ಬಾಗಲಕೋಟೆ | ಇಳಕಲ್‌ನಲ್ಲಿ ನ.1ರಂದು ʼಯುವ ಸಾಂಸ್ಕೃತಿಕ ಉತ್ಸವʼ

Date:

ಯುವಜನರಲ್ಲಿ ನೈತಿಕ ಮೌಲ್ಯಗಳು, ಸಾಮಾಜಿಕ ಜಾಗೃತಿ, ಸೌಹಾರ್ದತೆ ಹಾಗೂ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸುವ ಉದ್ದೇಶದಿಂದ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ (SYM) ಕರ್ನಾಟಕದ ಇಳಕಲ್ ಘಟಕದ ವತಿಯಿಂದ ನವೆಂಬರ್ 1ರಂದು ‘ಯುವ ಸಾಂಸ್ಕೃತಿಕ ಉತ್ಸವ-2026’ ಆಯೋಜಿಸಲಾಗಿದೆ.

- Advertisement -

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಅಂಜುಮನ್-ಎ-ಇಸ್ಲಾಂ ಮೈದಾನದಲ್ಲಿ ಭಾನುವಾರ ಸಂಜೆ 6.30ಕ್ಕೆ ನಡೆಯಲಿರುವ ಈ ಉತ್ಸವದಲ್ಲಿ ದೇಶದ ಖ್ಯಾತ ಗಾಯಕ ಹಾಗೂ ಸಂಗೀತ ಕಲಾವಿದ ಡಾ. ಹೈದರ್ ಸೈಫ್ ಅವರು ವಿಶೇಷ ಆಕರ್ಷಣೆಯಾಗಲಿದ್ದಾರೆ. ಕರ್ನಾಟಕ ಉರ್ದು ಅಕಾಡೆಮಿ ಅಧ್ಯಕ್ಷ ಮೊಹಮ್ಮದ್ ಅಲಿ ಖಾಝಿ ಅವರು ಗಣ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಇದರೊಂದಿಗೆ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕದ ರಾಜ್ಯಾಧ್ಯಕ್ಷ ಡಾ. ನಸೀಮ್ ಅಹಮದ್, ಬಾಗಲಕೋಟೆಯ ಖಾರಿ ಸಮಿವುಲ್ಲಾ ಖಾದ್ರಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸ್ಥಳೀಯ ಗಣ್ಯರು, ಯುವಜನರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಯುವ ಪ್ರತಿಭೆಗಳಿಗೆ ಸಾಂಸ್ಕೃತಿಕ ವೇದಿಕೆ*ಇಂದಿನ ಯುವಜನತೆಯಲ್ಲಿ ಸಾಮಾಜಿಕ ಜವಾಬ್ದಾರಿ, ಉತ್ತಮ ವ್ಯಕ್ತಿತ್ವ, ಸೌಹಾರ್ದತೆ ಹಾಗೂ ಸಮಾಜಮುಖಿ ಚಿಂತನೆಗಳನ್ನು ಬೆಳೆಸುವುದರ ಜೊತೆಗೆ ಯುವ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಉತ್ಸವದ ಪ್ರಮುಖ ಆಶಯವಾಗಿದೆ. ಸಾಂಸ್ಕೃತಿಕ ಮತ್ತು ರಚನಾತ್ಮಕ ಚಟುವಟಿಕೆಗಳ ಮೂಲಕ ಯುವಶಕ್ತಿಯನ್ನು ಸಕಾರಾತ್ಮಕ ಕಾರ್ಯಗಳತ್ತ ಮುನ್ನಡೆಸುವ ಉದ್ದೇಶವನ್ನು ಸಂಘಟನೆ ಹೊಂದಿದೆ.

ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಇಳಕಲ್ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಯುವಕರು, ವಿದ್ಯಾರ್ಥಿಗಳು, ಮಹಿಳೆಯರು, ಬುದ್ಧಿಜೀವಿಗಳು, ಸಾಹಿತ್ಯ ಹಾಗೂ ಸಾಂಸ್ಕೃತಿಕ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ | ಎರಡು ಎಕರೆ ಜಮೀನಿಗಾಗಿ ಅತ್ತಿಗೆ ಮೇಲೆ ಬುಲೆರೊ ಹಾಯಿಸಿ ಕೊಲೆ ಯತ್ನ!

ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮುರ್ತಝಾ ಕಾಕ್ಬಾಲ್, ಇಳಕಲ್ ಘಟಕದ ಅಧ್ಯಕ್ಷ ಮೊಹಮ್ಮದ್ ಸಿರಾಜ್ ಹುಣಚಗಿ, ಕಾರ್ಯದರ್ಶಿ ಮುಝಮಿಲ್ ಹಕ್ಕಿ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡಿಗರಿಗೆ ಉದ್ಯೋಗ ತಾರತಮ್ಯ: ಖಾಸಗಿ ಸಂಸ್ಥೆಗಳಿಗೆ ಸಿಎಂ ಎಚ್ಚರಿಕೆ, ಕನ್ನಡಪರ ಸಂಘಟನೆಗಳಿಗೆ ಶಾಂತಿ ಕಾಪಾಡಲು ಮನವಿ

ಐಟಿ-ಬಿಟಿ ಕಂಪನಿಗಳಲ್ಲಿ ನೇಮಕಾತಿ ವೇಳೆ ಸ್ಥಳೀಯ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಲಾಗುತ್ತಿದೆ...

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು ಮುಂದಾಗಿದ್ದೇಕೆ ಬಿಜೆಪಿ?

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್...

ರಾಮ್‌ ಗೋಪಾಲ ವರ್ಮಾಗೆ ₹29.67 ಕೋಟಿ ರಿಕವರಿ ನೋಟಿಸ್!

ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ‘ಎಕ್ಲಟಾಂಟ್ ಫಿಲ್ಮ್ಸ್ ಪ್ರೈವೇಟ್ ಲಿಮಿಟೆಡ್’...

ಗಾಯಕ ದಿಲ್ಜಿತ್ ಬಳಿ ಕ್ಷಮೆಯಾಚಿಸಿದ ಅಭಿಜೀತ್ ದೀಪ್ಕೆ!

NEET ಪ್ರಶ್ನೆಪತ್ರಿಕೆ ಸೋರಿಕೆ ಕುರಿತಾದ ವಿದ್ಯಾರ್ಥಿ ಪ್ರತಿಭಟನೆಗಳ ಸಂದರ್ಭದಲ್ಲಿ ಗಾಯಕ ದಿಲ್ಜಿತ್...