ಬಾಗಲಕೋಟೆ ಜಿಲ್ಲೆಯಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ : ಡಿಸಿ ಸಂಗಪ್ಪ

Date:

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ‌ ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡಗಳ ವ್ಯಾಪ್ತಿಯಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

- Advertisement -

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಒಂದು ಸಂಘ, ಪ್ರತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 4 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತಿ ಪುರಸಭೆಯಲ್ಲಿ ಸರಾಸರಿ 6 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತಿ ನಗರಸಭೆಯಲ್ಲಿ ಸರಾಸರಿ 8 ಸಾವಿರ ಜನಸಂಖ್ಯೆಗೆ ಒಂದು ಸಂಘ ಸ್ಥಾಪಿಸಲಾಗುತ್ತಿದೆ. ಈ ಯೋಜನೆಯನ್ನು ಕ್ರೀಡಾ ಇಲಾಖೆಯು ಪಿಆರ್‌ಇಡಿ, ನಗರಾಭಿವೃದ್ದಿ, ಕಂದಾಯ ಹಾಗೂ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ತಳಮಟ್ಟದಲ್ಲಿ ಯುವಜನರ ಪಾಲ್ಗೊಳ್ಳುವಿಕೆಗೆ ವ್ಯವಸ್ಥಿತ ವೇದಿಕೆಗಳ ಕೊರತೆ ಇದ್ದು, ಗ್ರಾಮೀಣ ಮತ್ತು ನಗರದ ಯುವಜನತೆಯಲ್ಲಿ ಕ್ರೀಡೆ, ಫಿಟ್‌ನೆಸ್, ಆರೋಗ್ಯಕರ ಜೀವನಶೈಲಿ ಮತ್ತು ನಾಯಕತ್ವದ ಅವಕಾಶಗಳಲ್ಲಿನ ಅಡಚಣೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರತಿ ಗ್ರಾ.ಪಂ ಮತ್ತು ನಗರ ವಾರ್ಡ್‌ಗಳಲ್ಲಿ ಒಂದು ಸಾಂಸ್ಕೃತಿಕ ವೇದಿಕೆ ನಿರ್ಮಿಸಿ, ನಾಯಕತ್ವ ಜವಾಬ್ದಾರಿ ಹಾಗೂ ನಾಗರಿಕ ಪ್ರಜ್ಞೆಯನ್ನು ಬೆಳೆಸಬೇಕಾಗಿದೆ. ಸಶಕ್ತ ಯುವ ಜನತೆಯನ್ನೊಳಗೊಂಡ ಬಲಿಷ್ಠ ಸಮುದಾಯಗಳನ್ನು ಒಂದು ಗೂಡಿಸುವ ಉದ್ದೇಶ ಹೊಂದಿದೆ. ಸರ್ಕಾರದ ಮಹತ್ವದ ಯೋಜನೆ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಬೇಕಿದೆ” ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಮಾತನಾಡಿ‌, “ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಕನಿಷ್ಠ 100 ಮಂದಿ ಸದಸ್ಯರಿರಬೇಕು. ಸದಸ್ಯರು 16ರಿಂದ 35 ವರ್ಷದೊಳಗಿದ್ದು, ಬಿಜೆವಾಯ್‌ಎಸ್ ಪೋರ್ಟಲ್ ಅಥವಾ ಮೊಬೈಲ್ ಅಪ್ಲಿಕೇಷನ್ ಮೂಲಕ ಇಲ್ಲವೇ ಗ್ರಾ.ಪಂ, ನಗರ ಪ್ರದೇಶಗಳಲ್ಲಿ ಗ್ರಾಮ ಒನ್, ಕರ್ನಾಟಕ ಒನ್, ನಾಗರಿಕ ಸೇವಾ ಕೇಂದ್ರಗಳ ಸಹಾಯದಿಂದ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಯುವಕರು ಸಂಘಗಳ ರಚನೆಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಂಚಾಯತ ಅಭಿವೃದ್ದಿ ಅಧಿಕಾರಿ ಹಾಗೂ ನಗರ ಪ್ರದೇಶದಲ್ಲಿ ಮುಖ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ” ಎಂದು ತಿಳಿಸಿದರು.

“ಯೋಜನೆಯ ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಉಸ್ತುವಾರಿ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳ ಅಧ್ಯಕ್ಷೆಯಲ್ಲಿ ಕಾರ್ಯಕಾರಿ ಸಮಿತಿ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ಭಾರತ ಜೋಡೋ ಯುವ ಸಂಘಕ್ಕೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ವಾರ್ಷಿಕವಾಗಿ ಸರ್ಕಾರದಿಂದ‌ ಒಟ್ಟು 10 ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ‘ನಿನ್ನ ರೇಟ್ ಎಷ್ಟು?’ ಎಂದು ಬೆಂಗಳೂರಿನಲ್ಲಿ ಒಂಟಿ ಮಹಿಳೆಗೆ ಕಿರುಕುಳ: ಧೈರ್ಯ ಮೆರೆದ ಸಂತ್ರಸ್ತೆ, ಆರೋಪಿ ಬಂಧನ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪೂರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಜೀತ ಮನ್ನಿಕೇರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರೀತಿ, ಮೇರಾ ಯುವ ಭಾರತ ಬಾಗಲಕೋಟೆಯ ಜಿಲ್ಲಾ ಯುವ ಅಧಿಕಾರಿ ಅಶ್ವಿನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಅ. 31ರಂದು ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ...

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...