ಬಾಗಲಕೋಟೆ | ಏ.23 & 24ರಂದು CET ಪರೀಕ್ಷೆ; 21 ಕೇಂದ್ರಗಳು ಸಜ್ಜು

Date:

ಜಿಲ್ಲೆಯ ಬಾಗಲಕೋಟೆ ಮತ್ತು ಜಮಖಂಡಿ ನಗರಗಳಲ್ಲಿ ಏಪ್ರಿಲ್ 23 ಮತ್ತು 24 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಯಲಿದ್ದು, ಪರೀಕ್ಷೆಯನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಾಗಲಕೋಟೆ ಎಡಿಸಿ ಅಶೋಕ ತೇಲಿ ತಿಳಿಸಿದರು.

- Advertisement -

ಶನಿವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪದೋಷಗಳಿಲ್ಲದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಜಿಲ್ಲೆಯಲ್ಲಿ ಒಟ್ಟು 21 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಒಟ್ಟು 9,800 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾಗಲಕೋಟೆ ನಗರದ 13 ಕೇಂದ್ರಗಳಲ್ಲಿ 5,553 ವಿದ್ಯಾರ್ಥಿಗಳು ಹಾಗೂ ಜಮಖಂಡಿ ನಗರದ 8 ಕೇಂದ್ರಗಳಲ್ಲಿ 4,247 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಯ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಸಲುವಾಗಿ ಪ್ರತಿ ಕೇಂದ್ರದಲ್ಲಿ ಫ್ರಿಸ್ಕಿಂಗ್ (ತಪಾಸಣೆ) ಮತ್ತು ಫೇಸ್ ರೆಕಗ್ನಿಶನ್ (ಮುಖ ಗುರುತಿಸುವಿಕೆ) ತಂತ್ರಜ್ಞಾನದ ಸೌಲಭ್ಯವನ್ನು ಕಡ್ಡಾಯಗೊಳಿಸಲಾಗಿದೆ.

WhatsApp Image 2026 04 18 at 1.06.51 PM

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರಗಳನ್ನು ಕಟ್ಟಿಕೊಂಡು ಬರುವಂತಿಲ್ಲ. ಪ್ರತಿ ಪರೀಕ್ಷಾ ಕೊಠಡಿಯಲ್ಲೂ ಗೋಡೆ ಗಡಿಯಾರಗಳನ್ನು ಅಳವಡಿಸಲಾಗುವುದು. ಅಲ್ಲದೆ, ಪರೀಕ್ಷಾ ಕರ್ತವ್ಯಕ್ಕೆ ವಿಜ್ಞಾನ ವಿಷಯದ ಉಪನ್ಯಾಸಕರನ್ನು ಹೊರತುಪಡಿಸಿ ಇತರೆ ವಿಷಯದ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಮತ್ತು ಪ್ರತಿ 24 ವಿದ್ಯಾರ್ಥಿಗಳಿಗೆ ಓರ್ವ ಮೇಲ್ವಿಚಾರಕರನ್ನು ನಿಯೋಜಿಸಲು ಸೂಚನೆ ನೀಡಿದರು.

ಇದನ್ನೂ ಓದಿ: ಬಾಗಲಕೋಟೆ | ಡಾ. ಬಿ ಆರ್‌ ಅಂಬೇಡ್ಕರ್ ಸಮಾನತೆಯ ಹರಿಕಾರ: ದಮ್ಮ ಪಾಲ ಬಂತೇಜಿ

ಪರೀಕ್ಷಾ ಕೊಠಡಿಗೆ ಮೊಬೈಲ್ ಫೋನ್, ಕ್ಯಾಲ್ಕುಲೇಟರ್, ಬ್ಲೂಟೂತ್ ಸಾಧನಗಳು, ಎಲೆಕ್ಟ್ರಾನಿಕ್ ವಸ್ತುಗಳು, ಪಠ್ಯ ಸಾಮಗ್ರಿ, ಜಾಮಿಟ್ರಿ ಬಾಕ್ಸ್ ಹಾಗೂ ಯಾವುದೇ ಲೋಹದ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಹೊರತುಪಡಿಸಿ ಉಳಿದ ಯಾವುದೇ ಆಭರಣಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದ ಜೊತೆಗೆ ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕೆಂದು ಸಭೆಯಲ್ಲಿ ತಿಳಿಸಲಾಯಿತು.

ಪರೀಕ್ಷಾ ವೇಳಾಪಟ್ಟಿ: ಪರೀಕ್ಷೆಗಳು ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ನಡೆಯಲಿವೆ. ಏಪ್ರಿಲ್ 23 ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆಗಳು ಜರುಗಲಿವೆ. ಏಪ್ರಿಲ್ 24 ರಂದು ಬೆಳಿಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯಲಿವೆ ಎಂದು ವೇಳಾಪಟ್ಟಿಯಲ್ಲಿ ವಿವರಿಸಲಾಗಿದೆ. ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಉಪ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...

CJP ನಾಯಕರ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರ ಮನವಿ; ಮ್ಯಾಜಿಸ್ಟ್ರೇಟ್ ಮುಂದೆ ಹಾಜರು

CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಸೋಮವಾರ...