ಬಾಗಲಕೋಟೆ | ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ

Date:

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ‘ಒಳ್ಳೆಯ ದಿನಗಳು ಬರುತ್ತಿವೆ’ ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಕರ್ನಾಟಕ ರಾಜ್ಯ ಸಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಒತ್ತಾಯಿಸಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಕಾರ್ಮಿಕರು ಹೋರಾಟ ಮಾಡಿ ಗಳಿಸಿದ್ದ ಹಕ್ಕುಗಳು ಇಲ್ಲವಾಗುತ್ತಿವೆ. ಖಾಯಂ ಉದ್ಯೋಗಗಳು ತೀವ್ರವಾಗಿ ಕಡಿತವಾಗುತ್ತಿವೆ. ಹೊರ ಗುತ್ತಿಗೆ, ವಿವಿಧ ರೀತಿಯ ಗುತ್ತಿಗೆ ಕೆಲಸಗಳು, ನಿಗದಿತ ಅವಧಿಗೆ ಮಾತ್ರ ಉದ್ಯೋಗ, ಗೀಗ್ ಕೆಲಸ – ಇಂತಹ ಉದ್ಯೋಗಗಳೇ ಹೆಚ್ಚಾಗುತ್ತಿವೆ. ಸಾರ್ವಜನಿಕ ಉದ್ಯಮಗಳನ್ನು ಜನಹಿತಕ್ಕೆ ವಿರುದ್ಧವಾಗಿ ಖಾಸಗೀಕರಿಸಲಾಗುತ್ತಿದೆ. ದುಡಿಯುವ ಜನರ ವೇತನವು ಜೀವನವೆಚ್ಚಕ್ಕೆ ಹೋಲಿಸಿದರೆ ಕ್ಷೀಣಿಸುತ್ತಿದೆ. ಸೇವಾಭದ್ರತೆ ಮಾಯವಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜನರ ಬೆವರು ರಕ್ತದಿಂದ ನಿರ್ಮಿಸಿದ್ದ ವಿವಿಧ ಸಾರ್ವಜನಿಕ ಕ್ಷೇತ್ರದ ಆಸ್ತಿಯನ್ನು ಯಾವುದೇ ಹೂಡಿಕೆ ಮಾಡದ ದೈತ್ಯ ಕಾರ್ಪೊರೇಟ್ ಕಂಪನಿಗಳಿಗೆ ಹಸ್ತಾಂತರಿಸಲಾಗುತ್ತಿದೆ. ವಿಮಾನ ನಿಲ್ದಾಣಗಳು, ಹೆದ್ದಾರಿಗಳು, ಬಂದರುಗಳು, ರೈಲ್ವೆ ಹಳಿಗಳು- ನಿಲ್ದಾಣಗಳು ಹೀಗೆ ಎಲ್ಲವನ್ನೂ ಮಾಲೀಕರಿಗೆ ಒಪ್ಪಿಸಲಾಗುತ್ತಿದೆ. ಸರ್ಕಾರವು ರಾಷ್ಟ್ರೀಯ ನಗದೀಕರಣ ಪೈಪ್ ಲೈನ್ ಯೋಜನೆ ಜಾರಿ ಮಾಡಿ ದೇಶದ ಅಪಾರ ಸಂಪತ್ತನ್ನು ಸೃಷ್ಟಿಸುವ ಬೃಹತ್ ಉದ್ದಿಮೆಗಳನ್ನು ಅತ್ಯಂತ ಕಡಿಮೆ ಆದಾಯಕ್ಕೆ ಖಾಸಗಿಯವರಿಗೆ ಒತ್ತೆ ಇಡಲಾಗುತ್ತಿದೆ. ಸಾರ್ವಜನಿಕ ಬ್ಯಾಂಕ್‌ಗಳನ್ನು ವಿಲೀನಗೊಳಿಸುತ್ತಾ, ಖಾಸರ್ಗಿಕರಿಸಲು ಸಿದ್ಧತೆ ನಡೆಸಲಾಗುತ್ತಿದೆ. LIC, GIC ಗಳನ್ನು ಖಾಸಗೀಕರಿಸುವ ಪ್ರಯತ್ನ ನಡೆಸಲಾಗುತ್ತಿದೆ. ಇದು ಅತ್ಯಂತ ದುರದೃಷ್ಟಕರ ಬೆಳವಣಿಗೆ, ರಕ್ಷಣಾ ಉಪಕರಣಗಳನ್ನು ತಯಾರಿಸುವ 41 ಸಶಸ್ತ್ರ ಕಾರ್ಖಾನೆಗಳನ್ನು ಖಾಸಗೀಕರಣ ಪೂರ್ವದ ಪ್ರಕ್ರಿಯೆಯಾಗಿ 7 ನಿಗಮಗಳಾಗಿ ಪರಿವರ್ತಿಸಿದೆ. ಇದು ಗಂಭೀರ ಸ್ವರೂಪದ ದೇಶ ವಿರೋಧಿ ನಡೆಯಾಗಿದೆ” ಎಂದು ಕಿಡಿಕಾರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ವಿದೇಶಿ ಬಹುರಾಷ್ಟ್ರೀಯ ಕಂಪನಿಗಳ ಮರ್ಜಿಗೆ ಒಳಗಾಗಿ 12 ಗಂಟೆಗಳಿಗೆ ಹೆಚ್ಚಳ ಮಾಡಿವೆ. ಐಎಲ್ಪಿ 144 ನೇ ಸಮಾವೇಶದ ಪ್ರಕಾರ ಸರ್ಕಾರವು, ಕನಿಷ್ಟ ವರ್ಷಕ್ಕೆ ಒಂದು ಬಾರಿಯಾದರೂ ತ್ರಿಪಕ್ಷೀಯ 2015 ರಿಂದಲೂ ನಡೆಸೇ ಇಲ್ಲ. ಯಾವುದೇ ಚರ್ಚೆ, ಸಮಾಲೋಚನೆ ಇಲ್ಲದೇ ಎಲ್ಲಾ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ‘ಕಾರ್ಮಿಕ ಸಂಹಿತೆ’ ಗಳನ್ನು ಜಾರಿಗೆ ತಂದಿದೆ. ಕಾರ್ಮಿಕರ ದುಡಿಮೆಯ ಆರೋಗ್ಯ ಹಾಗೂ ಸುರಕ್ಷತೆಯನ್ನು ಖಾತರಿಪಡಿಸುವ ಬದಲಿಗೆ ಸರ್ಕಾರವು ಕೆಲಸದ ಸ್ಥಳಗಳನ್ನು ಪರಿಶೀಲಿಸುವ ಕಾರ್ಯದಿಂದ ದೂರ ಸರಿಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗ್ರಾಮೀಣ ಭಾಗದ ಕೃಷಿ ಕೂಲಿ ಕಾರ್ಮಿಕರ ಪರಿಸ್ಥಿತಿ ಶೋಚನೀಯವಾಗಿದೆ. ವರ್ಷಪೂರ್ತಿ ಕೆಲಸವಿಲ್ಲದೆ, ಆತಂತ್ರ ಬದುಕು ಸಾಗಿಸುತ್ತಿದ್ದಾರೆ. ಲಕ್ಷಾಂತರ ಮಹಿಳೆಯರೇ ಇರುವ ವಿವಿಧ ಯೋಜನೆಗಳಲ್ಲಿ ತೊಡಗಿರುವ ಸ್ಟೀಮ್ ಕಾರ್ಯಕರ್ತೆಯರನ್ನು ಎಲ್ಲಾ ಸರ್ಕಾರಗಳು ನಿರ್ಲಕ್ಷ ಮಾಡುತ್ತಿವೆ. ಪ್ರಸಕ್ತ ಕೇಂದ್ರ ಸರ್ಕಾರವು ಗ್ರಾಮೀಣ ಭಾಗದ ಜನರ ಪಾಲಿಗೆ ಸ್ವಲ್ಪವಾದರೂ ನೆರವಾಗುತ್ತಿದ್ದ ನರೇಗಾ ಯೋಜನೆ, ಐಸಿಡಿಎಸ್, ಎನ್‌ಹೆಚ್ ಎಂ. ಎಸ್‌.ಎಸ್‌.ಎ ಯೋಜನೆಗಳಿಗೆ ಅನುದಾನವನ್ನು ಕಡಿತಗೊಳಿಸುತ್ತ ಯೋಜನೆಗಳನ್ನು, ಇದರಲ್ಲಿ ತೊಡಗಿರುವ ಲಕ್ಷಾಂತರ ಕಾರ್ಯಕರ್ತರನ್ನು ಸೊರಗಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ಶೀಲಾ ಮೆಳ್ಳಿಗೆರಿ, ಲಕ್ಷ್ಮಿ ಜಾಧವ, ವಾಸಂತಿ ಪೂಜಾರಿ, ಮಂಜುಳಾ ಸಿಡ್ಲವಗೋಳ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...