೆಲಸ ಮಾಡಿ ಬರುವ ಹಣದಲ್ಲಿಯೇ ಶಾಲೆ ಮತ್ತು ಸ್ವಂತ ಖರ್ಚನ್ನು ನೋಡಿಕೊಂಡು ಓದು ಮುಂದುವರೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...