ಬಾಗಲಕೋಟೆ | ದ್ವಿತೀಯ ಪಿಯುಸಿ ಸಾಧಕರಿಗೆ ಜಿಲ್ಲಾಡಳಿತದ ಗೌರವ

Date:

ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿಗಳು ಸಾಧಿಸಿರುವ ಉತ್ತಮ ಫಲಿತಾಂಶ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಕಠಿಣ ಪರಿಶ್ರಮ ಹಾಗೂ ಶಿಸ್ತುಬದ್ದ ಅಧ್ಯಯನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.

- Advertisement -

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಸತಿ ಕಾಲೇಜು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿಜ್ಞಾನ ವಿಭಾಗದಲ್ಲಿ ಬಾಗಲಕೋಟೆ ತಾಲೂಕಿನಲ್ಲಿ ವಿದ್ಯಾರ್ಥಿಗಳಾದ ಭೀಮಪ್ಪ ಬಿರ್ಲಿ, ಹರೀಶ ಬಾಲರಡ್ಡಿ, ಸಂಗಮೇಶ ಪಟ್ಟಣದ ಹೆಚ್ಚು ಅಂಕ ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ದೇವಮ್ಮ ಯಡಹಳ್ಳಿ, ಶ್ವೇತಾ ಹೊರಕೇರಿ, ವಾಣಿಜ್ಯ ವಿಭಾಗದಲ್ಲಿ ಸಂಗೀತಾ ಗಡದಾರ, ಲಕ್ಷ್ಮಿ ಭೂಮಾರ, ತೇಜಸ್ವಿನಿ ದೊರೆಗೊಳ ಉತ್ತಮ ಅಂಕ ಪಡೆದುಕೊಂಡಿದ್ದಾರೆ.

ಜಿ.ಪಂ ಸಿ ಇ ಒ ಶಶಿಧರ ಕುರೇರ, ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ, “ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಸರ್ಕಾರ ನೀಡುತ್ತಿರುವ ಸೌಲಭ್ಯಗಳ ಸದುಪಯೋಗ ಪಡಿಸಿಕೊಂಡು ಇನ್ನಷ್ಟು ಉತ್ತಮ ಸಾಧನೆ ಮಾಡಬೇಕು” ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಬಾಗಲಕೋಟೆ | ಡಾ. ಬಿ ಆರ್‌ ಅಂಬೇಡ್ಕರ್ ಸಮಾನತೆಯ ಹರಿಕಾರ: ದಮ್ಮ ಪಾಲ ಬಂತೇಜಿ

ಈ ವೇಳೆ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...