ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

Date:

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ ವ್ಯವಸ್ಥೆಗೆ ಒಪ್ಪಿಸುವ ಸರ್ಕಾರದ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸೆಂಟ್ರಲ್ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೊಳಿಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಬಾಗಲಕೋಟೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ನೂರಾರು ಬಿಸಿಯೂಟ ನೌಕರರು ಮೆರವಣಿಗೆಯಲ್ಲಿ ಪಾಲ್ಗೊಂಡು ಜಿಲ್ಲಾಡಳಿತ ಭವನದವರೆಗೆ ತೆರಳಿ ಸರ್ಕಾರದ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಾಲೆಗಳಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಅಡುಗೆ ವ್ಯವಸ್ಥೆಯನ್ನು ಬದಿಗೊತ್ತಿ ಕೇಂದ್ರೀಕೃತ ಅಡುಗೆ ಘಟಕಗಳ ಮೂಲಕ ಊಟ ಪೂರೈಸುವ ಪ್ರಯತ್ನ ಮಕ್ಕಳ ಹಿತಾಸಕ್ತಿ ಮತ್ತು ನೌಕರರ ಬದುಕಿನ ಮೇಲೆ ಪರಿಣಾಮ ಬೀರಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಶಾಲಾ ಅಡುಗೆ ವ್ಯವಸ್ಥೆ ಬದಲಿಸುವ ಅಗತ್ಯವೇನಿದೆ?ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಶಾಲೆಗಳಿಗೆ ಅಡುಗೆ ಕೊಠಡಿ, ಅಡುಗೆ ಪಾತ್ರೆಗಳು, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿವೆ. ಮಧ್ಯಾಹ್ನದ ಬಿಸಿಯೂಟ ಯೋಜನೆಯ ಮೇಲ್ವಿಚಾರಣೆಗಾಗಿ ಪ್ರತ್ಯೇಕ ನಿರ್ದೇಶನಾಲಯವನ್ನೂ ಸ್ಥಾಪಿಸಲಾಗಿದೆ. ಇಷ್ಟೆಲ್ಲ ವ್ಯವಸ್ಥೆಗಳನ್ನು ರೂಪಿಸಿದ ಬಳಿಕ ಮತ್ತೆ ಸೆಂಟ್ರಲ್ ಕ್ಲಸ್ಟರ್ ಕಿಚನ್ ಹೆಸರಿನಲ್ಲಿ ಹೊಸ ವ್ಯವಸ್ಥೆ ಜಾರಿಗೆ ತರಲು ಮುಂದಾಗಿರುವುದು ಸಮಂಜಸವಲ್ಲ ಎಂದು ನೌಕರರು ಪ್ರಶ್ನಿಸಿದರು.

ಕೇಂದ್ರೀಕೃತ ಅಡುಗೆ ವ್ಯವಸ್ಥೆ ಜಾರಿಯಾದರೆ ಶಾಲೆಗಳಲ್ಲಿ ಸ್ಥಳೀಯವಾಗಿ ಅಡುಗೆ ತಯಾರಿಸುವ ಪದ್ಧತಿ ದುರ್ಬಲಗೊಳ್ಳಲಿದೆ. ಈ ಯೋಜನೆ ಮುಂದಿನ ದಿನಗಳಲ್ಲಿ ಧಾರ್ಮಿಕ ಸಂಸ್ಥೆಗಳು, ಜಾತಿ ಆಧಾರಿತ ಸಂಘಟನೆಗಳು ಹಾಗೂ ಖಾಸಗಿ ಸಂಸ್ಥೆಗಳ ಪಾಲಾಗುವ ಸಾಧ್ಯತೆಯೂ ಇದೆ. ಇದರಿಂದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಲ್ಲಿನ ಸಮಾನತೆಯ ಆಶಯಕ್ಕೆ ಧಕ್ಕೆಯಾಗಬಹುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಮಕ್ಕಳಿಗೆ ಶಾಲೆಯಲ್ಲಿಯೇ ಆಹಾರ ತಯಾರಿಸಿ ನೀಡುವ ಪ್ರಸ್ತುತ ವ್ಯವಸ್ಥೆಯನ್ನು ಮುಂದುವರಿಸಬೇಕು. ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆಯಿಂದ ಬಿಸಿಯೂಟ ನೌಕರರ ಉದ್ಯೋಗ ಭದ್ರತೆಗೂ ಧಕ್ಕೆಯಾಗುವ ಆತಂಕವಿದ್ದು, ಸರ್ಕಾರ ಯಾವುದೇ ಕಾರಣಕ್ಕೂ ಈ ಪದ್ಧತಿಯನ್ನು ಜಾರಿಗೊಳಿಸಬಾರದು. ಕೂಡಲೇ ಯೋಜನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಸ್. ಕಲ್ಲುಡಿ, ಕಾರ್ಯದರ್ಶಿ ಎಚ್.ವೈ. ಚಲವಾದಿ, ಸುನಂದಾ ಮಾಪಗಾರ, ಸುರೇಖಾ ಪ್ರಧಾನಿ, ಮಾಲಾ ನಾಗರಾಳ, ಗೀತಾ ಟೆಂಗಿನಕಾಯಿ, ಶಾರದಾ ಗೋನಾಳ, ಕಸ್ತೂರಿ ಗಂಗೋಚಿ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ಬಿಸಿಯೂಟ ನೌಕರರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀವು ಆ ಕುರ್ಚಿಗೆ ಅರ್ಹರಲ್ಲ: ಸುಪ್ರೀಂನಲ್ಲಿ ಸಿಜೆಐ ವಿರುದ್ಧ ವಕೀಲರ ಆಕ್ರೋಶ; ಲೈವ್ ಪ್ರಸಾರ ಕಟ್

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಅತ್ಯಂತ ಅಸಾಧಾರಣ ಮತ್ತು ಗಂಭೀರ ಬೆಳವಣಿಗೆಯೊಂದು ನಡೆದಿದೆ....

ಮಂಗಳೂರು | ದ.ಕ. ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ನವೆಂಬರ್‌ 18ರಂದು ಮಂಗಳೂರಿನ ಶ್ರೀ ಕುದ್ಮಲ್‌ ರಂಗರಾವ್‌ ಪುರಭವನದಲ್ಲಿ ಕರ್ನಾಟಕ ಸಾಹಿತ್ಯ...

ದಕ್ಷಿಣ ಕನ್ನಡ | ನವೆಂಬರ್‌ 22ರಿಂದ ಜಿಲ್ಲಾ ಮಟ್ಟದ ಯುವಜನೋತ್ಸವ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನವೆಂಬರ್ 22ರಂದು...

ಕುಟುಂಬದ ಬಗ್ಗೆ ಹಬ್ಬಿರುವ ‘ಅವಾಸ್ತವಿಕ’ ಕಥೆಗಳಿಗೆ ಉತ್ತರಿಸಲು ಆತ್ಮಚರಿತ್ರೆ ಬರೆದೆ: ಸೋನಿಯಾ ಗಾಂಧಿ

ತಮ್ಮ ಕುಟುಂಬದ ಬಗ್ಗೆ ಹಲವಾರು 'ಅವಾಸ್ತವಿಕ' ಮತ್ತು ಸತ್ಯಕ್ಕೆ ದೂರವಾದ ಕಥೆಗಳನ್ನು...