ಬಾಗಲಕೋಟೆ ಬೈ ಎಲೆಕ್ಷನ್ | ಕಾಂಗ್ರೆಸ್‌ ಅಭ್ಯರ್ಥಿ ಪರ ಸಿಎಂ ಸಿದ್ದರಾಮಯ್ಯ ಮತ ಯಾಚನೆ

Date:

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಈ ಭಾಗದ ಬಡ ಜನರಿಗೆ ತಲುಪಿರುವುದು ಅತ್ಯಂತ ಸಂತಸ ತಂದಿದೆ. ಗ್ಯಾರಂಟಿಗಳನ್ನು ಬೆಂಬಲಿಸಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

- Advertisement -

ತಾಲೂಕಿನ ಸುತಗುಂಡಾರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷಗಳು ಮಾಡುತ್ತಿರುವ ಅಪಪ್ರಚಾರಕ್ಕೆ ಸಾರ್ವಜನಿಕರು ಕಿವಿಗೊಡಬಾರದು. ಈ ಭಾಗದ ಅಭಿವೃದ್ಧಿಗೆ ಎಚ್.ವೈ. ಮೇಟಿ ಅವರ ಕೊಡುಗೆ ಅಪಾರವಾಗಿದೆ. ಅವರ ಉತ್ತರಾಧಿಕಾರಿಯಾಗಿ ಸ್ಪರ್ಧಿಸಿರುವ ಉಮೇಶ ಮೇಟಿ ಅವರನ್ನು ಬೆಂಬಲಿಸಿ ಗೆಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಉಮೇಶ ಮೇಟಿ ಅವರಿಗೆ ಮತ ನೀಡುವಂತೆ ವಿನಂತಿಸಿದರು. ಸಚಿವ ಎಂ.ಬಿ. ಪಾಟೀಲ ಹಾಗೂ ಮಾಜಿ ಸಚಿವ ಅಜಯಕುಮಾರ್ ಸರನಾಯಕ ಅವರು ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹಾಗೂ ಬಾಯಕ್ಕ ಮೇಟಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿಗೆ ಭದ್ರತೆ ನೀಡಿವೆ. ಹೀಗಾಗಿ ಜನಪರ ಸರ್ಕಾರವನ್ನು ಬೆಂಬಲಿಸುವುದು ನಮ್ಮ ಕರ್ತವ್ಯ ಎಂದರು.

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ಮುಖಂಡರು, ದೇಶದ ಸಾಲದ ಹೊರೆ ಹೆಚ್ಚಿಸಿರುವ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಬಾಗಲಕೋಟೆ ಉಪಚುನಾವಣೆ: ಮೇಟಿ-ಚರಂತಿಮಠಗೆ ರಾಜಕೀಯ ಏಳು-ಬೀಳಿನ ಪ್ರತಿಷ್ಠೆ

ಈ ಪ್ರಚಾರ ಸಭೆಗಳಲ್ಲಿ ಸಚಿವರಾದ ಬಾಲಚಂದ್ರ ಜಾರಕಿಹೊಳಿ, ಮಲ್ಲಿಕಾರ್ಜುನ ಚರಂತಿಮಠ, ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹಾಗೂ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡು ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದರು.

ಸಿಎಂ ಸಿದ್ದರಾಮಯ್ಯ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಮಹಿಳೆಯರು ಆರತಿ ಬೆಳಗುವ ಮೂಲಕ ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಹಲವಾರು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ, ಅಭ್ಯರ್ಥಿ ಉಮೇಶ ಮೇಟಿ ಹಾಗೂ ಪ್ರಮುಖ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ: ಪಿಎಂಎಫ್‌ಎಂಇ ಯೋಜನೆಯಡಿ ಸಹಾಯಧನ

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ(PMFME) ಯೋಜನೆಯಡಿ ಹೊಸ ಆಹಾರ...

ಬಾಗಲಕೋಟೆ | 3 ತಿಂಗಳಲ್ಲಿ 12,234 ಹೆಸರು ಗಾಯಬ್: ಎಸ್‌ಐಆರ್ ಸುತ್ತ ಸಂಶಯದ ಹುತ್ತ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)...

ಬಾಗಲಕೋಟೆ ಜಿಲ್ಲೆಯಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ : ಡಿಸಿ ಸಂಗಪ್ಪ

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು...

ಬಾಗಲಕೋಟೆ ಜಿಲ್ಲಾದ್ಯಂತ ಮೈ ಭಾರತ ಯುವ ನೋಂದಣಿ ಅಭಿಯಾನ: ಡಿಸಿ ಸಂಗಪ್ಪ

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮಹತ್ವಾಕಾಂಕ್ಷಿ ಯೋಜನೆಯಾದ...