ಬಾಗಲಕೋಟೆ | ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕ: ಸೀತಾಲಕ್ಷ್ಮಿ

Date:

ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿವೆ ಎಂದು ಜಾಗೃತ ಕರ್ನಾಟಕ ರಾಜ್ಯ ಮುಖಂಡರಾದ ಸೀತಾಲಕ್ಷ್ಮಿ ಹೇಳಿದರು.

- Advertisement -

ಬಾಗಲಕೋಟೆ ನವನಗರದ ಕಲಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾರಂಟಿ ಯೋಜನೆಗಳಿಂದ ರಾಜ್ಯವು ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಇದಕ್ಕೆ ಉದಾಹರಣೆ ನಮ್ಮ ರಾಜ್ಯದ ಜಿಡಿಪಿ ಸಾಕ್ಷಿಯಾಗಿದೆ. ಈ ಯೋಜನೆಗಳನ್ನು ಮೊದಲು ತಂದಿದ್ದು ತಮಿಳುನಾಡು ಸರ್ಕಾರ. ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ. ಈ ಯೋಜನಗಳನ್ನು ಆರ್ಥಿಕವಾಗಿ ಹಿಂದುಳಿದ, ಬಡ ಕಾರ್ಮಿಕರಿಗೆ ಅನುಕೂಲವಾಗಲೆಂದು ತಂದಿದ್ದಾರೆ ಎಂದರು.

ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷ ಎಚ್ ಎಮ್ ರೇವಣ್ಣ ಮಾತನಾಡಿ, “ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಒಟ್ಟು ₹1.19ಲಕ್ಷ ಕೋಟಿಯನ್ನು ಡಿಬಿಟಿ ಮೂಲಕ ನೇರವಾಗಿ ಮನೆಯ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ’ ಎಂದರು.ಯಾರ ಮಧ್ಯಸ್ಥಿಕೆ ಬಾಗಿಲಿಗೆ ಇಲ್ಲದೇ ಅರ್ಹ ಫಲಾನುಭವಿಗಳ ಮನೆ ಗ್ಯಾರಂಟಿ ಯೋಜನೆಗಳ ಲಾಭ ಮುಟ್ಟಿಸುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ” ಎಂದರು.

ಗ್ಯಾರಂಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಮಾತನಾಡಿ, “ಗ್ಯಾರಂಟಿ ಯೋಜನೆಗಳಿಂದ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ. ಈ ಯೋಜನೆಗಳಿಂದ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕು ಸಾಗಿಸಲು ಸಾಧ್ಯವಾಗಿದ್ದು, ಅವರ ಜೀವನದ ಗುಣಮಟ್ಟ ಸುಧಾರಿಸಿದೆ” ಎಂದು ಹೇಳಿದರು.

ಬೀಳಗಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿ, “ಗ್ಯಾರಂಟಿ ಯೋಜನೆಗಳು ಬಡವರಿಗೆ ಆರ್ಥಿಕ ಚೈತನ್ಯ ನೀಡಿದ್ದು, ಇಡೀ ದೇಶದಲ್ಲಿ ಕರ್ನಾಟಕ ಸರ್ಕಾರದ ಮಾದರಿಯನ್ನು ಅನುಸರಿಸಲಾಗುತ್ತಿದೆ. ಪ್ರತಿ ಕುಟುಂಬಕ್ಕೆ ₹5 ಸಾವಿರ ಜಮೆ ಆಗುತ್ತಿದೆ. 5 ವರ್ಷದಲ್ಲಿ ₹3 ಲಕ್ಷ ನೀಡಲಾಗುತ್ತಿದೆ” ಎಂದರು.

ಇದನ್ನೂ ಓದಿ: ಬಾಗಲಕೋಟೆ | ಶಿವಾಜಿ ಮಹಾರಾಜರ ಮೆರವಣಿಗೆಯಲ್ಲಿ ಕಲ್ಲು ತೂರಾಟ; ಜಿಲ್ಲಾ ಕಾಂಗ್ರೆಸ್ ವಿಷಾದ

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅನೀಲ ಕುಮಾರ ದಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಲಕ್ಷ್ಮಿ ಮೇಟಿ ಅವರು ಯೋಜನೆಯಿಂದಾದ ಪ್ರಯೋಜನದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಅಧ್ಯಕ್ಷ ಅಬ್ದುಲರಜಾಕ ಬೇನೂರ, ಜಿಲ್ಲಾಧಿಕಾರಿ ಸಂಗಪ್ಪ, ಸಿಇಒ ಶಶಿಧರ ಕುರೇರ, ಉಪ ಕಾರ್ಯದರ್ಶಿ ಎನ್. ವೈ.ಬಸರಿಗಿಡದ ಸೇರಿದಂತೆ ತಾಲ್ಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ತೋಟಗಾರಿಕೆ ವಿವಿಯಲ್ಲಿ ಪೂಜೆ-ಹೋಮ ಆಯೋಜನೆ; ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪ!

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ತೋ.ವಿ.ವಿ) ಕುಲಪತಿಗಳ ವಸತಿಗೃಹದಲ್ಲಿ ಧಾರ್ಮಿಕ ಪೂಜಾ...

ಬಾಗಲಕೋಟೆ | ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ: ಪಿಎಂಎಫ್‌ಎಂಇ ಯೋಜನೆಯಡಿ ಸಹಾಯಧನ

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ(PMFME) ಯೋಜನೆಯಡಿ ಹೊಸ ಆಹಾರ...

ಬಾಗಲಕೋಟೆ | 3 ತಿಂಗಳಲ್ಲಿ 12,234 ಹೆಸರು ಗಾಯಬ್: ಎಸ್‌ಐಆರ್ ಸುತ್ತ ಸಂಶಯದ ಹುತ್ತ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)...

ಬಾಗಲಕೋಟೆ ಜಿಲ್ಲೆಯಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ : ಡಿಸಿ ಸಂಗಪ್ಪ

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು...