ಬನಹಟ್ಟಿಯಲ್ಲೇ ಪ್ರಜಾಸೌಧ ನಿರ್ಮಿಸುವಂತೆ ಆಗ್ರಹ; ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ

Date:

ಕಳೆದ 24 ದಿನಗಳಿಂದ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಪ್ರಜಾಸೌಧ ನಿರ್ಮಿಸುವಂತೆ ಹೋರಾಟ ನಡೆಸುತ್ತಿದ್ದರೂ ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಿಲ್ಲ. ಜನಪ್ರತಿನಿಧಿಗಳೂ ಗಮನ ಹರಿಸಿಲ್ಲ. ಕೂಡಲೇ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೋರಾಟ ಸಮಿತಿ ಅಧ್ಯಕ್ಷ ರಾಜಶೇಖರ ಸೊರಗಾವಿ ಆಗ್ರಹಿಸಿದರು.

- Advertisement -

ಬನಹಟ್ಟಿಯಿಂದ ಬಾಗಲಕೋಟೆವರೆಗೆ ಪಾದಯಾತ್ರೆ ಮೂಲಕ ಜಿಲ್ಲಧಿಕಾರಿ ಕಚೇರಿ ಮುಂದುಗಡೆ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಮುಂದುವರಿದು ಪ್ರಜಾಸೌಧ ನಿರ್ಮಾಣದ ಆದೇಶದ ಪ್ರತಿ ಪಡೆದುಕೊಂಡೇ ಹಿಂದಿರುಗುವುದಾಗಿ ಪಟ್ಟು ಹಿಡಿದರು.ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕಳೆದ 24 ದಿನಗಳಿಂದ ಬನಹಟ್ಟಿಯಲ್ಲಿ ಹೋರಾಟ ನಡೆಸುತ್ತಿದ್ದರೂ ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಿಲ್ಲ. ಜನಪ್ರತಿನಿಧಿಗಳೂ ಗಮನ ಹರಿಸಿಲ್ಲ. ಕೂಡಲೇ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.ರಾಜೇಂದ್ರ ಭದ್ರನ್ನವರ ಮಾತನಾಡಿ, ‘ಬನಹಟ್ಟಿಯಲ್ಲಿ 3 ಎಕರೆ 25 ಗುಂಟೆ ಜಾಗದಲ್ಲಿ ಪ್ರಜಾಸೌಧ ನಿರ್ಮಾಣ ಮಾಡಬೇಕು. ಇದರಿಂದ ತಾಲ್ಲೂಕಿನ ಎಲ್ಲ ಜನರಿಗೂ ಅನುಕೂಲವಾಗಲಿದೆ’ ಎಂದು ಒತ್ತಾಯಿಸಿದರು.

ಶಿವಾನಂದ ಗಾಯಕವಾಡ ಮಾತನಾಡಿ, ‘ಇಷ್ಟು ದಿನ ಹೋರಾಟ ನಡೆಸಿದರೂ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿಲ್ಲ. ಅವರಿಗೆ ಅಲ್ಲಿಗೆ ಬರಲು ಬಿಡುವಿಲ್ಲವೇ? ಬನಹಟ್ಟಿಯ ಜನರೆಲ್ಲರೂ ಒಂದಾಗಲು ಜಿಲ್ಲಾಧಿಕಾರಿಯೇ ಕಾರಣರಾಗಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದ. ಪ್ರಜಾಸೌಧ ಪಡೆದುಕೊಂಡೇ ತೀರುತ್ತೇವೆ’ ಎಂದು ಹೇಳಿದರು.

ಘಟಪ್ರಭಾ ಎಡದಂಡೆ ಕಾಲುವೆ ಹೆಸರಿನಲ್ಲಿರುವ ಎಂಜಿನಿಯರಿಂಗ್ ಸಿಟಿ ಸರ್ವೆ ನಂಬರ್‌ನ 3 ಎಕರೆ 18 ಗುಂಟೆ ಜಮೀನನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸುವ ಪ್ರಸ್ತಾವವನ್ನು ರದ್ದುಪಡಿಸಿ, ಬನಹಟ್ಟಿಯ ಸಿಟಿಎನ್‌ ನಂ.8822ರಲ್ಲಿರುವ 3 ಎಕರೆ 25 ಗುಂಟೆ ಜಾಗದಲ್ಲಿಯೇ ಪ್ರಜಾಸೌಧ ನಿರ್ಮಿಸಬೇಕು ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಬನಹಟ್ಟಿ ತಾಲ್ಲೂಕಿನಲ್ಲಿ ಹೆಚ್ಚಿನ ಜನಸಂಖ್ಯೆ ಹೊಂದಿರುವ ಪ್ರಮುಖ ನಗರವಾಗಿದ್ದು, ಈಗಾಗಲೇ ನ್ಯಾಯಾಲಯದ ಸಂಕೀರ್ಣ, ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ, ಉಪಖಜಾನೆ, ಸಹಕಾರ ನೂಲಿನ ಗಿರಣಿ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳು ಇಲ್ಲಿವೆ. ಅಲ್ಲದೇ ಬನಹಟ್ಟಿ ಪ್ರಸಿದ್ಧ ಜವಳಿ ಕೇಂದ್ರವಾಗಿರುವುದರಿಂದ ಇಲ್ಲಿಯೇ ಪ್ರಜಾಸೌಧ ನಿರ್ಮಾಣ ಮಾಡುವುದು ಸೂಕ್ತ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಪ್ರಜಾಸೌಧ ನಿರ್ಮಾಣಕ್ಕೆ ಜಾಗ ನೀಡುವ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಈ ವೇಳೆ ಒಂದೇ ಆಕ್ಷೇಪಣೆ ಸಲ್ಲಿಕೆಯಾಗಿತ್ತು. ಅದನ್ನು ತಿರಸ್ಕರಿಸಿ ನಿರ್ಮಾಣಕ್ಕೆ ಅವಕಾಶ ನೀಡುವಲ್ಲಿ ವಿಳಂಬ ಮಾಡಿದ್ದರಿಂದ ಈಗಿನ ಗೊಂದಲ ಉಂಟಾಗಿದೆ. ಕೂಡಲೇ ಗೊಂದಲ ಬಗೆಹರಿಸಿ ಬನಹಟ್ಟಿಯಲ್ಲಿಯೇ ಪ್ರಜಾಸೌಧ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಾಳು ಹಿಪ್ಪರಗಿ, ಮಲ್ಲಿಕಾರ್ಜುನ ಬಾಣಕಾರ, ಶ್ರೀಶೈಲ ಯಾದವಾಡ, ಸೋಮನಾಥ ಗೊಂಬಿ, ಶಿವಾನಂದ ಕಾಗಿ, ಶಿವು ಗುಂಡಿ, ಹಣಮಂತ ಸವದಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...