ಕೋಡಿಹಳ್ಳಿ ಚಂದ್ರಶೇಖರ್ ಬಂಧನ ಖಂಡಿಸಿ ಮುಧೋಳದಲ್ಲಿ ರೈತರ ಪ್ರತಿಭಟನೆ

Date:

ಕಳಸಾ–ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರೈತಪರ ಹೋರಾಟ ನಡೆಸಿದ್ದ ರಾಜ್ಯ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ರೈಲ್ವೆ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ‌ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ರೈತರು ಪ್ರತಿಭಟನೆ ನಡೆಸಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಘಟಕದ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಎದುರು ಜಮಾಯಿಸಿದ ರೈತರು, ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ರೈತರ ಹಕ್ಕು ಮತ್ತು ಕುಡಿಯುವ ನೀರಿನ ಪ್ರಶ್ನೆಗಾಗಿ ನಡೆದ ಹೋರಾಟವನ್ನು ಅಪರಾಧವೆಂದು ಪರಿಗಣಿಸಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬಳಿಕ ತಹಶೀಲ್ದಾರ್ ಇಂಡಿಕರ ಅವರ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಕಳಸಾ–ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ 2013ರಲ್ಲಿ ರೈತ ಪರವಾಗಿ ಕೋಡಿಹಳ್ಳಿ ಚಂದ್ರಶೇಖರ್ ಅವರು ರೈಲು ತಡೆ ಹೋರಾಟ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿಸಿದರು.

“ರೈತರ ಬದುಕು, ಕೃಷಿ ಹಾಗೂ ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆಗಾಗಿ ಹೋರಾಟ ನಡೆಸಿದ ವ್ಯಕ್ತಿಯ ವಿರುದ್ಧ ಹಳೆಯ ಪ್ರಕರಣಗಳನ್ನು ಮುಂದಿಟ್ಟುಕೊಂಡು ಬಂಧಿಸುವ ಕ್ರಮ ಸರಿಯಲ್ಲ. ಪ್ರಕರಣಗಳನ್ನು ಕೂಡಲೇ ಹಿಂಪಡೆದು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಿಡುಗಡೆಗೊಳಿಸಬೇಕು” ಎಂದು ಅವರು ಒತ್ತಾಯಿಸಿದರು.

ಕಳಸಾ–ಬಂಡೂರಿ ಯೋಜನೆ ಜಾರಿಗಾಗಿ ನಡೆದ ಹೋರಾಟದ ಹಿನ್ನೆಲೆ, ರೈತ ಸಂಘಟನೆಗಳ ಮೇಲಿನ ಪ್ರಕರಣಗಳು ಹಾಗೂ ರೈತರ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಗಂಗಾಧರ ಮೇಟಿ, ಸುಭಾಸ ಶಿರಬೂರ, ಮಂಜುನಾಥ ಅರಕೇರೆ, ಯಂಕಣ್ಣ ಮಳಲಿ, ಮಹೇಶಗೌಡ ಪಾಟೀಲ, ರಾಚಪ್ಪ ಕಲ್ಲೋಳಿ ಸೇರಿದಂತೆ ರೈತ ಸಂಘದ ಮುಖಂಡರು ಹಾಗೂ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...