ಮುಗಳಖೋಡ ಸರ್ಕಾರಿ ಶಾಲೆಯಲ್ಲಿ ಆಹಾರ ವಿಷಬಾಧೆ: 14 ಮಂದಿ ಮಕ್ಕಳು ಆಸ್ಪತ್ರೆಗೆ ದಾಖಲು, ಎಲ್ಲರೂ ಚೇತರಿಕೆ

Date:

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿನ ಆಹಾರ ವಿಷಪೂರಿತವಾಗಿದ್ದು, ಸೋಮವಾರ ಅಸ್ವಸ್ತರಾಗಿದ್ದ 14 ಮಂದಿ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಆಹಾರ ವಿಷಬಾಧೆಗೆ ಒಳಗಾಗಿದ್ದ ಎಲ್ಲ ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಪಡೆಯುತ್ತ ಚೇತರಿಸಿಕೊಳ್ಳುತ್ತಿರುವುದಾಗಿ ಅಧಿಕಾರಿಗಳು ದೃಢಪಡಿಸಿದ್ದಾರೆ.

- Advertisement -

ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ತಾಲೂಕು ಆಡಳಿತ ಹಾಗೂ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ತಂಡವನ್ನು ಸಂಪರ್ಕಿಸಿ, ಪರಿಸ್ಥಿತಿಯನ್ನು ಖುದ್ದಾಗಿ ನಿಭಾಯಿಸುವಂತೆ ಹಾಗೂ ಮಕ್ಕಳಿಗೆ ಅಗತ್ಯವಾದ ಅತ್ಯುತ್ತಮ ಚಿಕಿತ್ಸೆ ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಪಕ್ಷದ ಸಂಘಟನಾಕಾರ ಹನಮಂತ ತಿಮ್ಮಾಪುರ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆಸ್ಪತ್ರೆಗೆ ಭೇಟಿ ನೀಡಿದ ಹನಮಂತ ತಿಮ್ಮಾಪೂರ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಮಕ್ಕಳ ಆರೋಗ್ಯ ವಿಚಾರಿಸಿ, ಪೋಷಕರಿಗೆ ಧೈರ್ಯ ತುಂಬಿದರು. ಮಕ್ಕಳ ಸಂಪೂರ್ಣ ಆರೋಗ್ಯದ ಜವಾಬ್ದಾರಿಯನ್ನು ಆಡಳಿತ ಹಾಗೂ ಆರೋಗ್ಯ ಇಲಾಖೆ ವಹಿಸಿಕೊಂಡಿದ್ದು, ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲವೆಂದು ಭರವಸೆ ನೀಡಿದ್ದಾರೆ.

ಆಹಾರ ವಿಷಬಾಧೆಗೆ ಕಾರಣವಾದ ಅಂಶಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಬತ್ತಿದ ಕೆರೆ: ಜಾನುವಾರುಗಳಿಗೂ ನೀರಿನ ಅಭಾವ

ಘಟನಾ ಸ್ಥಳ ಹಾಗೂ ಆಸ್ಪತ್ರೆಯಲ್ಲಿ ಮುಧೋಳ ತಹಶೀಲ್ದಾರ್ ಚಿಕ್ಕಪ್ಪ ನಾಯಕ, ತಾಲೂಕು ಪಂಚಾಯತ್ ಇಒ ರಾಘವೇಂದ್ರ ಕಳ್ಳಿಮನಿ, ಸಿಪಿಐ ಅಜಿತ್ ಹೊಸಮನಿ, ಬಿಇಒ ಮುಲ್ಲಾ, ತಾಲೂಕು ಆಸ್ಪತ್ರೆ ಅಧಿಕಾರಿ ವೆಂಕಟೇಶ ಮಲ್ಘಾಣ, ರಾಜುಗೌಡ ಪಾಟೀಲ್ ಜಂಬಗಿ, ಸದಾಶಿವ ದೇಸಾಯಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...