ʻಬಾಗಲಕೋಟೆ ಬರಪೀಡಿತ ಜಿಲ್ಲೆʼ ಎಂದು ಘೋಷಿಸಲು ಭಾರತೀಯ ಕಿಸಾನ್‌ ಸಂಘ ಆಗ್ರಹ

Date:

ಬಾಗಲಕೋಟೆ ಜಿಲ್ಲೆಯ ಬಾದಾಮಿ, ಹುನಗುಂದ, ಮುಧೋಳ, ತೇರದಾಳ ಹಾಗೂ ರಬಕವಿ–ಬನಹಟ್ಟಿ ತಾಲೂಕುಗಳು ಸೇರಿದಂತೆ ಇಡೀ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಭಾರತೀಯ ಕಿಸಾನ್‌ ಸಂಘ ಕರ್ನಾಟಕ ಪ್ರದೇಶ, ಉತ್ತರ ಪ್ರಾಂತದ ಬಾಗಲಕೋಟೆ ಜಿಲ್ಲಾ ಘಟಕ ಆಗ್ರಹಿಸಿದೆ.

- Advertisement -

ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದೆ. ಬೆಳೆ ನಷ್ಟ, ಹೆಚ್ಚುತ್ತಿರುವ ಕೃಷಿ ವೆಚ್ಚ, ಸಾಲದ ಹೊರೆ ಹಾಗೂ ನೀರಿನ ಸಮಸ್ಯೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ, ಜಿಲ್ಲಾಧಿಕಾರಿ ಸಂಗಪ್ಪ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಗಳಿಗೆ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಜೋಳ, ಮೆಕ್ಕೆಜೋಳ, ತೊಗರಿ, ಹೆಸರು, ಶೇಂಗಾ, ಸೂರ್ಯಕಾಂತಿ, ಕಬ್ಬು ಸೇರಿದಂತೆ ವಿವಿಧ ಬೆಳೆಗಳ ಇಳುವರಿ ಮೇಲೆ ಗಂಭೀರ ಪರಿಣಾಮ ಬೀರಿದೆ. ರೈತರು ಈಗಾಗಲೇ ಬೆಳೆ ನಷ್ಟದ ಜೊತೆಗೆ ಕೃಷಿ ವೆಚ್ಚ ಮತ್ತು ಸಾಲದ ಹೊರೆಯಿಂದ ತತ್ತರಿಸಿದ್ದಾರೆ. ಹೀಗಾಗಿ ಸರ್ಕಾರ ಕೇವಲ ಕಚೇರಿ ದಾಖಲೆಗಳನ್ನು ಆಧರಿಸದೆ ಗ್ರಾಮವಾರು ಹಾಗೂ ಜಮೀನುವಾರು ವೈಜ್ಞಾನಿಕ ಬೆಳೆ ಸಮೀಕ್ಷೆ ನಡೆಸಿ ನೈಜ ಬೆಳೆ ನಷ್ಟವನ್ನು ಗುರುತಿಸಬೇಕು ಎಂದು ಸಂಘ ಒತ್ತಾಯಿಸಿದೆ.

“ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ಅರ್ಹ ರೈತರಿಗೆ ಕೂಡಲೇ ಬೆಳೆ ಪರಿಹಾರ ನೀಡಬೇಕು. ಬಾಕಿ ಇರುವ ಬೆಳೆ ವಿಮೆ ಪರಿಹಾರವನ್ನು ತ್ವರಿತವಾಗಿ ಪಾವತಿಸಬೇಕು. ರೈತರ ಕೃಷಿ ಸಾಲದ ಮರುಪಾವತಿಗೆ ಸೂಕ್ತ ಕಾಲಾವಕಾಶ ಕಲ್ಪಿಸಬೇಕು. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವು ಒದಗಿಸಬೇಕು” ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಅಲ್ಲದೆ, ಕೆರೆ, ಹಳ್ಳ ಹಾಗೂ ಇತರ ಜಲಮೂಲಗಳನ್ನು ಪುನಶ್ಚೇತನಗೊಳಿಸಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸುವ ಮೂಲಕ ಭವಿಷ್ಯದಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.


ಇದೇ ವೇಳೆ ಕೃಷ್ಣಾ ನದಿಯ ನೀರನ್ನು ದಕ್ಷಿಣ ಕರ್ನಾಟಕಕ್ಕೆ ತಿರುಗಿಸುವ ಯಾವುದೇ ಯೋಜನೆಗೆ ಅವಕಾಶ ನೀಡಬಾರದು ಎಂದು ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. “ಕೃಷ್ಣಾ ನದಿ ಉತ್ತರ ಕರ್ನಾಟಕದ ಪ್ರಮುಖ ಜೀವನಾಡಿಯಾಗಿದ್ದು, ಈ ಭಾಗದ ಕೃಷಿ ಹಾಗೂ ಕುಡಿಯುವ ನೀರಿನ ಅಗತ್ಯತೆಗಳಿಗೆ ನದಿ ನೀರು ಅತ್ಯಂತ ಅವಶ್ಯಕವಾಗಿದೆ. ಆದ್ದರಿಂದ ಉತ್ತರ ಕರ್ನಾಟಕದ ನೀರಿನ ಹಕ್ಕು ಹಾಗೂ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸ್ಪಷ್ಟವಾದ ಗೆಜೆಟ್ ಅಧಿಸೂಚನೆ ಹೊರಡಿಸಬೇಕು” ಎಂದು ಸಂಘ ಒತ್ತಾಯಿಸಿದೆ.

“ರೈತರ ಸಮಸ್ಯೆಗಳನ್ನು ಸರ್ಕಾರ ಕೂಡಲೇ ಗಂಭೀರವಾಗಿ ಪರಿಗಣಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು” ಎಂದು ಸಂಘದ ಪದಾಧಿಕಾರಿಗಳು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ, ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ, ಜಿಲ್ಲಾ ಯುವ ಪ್ರಮುಖ ಕಿರಣ ಕುಲಕರ್ಣಿ, ಬಾದಾಮಿ ತಾಲೂಕು ಅಧ್ಯಕ್ಷ ರುದ್ರಗೌಡ ಪಾಟೀಲ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ ಮಂತ್ರಿ ಹಾಗೂ ರಮೇಶ ಸಾರವಾಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...