ಹುನಗುಂದ | ನರೇಗಾ ಕೂಲಿ ಪಾವತಿಗೆ ಆಗ್ರಹಿಸಿ ಗ್ರಾಕೂಸ್ ಪ್ರತಿಭಟನೆ

Date:

ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಬಹುತೇಕ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ತಿಂಗಳಿಂದ ನರೇಗಾ ಕಾರ್ಮಿಕರಿಗೆ ಕೆಲಸ ನೀಡಿಲ್ಲ. ಈ ಹಿಂದಿನ ಕೆಲಸದ ಕೂಲಿಯೂ ಜಮೆಯಾಗಿಲ್ಲ. ವೈದ್ಯಕೀಯ ವೆಚ್ಚ, ನಿರುದ್ಯೋಗ ಭತ್ಯೆ, ಸೇರಿದಂತೆ ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಬಾಗಲಕೋಟೆ ಜಿಲ್ಲಾ ಗ್ರಾಕೂಸ್ ಮುಖಂಡ ಮಹಾಂತೇಶ ಹೊಸಮನಿ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಹುನಗುಂದ ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ಪ್ರತಿಭಟನೆಯ ವೇಳೆ ಮಾತನಾಡಿದ ಅವರು, “ಹುನಗುಂದ ತಾಲ್ಲೂಕಿನ ಬಿಂಜವಾಡಗಿ, ಬಿಸಲದಿನ್ನಿ ಹಾವರಗಿ, ಬೆಳಗಲ್, ಹಿರೇಮಳಗಾವಿ, ಮುಗನೂರು, ಅಮರಾವತಿ, ಹಿರಾಬಾದವಾಡಗಿ, ರಕ್ಕಸಗಿ ಹಾಗೂ ಧನ್ನೂರ ಹಾಗೂ ಇಳಕಲ್ ತಾಲ್ಲೂಕಿನ ನಂದವಾಡಗಿ, ಹಿರೇಸಿಂಗನಗುತ್ತಿ, ಕಂದಗಲ್ಲ, ಹಿರೇ ಓತಗೇರಿ, ಕರಡಿ, ಬೂದಿಹಾಳ, ಜಂಬಲದಿನ್ನಿ, ಗುಡೂರ, ಕೆ ಲೂರು, ಚಿಕನಾಳ ಹಾಗೂ ಹಿರೇಕೊಡಗಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿನ ಗ್ರಾಮಗಳಲ್ಲಿ ನರೇಗಾ ಯೋಜನೆಗೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರ ಪ್ರಮುಖ ಸಮಸ್ಯೆಗೆಳನ್ನು ಪರಿಹರಿಸಿ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ನಮ್ಮ ಬೇಡಿಕೆ ಹಾಗೂ ಸಮಸ್ಯೆಗಳನ್ನು ಮುಂದಿನ 2-3 ದಿನಗಳಲ್ಲಿ ಬಗೆಹರಿಸಬೇಕು. ಒಂದು ವೇಳೆ ನಿರ್ಲಕ್ಷಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಇಲಾಖೆ ಆಯುಕ್ತರಿಗೆ ನಿರ್ವಾಹಕ ಅಧಿಕಾರಿ ಹಾಗೂ ಪಂಚಾಯಿತಿ ಪಿಡಿಒಗಳ ವಿರುದ್ದ ದೂರು ನೀಡಲಾಗುವುದು” ಎಂದು ಎಚ್ಚರಿಸಿದರು.

“ಕೂಲಿ ಕಾರ್ಮಿಕ ಮುಖಂಡರಿಂದ ಮನವಿ ಪತ್ರವನ್ನು ಸ್ವೀಕರಿಸಿದ ತಾಲ್ಲೂಕು ಕಾರ್ಯ-ನಿರ್ವಾಹಕ ಅಧಿಕಾರಿ ಹಾಗೂ ನರೇಗಾ ಯೋಜನೆ ನಿರ್ದೇಶಕರು ಕಾರ್ಮಿಕರ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಲಾಗುವುದು” ಎಂದು ಭರವಸೆ ನೀಡಿದರು.

ಹುನಗುಂದ ಮತ್ತು ಇಳಕಲ್ ತಾಲ್ಲೂಕು ಪಂಚಾಯಿತಿ ಇ ಒ ಮುರಳಿಧರ ದೇಶಪಾಂಡೆ, ನರೇಗಾ ಯೋಜನೆ ನಿರ್ದೇಶಕ ಮಹಾಂತೇಶ ಚಲವಾದಿ, ಈರಣ್ಣ ಚಿನಿವಾಲರ, ಕಾರ್ಮಿಕ ಮುಖಂಡರಾದ ಶಾರದಾ ಪರನಗೌಡರ, ಯಮನೂರ ಕಡಿವಾಲ, ವಿಜಯಲಕ್ಷ್ಮಿ ಜಾಲಿಹಾಳ, ಶಶಿಕುಮಾರ ಹರಿಜನ, ಮಹಾದೇವಿ ಹಡಪದ, ನೀಲಮ್ಮ ಕಟ್ಟಿಮನಿ, ಷರೀಫ್ ಚಪ್ಪರಬಂದ, ಮಲ್ಲು ಅಂತರಗೊಂಡ, ರೇಣುಕಾ ತುಪ್ಪದ, ಸುಜಾತ ಚವ್ಹಾಣ, ಸರೋಜ ಭದ್ರಶೆಟ್ಟಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

NTA ಒಂದು ‘ಖಾಲಿ ಸಂಸ್ಥೆ’, ಮೋದಿ ಸರ್ಕಾರ ಅಹಂಕಾರ ಬಿಟ್ಟು ವರದಿ ಪರಿಗಣಿಸಲಿ: ಕಾಂಗ್ರೆಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ‌ (ಎನ್‌ಟಿಎ) ಮತ್ತು ಶಿಕ್ಷಣ ಸಚಿವಾಲಯದಲ್ಲಿ ಗಂಭೀರ ಸ್ವರೂಪದ...