ಬೀಳಗಿ | ಜಾತಿ ಗಣತಿ ಜಾರಿ, 2ಬಿ ಮೀಸಲಾತಿ ಮರುಸ್ಥಾಪನೆ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ

Date:

ಜಾತಿ ಗಣತಿ ಜಾರಿ, 2ಬಿ ಮೀಸಲಾತಿ ಮರುಸ್ಥಾಪನೆ ಸೇರಿದಂತೆ ಹಲವು ಬೇಡಿಕೆ ಈಡೇರಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬೀಳಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರ ನೇತೃತ್ವದೊಂದಿಗೆ ಪಟ್ಟಣದಲ್ಲಿ ಬೃಹತ್ ಕಾಲ್ನಡಿಗೆ ಪ್ರತಿಭಟನೆ ನಡೆಯಿತು.

- Advertisement -

ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ವಿವಿಧ ಸಮುದಾಯಗಳ ಮುಖಂಡರು, ಯುವಕರು, ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿ ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಸರ್ಕಾರವು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳನ್ನು ಸಮರ್ಪಕವಾಗಿ ರಕ್ಷಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿ, ಸಾಮಾಜಿಕ ನ್ಯಾಯದ ತತ್ವಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜಾತಿ ಸಮೀಕ್ಷೆ(ಜಾತಿ ಗಣತಿ) ವರದಿಯನ್ನು ಅನುಷ್ಠಾನಗೊಳಿಸುವುದು, ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ಮರುಸ್ಥಾಪಿಸುವುದು, ವಿವಿಧ ಇಲಾಖೆಗಳಲ್ಲಿನ ಖಾಲಿ ಸರ್ಕಾರಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವುದು, ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವುದು ಸೇರಿದಂತೆ ಶೋಷಿತ ಸಮುದಾಯಗಳ ಹಕ್ಕುಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಲ್ಡೋಟ ಕಂಪೆನಿ ತೊಲಗಿಸಿ ಆಂದೋಲನ: 261ನೇ ದಿನ ಪೂರ್ಣ

ಸಾಮಾಜಿಕ ನ್ಯಾಯದ ಪರ ಹೋರಾಟ ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಮುಂದುವರಿಯಲಿದ್ದು, ಜನರ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಶೀಘ್ರ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...