ಹುನಗುಂದ | ಕ್ಷೇತ್ರಕ್ಕೆ 22 ವರ್ಷಗಳ ಬಳಿಕ ಒಲಿದ ಸಚಿವ ಸ್ಥಾನ: ಸಂಪುಟ ಸೇರಿದ ಕಾಶಪ್ಪನವರ್‌

Date:

ಕಳೆದ ಎರಡು ತಿಂಗಳುಗಳಿಂದ ನಿರೀಕ್ಷಿಸಲಾಗಿದ್ದ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರಕ್ಕೆ ಬಂಪರ್ ಬಹುಮಾನ ಸಿಕ್ಕಿದೆ. ಕ್ಷೇತ್ರದ ಶಾಸಕರಾಗಿರುವ ವಿಜಯಾನಂದ ಕಾಶಪ್ಪನವರ್‌ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಹುನಗುಂದ ಕ್ಷೇತ್ರಕ್ಕೆ 22 ವರ್ಷಗಳ ನಂತರ ಮತ್ತೆ ಸಚಿವ ಸ್ಥಾನ ಸಿಕ್ಕಿದೆ. ಈ ಕ್ಷೇತ್ರದ ಶಾಸಕರಾದವರು ಕಾಲಕಾಲಕ್ಕೆ ರಾಜ್ಯ ರಾಜಕಾರಣದ ಮಹತ್ವದ ಸ್ಥಾನಗಳನ್ನು ಅಲಂಕರಿಸುತ್ತ ಬಂದಿದ್ದಾರೆ. ಈ ಕ್ಷೇತ್ರದ ಶಾಸಕರು ಮುಖ್ಯಮಂತ್ರಿ, ವಿಧಾನಸಭಾ ಸ್ಪೀಕರ್, ಡೆಪ್ಯೂಟಿ ಸ್ಪೀಕರ್, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ದಾಖಲೆಗಳಿವೆ. ಭಾಷಾವಾರು ಪ್ರಾಂತ್ಯಗಳ ರಚನೆಗೆ ಮುನ್ನ ಮುಂಬೈ ರಾಜ್ಯ ವಿಧಾನಸಭಾ ಡೆಪ್ಯೂಟಿ ಸ್ಪೀಕರ್ ಸ್ಥಾನ ಕೂಡ ಹುನಗುಂದ ಕ್ಷೇತ್ರಕ್ಕೆ ದೊರೆತಿತ್ತು. ರಾಜ್ಯದ ಸಚಿವ ಸಂಪುಟದಲ್ಲಿ ಅನೇಕ ಸಲ ಅವಕಾಶ ಪಡೆದ ಹಿರಿಮೆಯನ್ನು ಈ ಕ್ಷೇತ್ರ ಹೊಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಕ್ಷೇತ್ರದ ಮೊದಲ ಶಾಸಕರಾಗಿದ್ದ ಎಸ್.ಆರ್. ಕಂಠಿ ಐವತ್ತರ ದಶಕದಲ್ಲಿ ಮುಂಬೈ ರಾಜ್ಯ ವಿಧಾನಸಭಾ ಡೆಪ್ಯೂಟಿ ಸ್ಪೀಕರ್ ಆಗಿದ್ದರು. ಅರವತ್ತರ ದಶಕದಲ್ಲಿ ಮೈಸೂರು ರಾಜ್ಯ ವಿಧಾನಸಭಾ ಸ್ಪೀಕರ್ ಆಗಿದ್ದರು. ಸ್ವಲ್ಪ ಕಾಲ ರಾಜ್ಯದ ಮುಖ್ಯಮಂತ್ರಿ ಆಗಿದ್ದರಲ್ಲದೆ, ಅವರು ಬೇರೆ ಬೇರೆ ಸಂದರ್ಭಗಳಲ್ಲಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಿಕ್ಷಣ ಖಾತೆಗಳ ಸಚಿವರಾಗಿದ್ದರು.

ಎಪ್ಪತ್ತರ ದಶಕದಲ್ಲಿ ಶಾಸಕರಾಗಿದ್ದ ಎಸ್.ಬಿ. ನಾಗರಾಳ ದೇವರಾಜ್ ಅರಸು ಅವರ ಸಚಿವ ಸಂಪುಟದಲ್ಲಿ ಸಣ್ಣ ನೀರಾವರಿ ಇಲಾಖೆ ಸಚಿವರಾಗಿದ್ದರು. ಸಚಿವ ಸ್ಥಾನದ ಜೊತೆಗೆ ಅವರು ಕೆಪಿಸಿಸಿ ಅಧ್ಯಕ್ಷರೂ ಆಗಿದ್ದರು. ಅವರ ನಂತರ ಈ ಕ್ಷೇತ್ರಕ್ಕೆ ಸಚಿವ ಸ್ಥಾನ ಪಡೆಯುವಲ್ಲಿ ಎಸ್.ಆರ್. ಕಾಶಪ್ಪನವರು 1999ರಲ್ಲಿ ಯಶಸ್ವಿಯಾಗಿದ್ದರು. ಅದಾದ ಎರಡೂವರೆ ದಶಕಗಳ ನಂತರ ಇದೀಗ ಅವರ ಪುತ್ರ ವಿಜಯಾನಂದ ಕಾಶಪ್ಪನವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಸಚಿವರಾಗಬೇಕೆನ್ನುವವರಲ್ಲಿ ಕಾಶಪ್ಪನವರ ಅವರಿಗಿಂತ ಸೀನಿಯರ್‌ಗಳಾದ ಆರ್.ಬಿ. ತಿಮ್ಮಾಪುರ, ಜೆ.ಟಿ. ಪಾಟೀಲ್ ಪೈಪೋಟಿಯಲ್ಲಿದ್ದರು. ಈ ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ತಿಮ್ಮಾಪುರ ಮತ್ತೆ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿಯೂ ಸ್ಥಾನ ಪಡೆಯಲು ಶಕ್ತಿ ಮೀರಿ ಪ್ರಯತ್ನ ಮಾಡಿದ್ದರು. ಆದರೆ ಅವರ ಜಾತಿ ಕೋಟಾದಲ್ಲಿ ಮಾಯಕೊಂಡಲ ಶಾಸಕ ಬಸವಂತಪ್ಪ ಅವರಿಗೆ ಸಚಿವರಾಗುವ ಯೋಗ ಕೂಡಿ ಬಂದಿತು. ಜೆ.ಟಿ. ಪಾಟೀಲ್ ಕೂಡ ದಿಲ್ಲಿಯವರೆಗೆ ಹೋಗಿ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪ್ರಭಾವ ಬೀರಿ ಸಚಿವ ಸ್ಥಾನ ಪಡೆಯಲು ದೊಡ್ಡ ಮಟ್ಟದಲ್ಲಿ ಲಾಬಿ ಮಾಡಿದ್ದರು. ಅವರ ಜಾತಿ ಕೋಟಾದಲ್ಲಿ ಬಸವರಾಜ ರಾಯರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಕ್ಕಿತು.

ಕಾಂಗ್ರೆಸ್ ಹೈಕಮಾಂಡ್ ಸಚಿವ ಸಂಪುಟದಲ್ಲಿ ಅವಕಾಶ ಕೊಡುವಾಗ ಜಾತಿ, ಜಿಲ್ಲೆ, ಪ್ರಾದೇಶಿಕತೆ ಕಡೆಗೆ ಗಮನ ಕೊಟ್ಟಿದ್ದರಿಂದ ತಿಮ್ಮಾಪುರ ಮತ್ತು ಜೆ.ಟಿ. ಸಚಿವರಾಗುವ ಅವಕಾಶದಿಂದ ವಂಚಿತರಾದರು. ಅವರಿಬ್ಬರನ್ನು ಬದಿಗೆ ಸರಿಸಿ ಕಾಂಗ್ರೆಸ್ ಹೈಕಮಾಂಡ್ ಕಾಶಪ್ಪನವರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿರುವುದು ತಿಮ್ಮಾಪುರ ಮತ್ತು ಜೆ.ಟಿ. ಅವರಿಗೆ ಬಿಗ್ ಶಾಕ್ ನೀಡಿದೆ.

ವಿಧಾನ ಪರಿಷತ್ ಸದಸ್ಯೆಯಾಗಿರುವ ಉಮಾಶ್ರೀ ಕೂಡ ಸಚಿವ ಸ್ಥಾನಕ್ಕೆ ಪ್ರಯತ್ನ ಮಾಡಿದ್ದರು. ಕಾಂಗ್ರೆಸ್ ಹೈಕಮಾಂಡ್ ಅವರನ್ನು ವಿಧಾನ ಪರಿಷತ್ ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ಪರಿಗಣಿಸುವ ಮೂಲಕ ಸಮಾಧಾನಕರ ಬಹುಮಾನ ನೀಡಿದೆ. ವಿಜಯಾನಂದ ಕಾಶಪ್ಪನವರು ಸಚಿವರಾಗಿರುವುದರಿಂದ ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವರಾಗಲಿದ್ದಾರೆ.

ಈ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ಸಚಿವರಿಗೆ ಧ್ವಜಾರೋಹಣ ಮಾಡಲು ಅವಕಾಶ ಸಿಕ್ಕಂತಾಯಿತು. ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ತಾನಾಗಿಯೇ ಹುಡುಕಿಕೊಂಡು ಬಂದಿಲ್ಲ. ಇದರ ಹಿಂದೆ ಅವರ ದೊಡ್ಡ ಮಟ್ಟದ ಹೋರಾಟ ಇದೆ. ತಂದೆಯ ಉತ್ತರಾಧಿಕಾರಿಯಾಗಿ ರಾಜಕೀಯಕ್ಕೆ ಬಂದ ವಿಜಯಾನಂದ ಕಾಶಪ್ಪನವರ್‌ ಸದಾ ಹೈ ರಿಸ್ಕ್ ತೆಗೆದುಕೊಂಡೇ ರಾಜಕೀಯ ಮಾಡುತ್ತ ಬಂದಿದ್ದಾರೆ. ವಿವಾದಗಳು ಅವರನ್ನು ಬೆಂಬಿಡದೆ ಕಾಡಿದರೂ, ಅವರ ನಿಲುವುಗಳು ತೀವ್ರ ಪೈಪೋಟಿಯ ನಡುವೆಯೂ ಸಚಿವ ಸ್ಥಾನ ಪಡೆಯುವಂತೆ ಮಾಡಿದೆ. ಲಿಂಗಾಯತ ಪಂಚಮಸಾಲಿ ಕೋಟಾದಡಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಜಿಲ್ಲೆಯ ಕಾಂಗ್ರೆಸ್ ಶಾಸಕರನ್ನು ಒಗ್ಗೂಡಿಸಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಮಹತ್ತರ ಜವಾಬ್ದಾರಿ ಅವರ ಮೇಲಿದೆ.

ಬರಹ: ಮುತ್ತು ನಾಯ್ಕರ್, ಹಿರಿಯ ಪತ್ರಕರ್ತ

IMG 20260325 WA0017
ಮುತ್ತು ನಾಯ್ಕರ
+ posts

ಹಿರಿಯ ಪತ್ರಕರ್ತರು, ಬಾಗಲಕೋಟೆ

ಪೋಸ್ಟ್ ಹಂಚಿಕೊಳ್ಳಿ:

ಮುತ್ತು ನಾಯ್ಕರ
ಮುತ್ತು ನಾಯ್ಕರ
ಹಿರಿಯ ಪತ್ರಕರ್ತರು, ಬಾಗಲಕೋಟೆ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...

ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...