ಬಾಗಲಕೋಟೆ ಉಪ ಚುನಾವಣೆ | ತುರುಸಿನ ಸೆಣಸಾಟದಲ್ಲಿ ಗೆಲುವಿನ ದಡ ಸೇರುವವರಾರು?

Date:

ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದೆ. ಕೇವಲ ಒಂದು ವಾರ ಕಾಲಾವಕಾಶ ಉಳಿದಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ಪ್ರಚಾರದ ಅಬ್ಬರ ತೀವ್ರಗೊಂಡಿದೆ. ಅಭ್ಯರ್ಥಿಗಳಿಬ್ಬರೂ ನಾ ಮುಂದು ತಾ ಮುಂದು ಎಂದು ಒಬ್ಬರಿಗಿಂತ ಇನ್ನೊಬ್ಬರು ಮತದಾರರ ಮನವೊಲಿಕೆಗೆ ಪ್ರಯತ್ನಿಸುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಇಬ್ಬರಿಗೂ 50-50 ಅವಕಾಶ ಇರುವಂತೆ ಕಾಣಿಸುತ್ತಿದೆ.

- Advertisement -

ಮುಂದಿನ ನಾಲ್ಕಾರು ದಿನಗಳಲ್ಲಿ ಈಗಿರುವ 50-50 ಪರಿಸ್ಥಿತಿಯಲ್ಲಾಗುವ ಏರುಪೇರು ಚುನಾವಣೆಯ ಫಲಿತಾಂಶ ಬರೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ರಾಜ್ಯ ಸರ್ಕಾರದ ಅನೇಕ ಸಚಿವರು, ಶಾಸಕರು, ಮಾಜಿಗಳು ಬಾಗಲಕೋಟೆಯಲ್ಲೇ ಬೀಡು ಬಿಟ್ಟು ಪ್ರಚಾರ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಹಂತದಲ್ಲಿ ಎರಡು ದಿನ ಪ್ರಚಾರ ಮಾಡಿ ಹೋಗಿದ್ದಾರೆ. ಮತ್ತೆ ಶುಕ್ರವಾರದಿಂದ ಎರಡು ದಿನ ಠಿಕಾಣಿ ಹಾಕಲಿದ್ದಾರೆ. ಸಿಎಂ ಪ್ರಚಾರ ಮಾಡುವ ಕಡೆಗಳಲ್ಲಿ ಟೆಂಪಲ್ ರನ್ ಮೂಲಕ ಹಿಂದುತ್ವದ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ಎಲ್ಲ ಕಡೆಗಳಲ್ಲಿ ಸಿಎಂ ಭಾವನಾತ್ಮಕವಾಗಿ ಭಾಷಣ ಮಾಡುತ್ತಿದ್ದಾರೆ. “ಇಲ್ಲಿ ನಾನೇ ಅಭ್ಯರ್ಥಿ ಎಂದು ಭಾವಿಸಿ ಕಾಂಗ್ರೆಸ್ ಗೆ ಮತ ಹಾಕಿ, ಉಮೇಶ್ ಮೇಟಿ ಶಾಸಕರಾದರೆ ನೀವು ಅವರನ್ನು ಅಡುಗೆ ಮನೆವರೆಗೆ ಹೋಗಿ ಭೇಟಿಯಾಗಿ ಕೆಲಸ ಮಾಡಿಸಿಕೊಳ್ಳಬಹುದು. ಆ ಬಿಜೆಪಿಯ ಚರಂತಿಮಠ ಶಾಸಕರಾದರೆ ನಿಮಗೆ ಅವರನ್ನು ಮನೆಗೆ ಹೋಗಿ ಭೇಟಿಯಾಗಲು ಸಾಧ್ಯವೇ?” ಎಂದು ಸಾರ್ವಜನಿಕರನ್ನು ಕೇಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ, ಡಿಸಿಎಂ ಡಿ.ಕೆ.ಶಿವಕುಮಾರ್ ಕ್ಷೇತ್ರದಲ್ಲಿ ಪ್ರಚಾರ ಮಾಡಿ ಹೋಗಿದ್ದಾರೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಯಾಚನೆಯಲ್ಲಿ ನಿರತರಾಗಿದ್ದಾರೆ. ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರ ಮತಗಳನ್ನು ಸೆಳೆಯಲು ಶಿವಾನಂದ ಪಾಟೀಲ, ಎಂ.ಬಿ.ಪಾಟೀಲ, ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ ಅವರನ್ನು ಕಾಂಗ್ರೆಸ್ ಸರಿಯಾಗಿ ಬಳಸಿಕೊಳ್ಳುತ್ತಿದೆ. ಯಾವುದೇ ಜಾತಿಯ ಮತಗಳು ತಮ್ಮ ಪಕ್ಷದ ಕೈತಪ್ಪಿ ಹೋಗದಂತೆ ಬೇಲಿ ಹಾಕಲು ಕಾಂಗ್ರೆಸ್ ಯೋಜನೆ ರೂಪಿಸಿದೆ. ಕಾಂಗ್ರೆಸ್ ಪಕ್ಷದ ಎಲ್ಲ ಜಾತಿಗಳ ಸಚಿವರು ಶಾಸಕರು ತಮ್ಮ ಜಾತಿಯ ಜನರ ಏರಿಯಾಗಳಲ್ಲಿ ಸಂಚರಿಸಿ ಮತಗಳನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವುದೇ ಇದಕ್ಕೆ ಸಾಕ್ಷಿ.

WhatsApp Image 2026 04 02 at 4.56.00 PM

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಪ್ರಚಾರ ಮಾಡಿ ಹೋಗಿದ್ದಾರೆ. ಎಂಪಿಗಳಾದ ಗೋವಿಂದ ಕಾರಜೋಳ, ಪಿ.ಸಿ.ಗದ್ದಿಗೌಡರ, ನಾರಾಯಣಸಾ ಭಾಂಡಗೆ ಪ್ರತಿ ದಿನ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಪಕ್ಷ ನಿಷ್ಠೆ ತೋರಿಸಲು ಚರಂತಿಮಠ ಅವರ ಪರವಾಗಿ ಸಾಕಷ್ಟು ಶ್ರಮಿಸುತ್ತಿದ್ದಾರೆ.

ಕಾಂಗ್ರೆಸ್ ಪರವಾಗಿ ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ ಕ್ಷೇತ್ರದಲ್ಲೇ ಬೀಡು ಬಿಟ್ಟಿರುವುದಕ್ಕೆ ಪ್ರತಿ ತಂತ್ರವಾಗಿ ಮಾಜಿ ಸಚಿವ ಶ್ರೀರಾಮುಲು, ರಾಜುಗೌಡ ಅವರನ್ನು ಕರೆಸಿ ಬಿಜೆಪಿ ಅಭ್ಯರ್ಥಿ ಪರವಾಗಿ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ಮಾಡಿಸಲಾಗುತ್ತಿದೆ. ಬಾಗಲಕೋಟೆ ಮೂಲದವರೇ ಆದ ಮಾಜಿ ಸಚಿವ ಅರವಿಂದ ಲಿಂಬಾವಳಿ ಬಿಜೆಪಿ ಪರ ಪ್ರಚಾರದಲ್ಲಿದ್ದಾರೆ. ಮಹಿಳಾ ಮತದಾರರನ್ನು ಸೆಳೆಯಲು ತೇಜಸ್ವಿನಿ ಅನಂತಕುಮಾರ್ ಆಗಮಿಸಿದ್ದಾರೆ. ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಕರೆಸಿ ಪ್ರಚಾರ ಮಾಡಿಸಿ ಹಿಂದುತ್ವದ ಗುಂಗಿನಲ್ಲಿರುವ ಯುವ ಮತದಾರರ ಮನಸ್ಸನ್ನು ಬಿಜೆಪಿ ಪರವಾಗಿ ಗಟ್ಟಿ ಮಾಡಲು ಪ್ರಯತ್ನಿಸಲಾಗುತ್ತಿದೆ.

ಜೆಡಿಎಸ್ ನಾಯಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬರಲಿದ್ದಾರೆ. ಹೀಗೆ ಎರಡೂ ಪಕ್ಷಗಳು ಮತಬೇಟೆಗಾಗಿ ತಮ್ಮ ಬತ್ತಳಿಕೆಯಲ್ಲಿರುವ ಎಲ್ಲ ಬಾಣಗಳನ್ನು ಬಿಡುತ್ತಿವೆ. ಮತದಾರರ ಮನವೊಲಿಸಿಕೊಳ್ಳಲು ಎರಡೂ ಪಕ್ಷಗಳು ಬೇರೆ ಬೇರೆ ರೀತಿಯ ಮೋಡಿ ಆಟ ಆಡುತ್ತಿವೆ. ತಮ್ಮ ತಮ್ಮ ಬುಟ್ಟಿಗಳಲ್ಲಿರುವ ಸಣ್ಣ ದೊಡ್ಡ ಹಾವುಗಳನ್ನು ಮತದಾರರ ಮುಂದೆ ಬಿಟ್ಟು ಹಾವುಗಾರರ ಆಟ ಆಡುತ್ತಿವೆ.

ಇವೆಲ್ಲ ತಂತ್ರಗಳು ಮತದಾರರ ಮೇಲೆ ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತವೆ ಎಂಬುದನ್ನು ಈಗಲೇ ನಿರ್ಧರಿಸಲಾಗದು. ಮಂತ್ರಕ್ಕೆ ಮಾವಿನಕಾಯಿ ಉದುರುವುದಿಲ್ಲ, ಭಾಷಣ ಕೇಳಿದ ಮಾತ್ರಕ್ಕೆ ಮತಗಳು ಬರುವುದಿಲ್ಲ ಎಂಬ ಕಟು ಸತ್ಯ ಎರಡೂ ಪಕ್ಷಗಳ ನಾಯಕರಿಗೆ ಗೊತ್ತಿದೆ. ದ.ರಾ.ಬೇಂದ್ರೆ ಅವರ ಕವನದ ಸಾಲುಗಳಂತೆ ಅಂತಿಮವಾಗಿ ಕುರುಡು ಕಾಂಚಾಣ ಕುಣಿಯುತ್ತಲಿತ್ತು ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ ಎಂಬ ರೀತಿಯಲ್ಲಿ ಚುನಾವಣೆ ನಡೆದರೆ ಆಶ್ಚರ್ಯ ಪಡುವಂತಿಲ್ಲ. ಹಣದ ಥೈಲಿಗಳ ಓಡಾಟ ನಾಳೆಯಿಂದ ಆರಂಭವಾಗುವ ಸೂಚನೆಗಳು ಕಂಡು ಬರುತ್ತಿವೆ.

ಇದನ್ನೂ ಓದಿ: ಬಾಗಲಕೋಟೆ | ಖುರ್ಚಿ ಜಪ ಬಿಟ್ಟು ಬೀದಿಗಿಳಿದರೆ ಅಭಿವೃದ್ಧಿ ಕಾಣುತ್ತದೆ: ಸಿಎಂಗೆ ಚರಂತಿಮಠ ಟಾಂಗ್

ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಕಟ್ಟೆಯ ಕಲ್ಲು ಮರಳಿ ಕಟ್ಟೆಗೆ ಹೊಂದಿಕೊಂಡಂತಾಗುತ್ತದೆ ಅಷ್ಟೇ. ರಾಜ್ಯ ರಾಜಕೀಯದ ಮೇಲೆ ಅದರಿಂದ ಏನೂ ಪರಿಣಾಮವಾಗುವುದಿಲ್ಲ. ಒಂದು ವೇಳೆ ಬಿಜೆಪಿ ಗೆದ್ದರೆ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಈ ಅರಿವು ಎರಡೂ ಪಕ್ಷಗಳ ನಾಯಕರಿಗೆ ಇರುವುದರಿಂದಲೇ ಚುನಾವಣೆ ಪ್ರಚಾರದಲ್ಲಿ ಎರಡೂ ಪಕ್ಷಗಳ ಎಲ್ಲ ಶ್ರೇಣಿಯ ನಾಯಕರು ಬ್ಯುಸಿಯಾಗಿ ಬೆವರು ಸುರಿಸುತ್ತಿದ್ದಾರೆ.

IMG 20260325 WA0017
ಮುತ್ತು ನಾಯ್ಕರ
+ posts

ಹಿರಿಯ ಪತ್ರಕರ್ತರು, ಬಾಗಲಕೋಟೆ

ಪೋಸ್ಟ್ ಹಂಚಿಕೊಳ್ಳಿ:

ಮುತ್ತು ನಾಯ್ಕರ
ಮುತ್ತು ನಾಯ್ಕರ
ಹಿರಿಯ ಪತ್ರಕರ್ತರು, ಬಾಗಲಕೋಟೆ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ತೋಟಗಾರಿಕೆ ವಿವಿಯಲ್ಲಿ ಪೂಜೆ-ಹೋಮ ಆಯೋಜನೆ; ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪ!

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ತೋ.ವಿ.ವಿ) ಕುಲಪತಿಗಳ ವಸತಿಗೃಹದಲ್ಲಿ ಧಾರ್ಮಿಕ ಪೂಜಾ...

ಬಾಗಲಕೋಟೆ | ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ: ಪಿಎಂಎಫ್‌ಎಂಇ ಯೋಜನೆಯಡಿ ಸಹಾಯಧನ

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ(PMFME) ಯೋಜನೆಯಡಿ ಹೊಸ ಆಹಾರ...

ಬಾಗಲಕೋಟೆ | 3 ತಿಂಗಳಲ್ಲಿ 12,234 ಹೆಸರು ಗಾಯಬ್: ಎಸ್‌ಐಆರ್ ಸುತ್ತ ಸಂಶಯದ ಹುತ್ತ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)...

ಬಾಗಲಕೋಟೆ ಜಿಲ್ಲೆಯಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ : ಡಿಸಿ ಸಂಗಪ್ಪ

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು...