ಬೀಳಗಿ |ಬೀಳಗಿಯಲ್ಲಿ ಜಾನಪದ ಸಂಭ್ರಮ: 20 ಚೌಡಕಿ ಗಾಯನ ತಂಡಗಳಿಂದ ಸಾಂಪ್ರದಾಯಿಕ ಹಾಡುಗಳ ಅನಾವರಣ

Date:

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ, ಲಿಂಗೈಕ್ಯ ಶಾಂತಾಬಾಯಿ ಶಂಭು ಗೋಳಿಪಲ್ಲೆ ಸ್ಮರಣಾರ್ಥ ಸ್ಥಾಪಿತ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಜಾನಪದ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.

- Advertisement -

ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಸುಮಾರು 20 ಚೌಡಕಿ ಗಾಯನ ತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾಂಪ್ರದಾಯಿಕ ಜಾನಪದ ಹಾಡುಗಳನ್ನು ಪ್ರಸ್ತುತಪಡಿಸಿದವು. ಗ್ರಾಮೀಣ ಬದುಕು, ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾಗಿರುವ ಜಾನಪದ ಗಾಯನದ ಮೂಲಕ ಕಲಾವಿದರು ಪ್ರೇಕ್ಷಕರ ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಂಗಣ್ಣ ಗೋಳಿಪಲ್ಲೆ ಮಾತನಾಡಿ, ಜಾನಪದ ಕಲೆಗಳು ನಮ್ಮ ಸಾಂಸ್ಕೃತಿಕ ಪರಂಪರೆಯ ಜೀವಾಳವಾಗಿವೆ. ಇಂತಹ ಕಲೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಈರಣ್ಣಗೌಡ ನ್ಯಾಮಗೌಡ ಮಾತನಾಡಿ, ಅಳಿವಿನಂಚಿನಲ್ಲಿರುವ ಜಾನಪದ ಕಲೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವುದು ಇಂತಹ ಸ್ಪರ್ಧೆಗಳ ಪ್ರಮುಖ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಕಾರ್ಯದರ್ಶಿ ಸಿ.ಎಸ್. ನಾಗನೂರ, ಐ.ಜಿ. ಪುರಾಣಿಕ, ಮೋಹನ ಜಾಧವ, ಆನಂದ ಇಂಗಳಗಾವಿ ಸೇರಿದಂತೆ ಹಲವು ಗಣ್ಯರು ಹಾಗೂ ಕಲಾಭಿಮಾನಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ...

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...