ಬೀಳಗಿ| ಅನಗವಾಡಿಗೆ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಲು ರೈತರ ಒತ್ತಾಯ

Date:

ಅನಗವಾಡಿ ಗ್ರಾಮದ ಕೆರೆಗೆ ಒಂದು ವಾರದೊಳಗೆ ನೀರು ತುಂಬಿಸುವುದು, ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವುದು ಹಾಗೂ ರೈತರಿಗಾಗಿ ಪ್ರತ್ಯೇಕ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ ಸಂಘದ ನೇತೃತ್ವದಲ್ಲಿ ರೈತರು ಬಾಗಲಕೋಟೆ ಜಿಲ್ಲೆಯ ಬೀಳಗಿ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ಅನಗವಾಡಿಯ 33 ಕೆ.ವಿ. ಸ್ಟೇಷನ್‌ನಿಂದ ಸುಮಾರು 15 ಗ್ರಾಮಗಳಿಗೆ ವಿದ್ಯುತ್ ಪೂರೈಕೆಯಾಗುತ್ತಿರುವುದರಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ದೊರೆಯುತ್ತಿಲ್ಲ. ಇದರಿಂದ ಬರಗಾಲದಲ್ಲಿ ಬೆಳೆ ಉಳಿಸಿಕೊಳ್ಳಲು ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

“ಅನಗವಾಡಿಗೆ 110 ಕೆ.ವಿ. ಸ್ಟೇಷನ್ ಮಂಜೂರು ಮಾಡುವವರೆಗೆ ಸುನಗ ಹಾಗೂ ತೋಳಮಟ್ಟಿ ಸ್ಟೇಷನ್‌ಗಳಿಂದ ಪರ್ಯಾಯ ವಿದ್ಯುತ್ ಪೂರೈಸಬೇಕು” ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯ ಬಳಿಕ ತಹಶೀಲ್ದಾರ ವಿನೋದ ಹತ್ತಳ್ಳಿ, ತಾಪಂ ಇಒ ಶ್ರೀನಿವಾಸ ಪಾಟೀಲ ಹಾಗೂ ಹೆಸ್ಕಾಂ ಅಧಿಕಾರಿ ಮಂಜುನಾಥ ಬೋಕೆಯವರಿಗೆ ಮನವಿ ಸಲ್ಲಿಸಲಾಯಿತು. ಸಮಸ್ಯೆ ಕುರಿತು ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆದು ಪರಿಹಾರ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಜಿಲ್ಲಾ ಅಧ್ಯಕ್ಷ ವಿರೂಪಾಕ್ಷ ಹಿರೇಮಠ, ಸುಬ್ಬರಾಯಗೌಡ ಪಾಟೀಲ, ಮಲ್ಲಪ್ಪ ಗಾಣಿಗೇರ,ಅಶೋಕ ಮಂತ್ರಿ, ಗುರುಪಾದಯ್ಯ ಕಂಬಿ, ಮಹಾರುದ್ರಯ್ಯ ಕಂಬಿ, ಶ್ರೀಶೈಲ ಉಣದ, ಮುತ್ತಣ್ಣ ಅಂಗಡಿ, ಮಲ್ಲಪ್ಪ ಮೇಟಿ, ಬಸಯ್ಯ ಮೂತಿಮಠ, ರುದ್ರಪ್ಪ ಮೇಟಿ, ಸೋಮು ಚೂರಿ ಬಸು ಚಬ್ಬಿ, ಮಹೇಶ ಅಂಗಡಿ, ಮಲ್ಲಪ್ಪ ಕುಟಕನಕೇರಿ, ಉಮೇಶ್ ಅಕ್ಕಿಮರಡಿ, ವಿಶ್ವನಾಥ ಪಾಟೀಲ, ನಾಗಪ್ಪ ಮೇತ್ರಿ, ಮಲ್ಲಪ್ಪ ಅಂಗಡಿ, ಚಿನ್ನಪ್ಪ ಹಂಚಿನಾಳ ಸೇರಿದಂತೆ ಅನೇಕ ರೈತರು ಹಾಗೂ ಗ್ರಾಮಸ್ಥರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಧಾರವಾಡ ಜಪಟ್ಟಣದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಇಂದು (ಸೆ.24)  ಮುಖ್ಯ...

ಧಾರವಾಡ | ಮಹಾತ್ಮಾ ಗಾಂಧೀಜಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೂಚನೆ

"ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ

ಹಟ್ಟಿ ಚಿನ್ನದ ಗಣಿ ಕಾರ್ಮಿಕರ ದೀರ್ಘಾವಧಿಯ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ...

ಹಾಸನ | ಅ. 29ರಿಂದ ನ. 11ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ

ಹಾಸನ ಜಿಲ್ಲೆಯಲ್ಲಿ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನ ಶುರುವಾಗಲಿದೆ. ಅಕ್ಟೋಬರ್...