ಬೀಳಗಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ʼಶ್ರಮಿಕ ವಸತಿ ಶಾಲೆʼ ಮಂಜೂರು: 35 ಕೋಟಿ ರೂ. ಅನುದಾನ ಮೀಸಲು

Date:

ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ‘ಶ್ರಮಿಕ ವಸತಿ ಶಾಲೆ’ ನಿರ್ಮಾಣಕ್ಕೆ ಮುಂದಾಗಿದ್ದು, ಬೀಳಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುನಗ ಎಲ್‌ಟಿ2ನಲ್ಲಿ ಇದಕ್ಕಾಗಿ ಸ್ಥಳ ಗುರುತಿಸಲಾಗಿದೆ ಎಂದು ಶಾಸಕ ಜೆ ಟಿ ಪಾಟೀಲ ಹೇಳಿದರು.

- Advertisement -

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ತಾಲೂಕಿನ ಸುನಗ ಎಲ್‌ಟಿ2 ಗ್ರಾಮದಲ್ಲಿ ಏರ್ಪಡಿಸಿದ್ದ ಶ್ರಮಿಕ ವಸತಿ ಶಾಲೆಯ ಭೂಮಿ ಪೂಜಾ ಸಮಾರಂಭ ನೇರವೆರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

“ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಾದರಿಯಲ್ಲಿ ‘ಶ್ರಮಿಕ ವಸತಿ ಶಾಲೆ’ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಇದಕ್ಕೆ ಅಂದಾಜು ₹35 ಕೋಟಿ ಅನುದಾನವನ್ನು ಮಂಡಳಿ ಮೀಸಲಿಟ್ಟಿದ್ದು, 6ನೇ ತರಗತಿಯಿಂದ ಪಿಯುಸಿವರೆಗೆ ಉಚಿತ ಶಿಕ್ಷಣ ದೊರೆಯಲಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ” ಎಂದರು.

“ಪ್ರತಿ ತರಗತಿಯಲ್ಲಿ 50 ಮಂದಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗುತ್ತದೆ. ಪ್ರತಿ ವಸತಿ ಶಾಲೆಯಲ್ಲಿ ಅಂದಾಜು 300ರಿಂದ 350 ವಿದ್ಯಾರ್ಥಿಗಳು ವ್ಯಾಸಂಗ ಮಾಡಲಿದ್ದಾರೆ. ಇಷ್ಟು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶಾಲಾ ಕಟ್ಟಡ, ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತದೆ. ತರಗತಿ ಕೊಠಡಿ, ಪ್ರಯೋಗಾಲಯ, ಕ್ರೀಡಾಂಗಣ, ಗ್ರಂಥಾಲಯ, ಕಚೇರಿ, ಶಿಕ್ಷಕರಿಗೆ ಪ್ರತ್ಯೇಕ ವಸತಿ ಸಮುಚ್ಚಯ ಇರಲಿದೆ” ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಕೆಡಿಪಿ ಸದಸ್ಯ ಜಿ ಆರ್ ಪಾಟೀಲ, ಕಾರ್ಮಿಕ ಇಲಾಖೆ ಎಇಇ ಎಚ್ ಅರುಣಕುಮಾರ, ತಾಲೂಕು ಕಾರ್ಮಿಕ ನಿರೀಕ್ಷಕ ರಾಜಶೇಖರ ಕುರಡಿಕರ, ಕಾರ್ಮಿಕ ಇಲಾಖೆ ಕಾರ್ಯನಿರ್ವಾಹಕ ರವಿ ನಾಗನಗೌಡರ, ಪ್ರವೀಣ ಹಿರೇಮಠ, ಚಂದ್ರಶೇಖರ ಪಂಢರಿ, ರವಿ ಲಿಂಗಣ್ಣವರ, ಹನಮಂತ ದಳವಾಯಿ, ಬಸು ಮೇಟಿ, ಭೀಮಶಿ ಎರಡೆಮ್ಮಿ, ನಾರಾಯಣ ಕಂಬಾರ, ಶಂಕರ ಡಬರಿ ಇದ್ದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮೀಟರ್ ಬಡ್ಡಿ ದಂಧೆಗೆ ಬ್ರೇಕ್: ಕಿಂಗ್‌ಪಿನ್ ಜಮೀರ್ ಅಹ್ಮದ್ ಕೊಲೆ ಬಳಿಕ ಖಾಕಿ ಕಾರ್ಯಾಚರಣೆ ಚುರುಕು

ಯುಕೆಪಿ ಯೋಜನೆ ಪೂರ್ಣ: ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಯುಕೆಪಿ ಸಂತ್ರಸ್ತರಿಗೆ ಕೇವಲ ಭಾಷಣದಲ್ಲಿ ಭರವಸೆ ನೀಡಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಷ್ಟೇ ಸಾಲವಾದರೂ ಪರವಾಗಿಲ್ಲ, ಯೋಜನೆಯನ್ನು ಪೂರ್ಣಗೊಳಿಸಲು ದಾಪುಗಾಲು ಇಟ್ಟಿದೆ. ಕೇಂದ್ರ ಸರ್ಕಾರ ಅನುಮತಿ ನೀಡದಿದ್ದರೂ 75,000 ಎಕರೆ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ಯೋಜನೆಯನ್ನು ಪೂರ್ಣಗೊಳಿಸುವುದು ನಮ್ಮ ಸಂಕಲ್ಪ ಎಂದು ಶಾಸಕ ಜೆ ಟಿ ಪಾಟೀಲ ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

1984ರ ಸಿಖ್‌ ವಿರೋಧಿ ಹಿಂಸೆ ಐತಿಹಾಸಿಕ ದುರಂತ, ನಾಚಿಕೆಗೇಡಿನ ಅಧ್ಯಾಯ: ಸೋನಿಯಾ ಗಾಂಧಿ

ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಸರ್ಕಾರಗಳ ಅವಧಿಯಲ್ಲಿ ಹಲವು ವಿಚಾರಣಾ ಆಯೋಗಗಳನ್ನು ರಚಿಸಲಾಯಿತು....

ಬರ ಪರಿಹಾರ: ಅರ್ಹ ರೈತರಿಗೆ ಕನಿಷ್ಠ 5,000 ರೂ. ಇನ್‌ಪುಟ್ ಸಬ್ಸಿಡಿ ಖಾತರಿ; ವಿಪತ್ತು ನಿರ್ವಹಣೆ ಆಯುಕ್ತೆ ಸ್ಪಷ್ಟನೆ

2026ರ ಮುಂಗಾರು ಋತುವಿನ ಬರಗಾಲದಿಂದಾದ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರೈತರಿಗೆ ವಿತರಿಸಲಾಗುತ್ತಿರುವ...