ಬೀಳಗಿ | ಅ.18ರಂದು ‘ಬಸವ-ಭೀಮ ಸಂಗಮ’ ಸಮಾವೇಶ

Date:

ಜಾತ್ಯತೀತ ಹಾಗೂ ಬಹುತ್ವದ ಕರ್ನಾಟಕದ ಸಂಕಲ್ಪದೊಂದಿಗೆ ಸರ್ವಜಾತಿ-ಸರ್ವಧರ್ಮ ಸಹೋದರತ್ವ ಸಾರುವ ‘ಬಸವ-ಭೀಮ ಸಂಗಮ’ ಸಮಾವೇಶವನ್ನು ಅ.18ರಂದು ಸಂಜೆ 5 ಗಂಟೆಗೆ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದೆ ಎಂದು ಸತ್ಯಶೋಧಕ ಸಂಘ ಕರ್ನಾಟಕದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ತಿಳಿಸಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಜಿಎಲ್‌ಬಿಸಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತ್ಯಶೋಧಕ ಸಂಘದ ಬೀಳಗಿ ಘಟಕದ ಆಶ್ರಯದಲ್ಲಿ ಸಮಾವೇಶ ನಡೆಯಲಿದ್ದು, ಜಾತಿ-ಧರ್ಮಗಳ ಗಡಿಗಳನ್ನು ಮೀರಿ ಸಮಾನತೆ, ಸಹೋದರತ್ವ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವುದು ಇದರ ಆಶಯವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಕಲ್ಮಠದ ಗುರುಪಾದ ಸ್ವಾಮೀಜಿ ಹಾಗೂ ಕರ್ನಾಟಕ ಮುಸ್ಲಿಂ ಯುನಿಟಿ ಅಧ್ಯಕ್ಷ ಮೌಲಾನಾ ದಾವೂದ ಖಾಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಚಿವರಾದ ಸತೀಶ ಜಾರಕಿಹೊಳಿ ಮತ್ತು ವಿಜಯಾನಂದ ಕಾಶಪ್ಪನವರ ಸಮಾವೇಶ ಉದ್ಘಾಟಿಸಲಿದ್ದು, ಶಾಸಕ ಜೆ.ಟಿ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಆಶಯ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಮಾಜಿ ಸಚಿವ ಎಸ್.ಆರ್.ಪಾಟೀಲ, ಉದ್ಯಮಿ ಬಸವಪ್ರಭು ಸರನಾಡಗೌಡರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹನಮಂತ ಕಾಖಂಡಕಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಯಮನಪ್ಪ ರೊಳ್ಳಿ, ಪಿಎಲ್‌ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಚಂದ್ರಶೇಖರ ಕೋಟಿ, ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಟಿ.ವೈ.ಜಾನಮಟ್ಟಿ, ಗಲಗಲಿ ಅಂಜುಮನ್ ಸಂಸ್ಥೆ ಅಧ್ಯಕ್ಷ ಹಾಜಿ ಅನ್ವರ ಮುಲ್ಲಾ, ಯಶಸ್ವಿನಿ ಮಹಿಳಾ ಬ್ಯಾಂಕ್ ಅಧ್ಯಕ್ಷೆ ಆಶಾ ಶಾಹೀರ ಬೀಳಗಿ ಹಾಗೂ ಗಲಗಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಬೂಸಾಬ ದಪೇದಾರ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಮುಖಂಡರಾದ ಬಸವರಾಜ ಹಳ್ಳದಮನಿ, ಪಡಿಯಪ್ಪ ಕಳ್ಳಿಮನಿ, ಸಿದ್ದು ಸಾರಾವರಿ, ಅನೀಲ ಗಚ್ಚಿನಮನಿ, ಸಿದ್ದು ಮಾದರ, ಚಿನ್ನಪ್ಪ ಬಂಡಿವಡ್ಡರ, ಕಾಶೀಮ ಗೋರೆ, ಶ್ರೀಶೈಲ ಅಂಟೀನ ಹಾಗೂ ಅರುಣ ಗರಸಂಗಿ ಆಗಮಿಸಲಿದ್ದಾರೆ. ರಾಷ್ಟ್ರೀಯ ಸೈಕ್ಲಿಂಗ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ ನಿತಿನ್ ಸಾರಾವರಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಎಚ್.ಡಿ.ಕಾಖಂಡಕಿ, ವೈ.ಸಿ.ರೊಳ್ಳಿ, ಬಸವರಾಜ ಹಳ್ಳದಮನಿ, ಕಾಶಿಮಲಿ ಗೋರೆ, ಸಿದ್ದು ಸಾರಾವರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೋಕರ್ಣ | ಹಾಪ್‌ಮೂನ್ ಬೀಚ್‌ನಲ್ಲಿ ಎರಡು ಬೋಟ್‌ಗಳಿಗೆ ಹಾನಿ: ₹1.80 ಲಕ್ಷ ನಷ್ಟ

ಗೋಕರ್ಣ: ಹಾಪ್‌ಮೂನ್ ಬೀಚ್‌ನ ದಡದಲ್ಲಿ ನಿಲ್ಲಿಸಿದ್ದ ಜಲಸಾಹಸ ಕ್ರೀಡೆಗಳಿಗೆ ಬಳಸುವ ಎರಡು...

ಕೊಪ್ಪಳ | ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಬೆಂಕಿ: ಕ್ರೀಡಾ ಸಾಮಗ್ರಿಗಳು ಭಸ್ಮ

ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಮುಂಜಾನೆ...

ಉಡುಪಿ | 11 ವರ್ಷವಾದರೂ ಪೂರ್ಣಗೊಳ್ಳದ ಕುಂದಾಪುರ ಯುಜಿಡಿ ಕಾಮಗಾರಿ: ಸಚಿವ ಬಾಲಕೃಷ್ಣ ಅಸಮಾಧಾನ

ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು ₹56.54 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಒಳಚರಂಡಿ...