ಬೀಳಗಿ | ಆಡಂಬರದ ಆಚರಣೆಗಳಿಗೆ ಕಡಿವಾಣ ಹಾಕಿ: ಡಾ. ಎಂ.ಆರ್ ದೇಸಾಯಿ ಸಲಹೆ

Date:

ನಾನು, ನನ್ನದು ಎಂಬ ಸೀಮಿತ ಚಿಂತನೆಯಿಂದ ಹೊರಬಂದು ದೇಶ ಮತ್ತು ಸಮಾಜದ ಹಿತದತ್ತ ಗಮನ ಹರಿಸುವ ಮನೋಭಾವ ಇತ್ತೀಚಿನ ದಿನಗಳಲ್ಲಿ ಕ್ಷೀಣಿಸುತ್ತಿರುವುದು ಆತಂಕಕಾರಿ ಬೆಳವಣಿಗ ಎಂದು ಹಿರಿಯ ಪರಿಸರ ತಜ್ಞ ಡಾ. ಎಂ.ಆರ್ ದೇಸಾಯಿ ಯಡಹಳ್ಳಿ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಬೀಳಗಿ ಸಮೀಪದ ಯಡಹಳ್ಳಿ ಗ್ರಾಮದಲ್ಲಿ ಅನಗತ್ಯ ಹಾಗೂ ಆಡಂಬರದ ಸಾಮಾಜಿಕ ಆಚರಣೆಗಳ ಕುರಿತು ಆಯೋಜಿಸಿದ್ದ ಚಿಂತನ ಸಭೆಯಲ್ಲಿ ಮಾತನಾಡಿ, “ಮದುವೆ ಆಹ್ವಾನ ಪತ್ರಿಕೆಗಳ ಹೆಸರಿನಲ್ಲಿ ಅಪಾರ ಪ್ರಮಾಣದ ಕಾಗದ ವ್ಯರ್ಥವಾಗುತ್ತಿದ್ದು, ಇದರಿಂದ ಅರಣ್ಯ ಸಂಪತ್ತು ಹಾನಿಯಾಗುತ್ತಿದೆ. ಮುದ್ರಿತ ಆಹ್ವಾನ ಪತ್ರಿಕೆಗಳ ಬದಲಿಗೆ ದೂರವಾಣಿ ಕರೆ ಅಥವಾ ವಾಟ್ಸಪ್ ಮೂಲಕ ಆಹ್ವಾನ ನೀಡಿದರೆ ಹಣ, ಸಮಯ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸಬಹುದು” ಎಂದು ಸಲಹೆ ನೀಡಿದರು.

- Advertisement -

ಡಾ. ಮಹಾಂತೇಶ ಬಿರಾದಾರ ಮಾತನಾಡಿ, “ಮದುವೆ, ನಿಶ್ಚಿತಾರ್ಥ, ಸೀಮಂತ, ಜನ್ಮದಿನ, ವಾರ್ಷಿಕೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಆಡಂಬರದ ಸ್ಪರ್ಧೆಯಾಗಿ ಪರಿಣಮಿಸಿದ್ದು, ಸಾಲ ಮಾಡಿಯಾದರೂ ವೈಭವದಿಂದ ಆಚರಿಸುವ ಮನೋಭಾವ ಸಮಾಜಕ್ಕೆ ಪಿಡುಗಾಗಿ ಪರಿಣಮಿಸಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಎಸ್.ಟಿ. ಪಾಟೀಲ ಯಡಹಳ್ಳಿ ಮಾತನಾಡಿ, “ಯಡಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಶ್ಚಿತಾರ್ಥ, ಶವಸಂಸ್ಕಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲು ಜಾಗೃತಿ ಮೂಡಿಸಲಾಗುತ್ತಿದ್ದು, ಉತ್ತಮ ಸ್ಪಂದನೆ ದೊರೆಯುತ್ತಿದೆ” ಎಂದು ತಿಳಿಸಿದರು.

ಬೀಳಗಿ ತಾಲೂಕಿನ ಕೊಲೂರ ಗ್ರಾಮದ ಶಿವಪ್ಪ ಸಂಗಪ್ಪ ತಿಪರೆಡ್ಡಿ ಹಾಗೂ ತಿಕೋಟಾ ತಾಲೂಕಿನ ಬರಟಗಿ ಗ್ರಾಮದ ಗುರುಪಾದಗೌಡ ದಾಶ್ಯಾಳ ಅವರು ಇನ್ನು ಮುಂದೆ ತಮ್ಮ ಕುಟುಂಬದ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸುವುದಾಗಿ ಘೋಷಿಸಿದರು.

ರಾಜ್ಯ ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ, ನ್ಯಾಯವಾದಿಗಳಾದ ಶ್ರೀಕಾಂತ ಶಿರಾಡೋಣ, ಎನ್.ಎಸ್. ಲೋಣಿ, ಶರಶ್ಚಂದ್ರ ಪಾಟೀಲ, ಲೋಕಾಯುಕ್ತ ಡಿಎಸ್ಪಿ ಬಸವರಾಜ ಯಲಿಗಾರ, ಸುರೇಶ ದೇಸಾಯಿ ಕಲಕೇರಿ, ಅದೃಶ್ಯಪ್ಪ ದೇಸಾಯಿ, ಪ್ರಕಾಶ ಪರನಾಕರ ಮತ್ತಿತರರು ದುಂದು ವೆಚ್ಚ, ಅನಗತ್ಯ ಆಚರಣೆ, ವಿವಾಹ ವಿಚ್ಛೇದನ, ವೃದ್ಧಾಪ್ಯದಲ್ಲಿನ ಪಾಲಕರ ನಿರ್ಲಕ್ಷ್ಯ ಸೇರಿದಂತೆ ವಿವಿಧ ಸಾಮಾಜಿಕ ಸಮಸ್ಯೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸಭೆಯ ಅಂತ್ಯದಲ್ಲಿ, ತಮ್ಮ ತಮ್ಮ ಸಮುದಾಯ ಹಾಗೂ ಪ್ರದೇಶಗಳಲ್ಲಿ ಸರಳ, ಮಿತವ್ಯಯದ ಕಾರ್ಯಕ್ರಮಗಳ ಕುರಿತು ಜನಜಾಗೃತಿ ಮೂಡಿಸಲು ಎಲ್ಲರೂ ಮುಂದಾಗುವಂತೆ ನಿರ್ಣಯ ಕೈಗೊಳ್ಳಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...