ಹೇರ್‌ ಡ್ರೈಯರ್ ಬ್ಲಾಸ್ಟ್, ಮಹಿಳೆಯ ಎರಡು ಮುಂಗೈ ಬೆರಳುಗಳು ಛಿದ್ರ

Date:

ಮನೆಯಲ್ಲಿ ಹೇರ್‌ ಡ್ರೈಯರ್ ಬ್ಲಾಸ್ಟ್ ಆಗಿ ಮಹಿಳೆಯ ಎರಡು ಮುಂಗೈ ಬೆರಳುಗಳು ಛಿದ್ರಗೊಂಡಿರುವ ಭಯಾನಕ ಘಟನೆ ಇಳಕಲ್ ನಗರದಲ್ಲಿ ನಡೆದಿದೆ.

- Advertisement -

ಬಸವನಗರದ ನಿವಾಸಿ ಶಶಿಕಲಾ ಎನ್ನುವವರ ವಿಳಾಸ ನೀಡಿ ರಕ್ಕಸಗಿ ಗ್ರಾಮದ ಬಸವರಾಜೇಶ್ವರಿ ಯರನಾಳ ಎಂಬುವವರು ಆನ್‌ಲೈನ್ ಮೂಲಕ ಹೇರ್ ಡ್ರೈಯರ್ ಖರೀದಿಸಿದ್ದರು. ಪಾರ್ಸೆಲ್ ಓಪನ್ ಮಾಡಿ ಸ್ವಿಚ್ ಆನ್ ಮಾಡಿದ ಕೂಡಲೇ ಹೇ‌ರ್ ಡ್ರೈಯರ್ ಬ್ಲಾಸ್ಟ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಮಹಿಳೆ ಬಸವರಾಜೇಶ್ವರಿ ಯರನಾಳ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇರ್ ಡ್ರೈಯರ್ ಬ್ಲಾಸ್ಟ್‌ನಿಂದ ಮುಂಗೈ ಹಾಗೂ ಬೆರಳುಗಳು ಛಿದ್ರ ಛಿದ್ರವಾಗಿ, ಮನೆಯಲ್ಲಿ ರಕ್ತ ಚೆಲ್ಲಾಡಿದೆ. ಘಟನೆಯಲ್ಲಿ ಎರಡು ಕೈಗಳ 8 ಬೆರಳುಗಳನ್ನು ಮಹಿಳೆ ಕಳೆದೆಕೊಂಡಿದ್ದಾರೆ.

ಬಾಗಲಕೋಟೆ ಎಸ್​ಪಿ ಅಮರನಾಥ್​ ರೆಡ್ಡಿ ಅವರು ಈ ಘಟನೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ಹೇರ್ ಡ್ರೈಯರ್ ಪ್ರಾಡಕ್ಟ್ ಮ್ಯಾನುವಲ್​​ನಲ್ಲಿನ ಸೂಚನೆ ಪಾಲಿಸಿಲ್ಲ. ಮ್ಯಾನುವಲ್ ಪಾಲಿಸದೇ ಆನ್ ಮಾಡಿದ್ದಕ್ಕೆ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಸ್ವಿಚ್ ಹಾಕಿ ಆನ್ ಮಾಡಿದ್ದೇ ತಡ ಹೇರ್ ಡ್ರೈಯರ್ ಬ್ಲಾಸ್ಟ್ ಆಗಿದ್ದು ಹೇಗೆ ಅನ್ನೋ ಬಗ್ಗೆ ಇಳಕಲ್ ಠಾಣೆಯ ಪೊಲೀಸರು ತಜ್ಞರ ತಂಡದಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ” ಎಂದು ಹೇಳಿದ್ದಾರೆ.

ಬಸವನಗರದ ಶಶಿಕಲಾ ಎಂಬವರ ಹೆಸರಿಗೆ ಬಾಗಲಕೋಟೆಯ ಡಿಟಿಡಿಸಿ ಕೋರಿಯರ್ ಮೂಲಕ ಈ ಹೇರ್‌ ಡ್ರೈಯರ್ ಬಂದಿದೆ. ಕೋರಿಯರ್ ಬಾಯ್ ಶಶಿಕಲಾ ಅವರ ನಂಬರ್‌ಗೆ ಕಾಲ್ ಮಾಡಿದಾಗ, ‘ನಾನು ಊರಲ್ಲಿ ಇಲ್ಲ ಪಕ್ಕದ ಮನೆಯ ಬಸವರಾಜೇಶ್ವರಿ ಅವರ‌ ಮನೆಯಲ್ಲಿ ಪಾರ್ಸೆಲ್ ಕೊಡಲು ಹೇಳಿದ್ದರು. ‌ಅಲ್ಲದೇ ನಾನು ಯಾವುದೇ ಆನ್‌ ಲೈನ್ ಪ್ರಾಡಕ್ಟ್‌ ಆರ್ಡರ್‌ ಮಾಡಿಲ್ಲ. ಅದರಲ್ಲಿ ಏನಿದೆ’ ಎಂದು ಪ್ರಶ್ನಿಸಿದ್ದರು. ಕೋರಿಯರ್ ಪಾರ್ಸೆಲ್ ಪಡೆದ ಬಸವರಾಜೇಶ್ವರಿ ಯರನಾಳ ಅವರು ಬಾಕ್ಸ್‌ ತೆರೆದು ನೋಡಿದಾಗ ಹೇರ್ ಡ್ರೈಯರ್ ಇದೆ ಎಂದು ತಿಳಿಸಿದ್ದಾರೆ. ಅದೇ ವೇಳೆಗೆ ಪಕ್ಕದ ಮನೆಯವರು ಬಂದಿದ್ದು, ಆನ್ ಮಾಡಿ ತೋರಿಸಿ ಎಂದು ಕೇಳಿದಾಗ ಬಸವರಾಜೇಶ್ವರಿ ಅದನ್ನು ಆನ್ ಮಾಡಲು ವಿದ್ಯುತ್ ಸ್ವಿಚ್ ಬೋರ್ಡ್‌ಗೆ ಹಾಕಿ ಆನ್ ಮಾಡಿದ್ದರು. ಆಗ ಸ್ಪೋಟಗೊಂಡಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಭ್ರಷ್ಟ ಅಧಿಕಾರಿಯ ಮನೆಯಲ್ಲಿ ಚಿನ್ನ, ಬೆಳ್ಳಿಗಳ ರಾಶಿ: ಬೆಚ್ಚಿಬಿದ್ದ ಲೋಕಾಯುಕ್ತ ಅಧಿಕಾರಿಗಳು!

ಶಶಿಕಲಾ ಅವರು ಹೇರ್ ಡ್ರೈಯರ್‌ ಆರ್ಡರ್‌ ಮಾಡಿರಲಿಲ್ಲ. ಅವರ ಹೆಸರಿನಲ್ಲಿ ಪಾರ್ಸೆಲ್ ಹೇಗೆ ಬಂತು? ಡ್ರೈಯರ್ ಆರ್ಡರ್‌ ಮಾಡಿದವರು ಯಾರು, ಹಣ ಯಾರು ಸಂದಾಯ ಮಾಡಿದರು ಯಾರು? ಎಲ್ಲಿಂದ ಹೇರ್ ಡ್ರೈಯರ್ ಬಂತು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಸವರಾಜೇಶ್ವರಿ ಪತಿ ಪಾಪಣ್ಣ ಯರನಾಳ ಸೈನಿಕರಾಗಿದ್ದು, 2017ರಲ್ಲಿ ಜಮ್ಮು ಕಾಶ್ಮೀರದಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿ ಮೃತಪಟ್ಟಿದ್ದರು. ಸದ್ಯ ಬಸವರಾಜೇಶ್ವರಿ ಅವರು ಮಕ್ಕಳೊಂದಿಗೆ ಇಳಕಲ್ಲದಲ್ಲಿ ವಾಸಿಸುತ್ತಿದ್ದಾರೆ. ಶಾಸಕ ವಿಜಯಾನಂದ ಕಾಶಪ್ಪನವರ ಆಸ್ಪತ್ರೆಗೆ ಭೇಟಿ ನೀಡಿ, ಘಟನೆಯ ಮಾಹಿತಿ ಪಡೆದು, ಗಾಯಾಳುವಿಗೆ ಸಾಂತ್ವನ ಹೇಳಿದರು. ಇಳಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಸವೇಶ್ವರ ಬ್ಯಾಂಕ್ ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಂಡಿದೆ: ಪ್ರಕಾಶ ತಪಶೆಟ್ಟಿ

ವರ್ತಕರ ಹಿತಾಸಕ್ತಿಗಾಗಿ ಸ್ಥಾಪನೆಯಾದ ಬಸವೇಶ್ವರ ಸಹಕಾರಿ ಬ್ಯಾಂಕ್, ಶೇರುದಾರರು, ವರ್ತಕರು ಹಾಗೂ...

ಬಾದಾಮಿ | ಆಸ್ಪತ್ರೆ, ಶಾಲೆಗೆ ಸಿಇಒ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ನೋಟಿಸ್

ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಕಾಪಾಡುವ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...