ಬಾಗಲಕೋಟೆ | ವಿಬಿ-ಜಿ ರಾಮ್‌ಜಿ ವಿರೋಧಿಸಿ ಗ್ರಾಮೀಣ ಕಾರ್ಮಿಕರ ಮೌನ ಪ್ರತಿಭಟನೆ

Date:

ಗ್ರಾಮೀಣ ಕೂಲಿಕಾರ ಕಾರ್ಮಿಕರ ಸಂಘಟನೆ ಬಾಗಲಕೋಟೆ ಜಿಲ್ಲಾ ಸಮಿತಿಯಿಂದ ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

- Advertisement -

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕಾಗಿದ್ದ ಮನರೇಗಾ ಕಾನೂನನ್ನು ರದ್ದುಗೊಳಿಸಿ ಉದ್ಯೋಗವನ್ನು ಕೇಂದ್ರ ಸರ್ಕಾರದ ಮರ್ಜಿಗೆ ಒಳಪಡಿಸುವ ಹೊಸ ವಿಬಿ ಜಿ ರಾಮ್‌ಜಿ ಕಾನೂನು ಕಾರ್ಮಿಕರನ್ನು ಗುಲಾಮರನ್ನಾಗಿಸುವ ಅಪಾಯಕಾರಿ ಕ್ರಮವಾಗಿದ್ದು, ಇದಕ್ಕೆ ಮನರೇಗಾ ಕಾರ್ಮಿಕರು ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕನಿಷ್ಠ ವೇತನದ ಹಕ್ಕನ್ನು ಬದಿಗೆ ಸರಿಸಿ, ಕೇಂದ್ರ ಸರ್ಕಾರವೇ ವೇತನ ನಿಗದಿಪಡಿಸುವ ವ್ಯವಸ್ಥೆ ಮೂಲಕ ವಲಸೆಯನ್ನು ಹೆಚ್ಚಿಸಿ, ಕಾರ್ಮಿಕರನ್ನು ಗುತ್ತಿಗೆದಾರರಿಗೆ ಅಗ್ಗದ ಕೂಲಿಗೆ ಪೂರೈಸುವ ಈ ಕಾನೂನನ್ನು ನಾವು ತಿರಸ್ಕರಿಸುತ್ತೇವೆ ಎಂದು ಒತ್ತಾಯಿಸಿದರು. ಈಗಾಗಲೇ ಜನವರಿ 26ರಂದು ನಡೆದ ಗ್ರಾಮಸಭೆಯಲ್ಲಿ ಹೊಸ ಕಾನೂನಿಗೆ ವಿರೋಧ ವ್ಯಕ್ತಪಡಿಸಿ ಸರ್ವಾನುಮತದಿಂದ ಠರಾವು ಪಾಸು ಮಾಡಲಾಗಿದೆ ಎಂದರು.

ಇದನ್ನೂ ಓದಿ: ಬಾಗಲಕೋಟೆ | ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ

ಬೇಡಿಕೆ ಆಧಾರಿತ, ಸಾರ್ವತ್ರಿಕ ಮತ್ತು ಉದ್ಯೋಗದ ಹಕ್ಕನ್ನು ಖಾತ್ರಿಪಡಿಸುವ ಮನರೇಗಾ ಕಾನೂನನ್ನು ಮರುಸ್ಥಾಪಿಸಬೇಕು ಹಾಗೂ ವಿಬಿ ಗ್ರಾಮ್ ಜಿ ಕಾನೂನನ್ನು ತಕ್ಷಣ ಹಿಂಪಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಗಾಂಧಿ ಹುತಾತ್ಮರಾದ ದಿನದಂದು ಗಾಂಧೀಜಿಯ ಆಶಯಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ ಮೌನ ಪ್ರತಿಭಟನೆ ನಡೆಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಪ್ರಮುಖರಾದ ಶಂಕರ್ ಹೂಗಾರ, ಮಹಾಂತೇಶ ಹೊಸಮನಿ, ಬಸವರಾಜ ದೊಡ್ಡಮನಿ, ರೇಖಾ ಬಾದಾಮಿ, ಶಿಲ್ಪಾ ಮುಧೋಳ, ಸಕ್ಕುಬಾಯಿ, ಸವಿತಾ, ಶಾರದಾ, ಸೈರಾಬಾನು, ವಿಜಯಲಕ್ಷ್ಮಿ, ಯಮನೂರ, ರಾಜ್ಯ ಮಹಿಳಾ ಒಕ್ಕೂಟದ ರೇಖಾ ತೊಗುಣಸಿ, ರೇಣುಕಾ, ಮಹಾದೇವಿ, ಪರಶುರಾಮ, ಯಲ್ಲಮ್ಮ, ರೇಣುಕಾ, ಯಮನವ್ವ ಗುಳೇದಗುಡ್ಡ, ಬೋರಮ್ಮ ಸೇರಿದಂತೆ ಅನೇಕ ಕಾರ್ಮಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ: ಪಿಎಂಎಫ್‌ಎಂಇ ಯೋಜನೆಯಡಿ ಸಹಾಯಧನ

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ(PMFME) ಯೋಜನೆಯಡಿ ಹೊಸ ಆಹಾರ...

ಬಾಗಲಕೋಟೆ | 3 ತಿಂಗಳಲ್ಲಿ 12,234 ಹೆಸರು ಗಾಯಬ್: ಎಸ್‌ಐಆರ್ ಸುತ್ತ ಸಂಶಯದ ಹುತ್ತ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)...

ಬಾಗಲಕೋಟೆ ಜಿಲ್ಲೆಯಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ : ಡಿಸಿ ಸಂಗಪ್ಪ

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು...

ಬಾಗಲಕೋಟೆ ಜಿಲ್ಲಾದ್ಯಂತ ಮೈ ಭಾರತ ಯುವ ನೋಂದಣಿ ಅಭಿಯಾನ: ಡಿಸಿ ಸಂಗಪ್ಪ

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮಹತ್ವಾಕಾಂಕ್ಷಿ ಯೋಜನೆಯಾದ...