ಹುನಗುಂದ | ಇದ್ದಲಗಿ ಸಂತ್ರಸ್ತರ ಧರಣಿಗೆ ಹನುಮಂತ ನಿರಾಣಿ ಬೆಂಬಲ

Date:

ಮೂಲಭೂತ ಸೌಲಭ್ಯಗಳು ಹಾಗೂ ಪುನರ್ವಸತಿ ಸಂಬಂಧಿತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

- Advertisement -

ಕಳೆದ 48 ದಿನಗಳಿಂದ ನಿರಂತರವಾಗಿ ಧರಣಿ ನಡೆಸುತ್ತಿರುವ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದ ನಿರಾಣಿ, ಅವರ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

ಸಂತ್ರಸ್ತರನ್ನುದ್ದೇಶಿಸಿ ಮಾತನಾಡಿದ ಅವರು, “18 ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿರುವ ಗ್ರಾಮಸ್ಥರ ಪರಿಸ್ಥಿತಿ ಮನ ಕಲಕುವಂತಿದೆ, ಮನೆ, ಜಮೀನು ಹಾಗೂ ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿರುವ ಕುಟುಂಬಗಳು ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಒಂದು ಗುಂಟೆ ಜಾಗಕ್ಕೆ ಬದಲಾಗಿ ನಾಲ್ಕು ಗುಂಟೆ ಜಾಗ ನೀಡುವಂತೆ ಆಗ್ರಹಿಸುತ್ತಿರುವ ಬೇಡಿಕೆ ಸಮಂಜಸವಾಗಿದೆ” ಎಂದು ಅಭಿಪ್ರಾಯಿಸಿದರು.

“ಸಂತ್ರಸ್ತರ ಸಮಸ್ಯೆಗಳನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದ ಅವರು, ಸಂಬಂಧಿತ ಅಧಿಕಾರಿಗಳೊಂದಿಗೆ ತುರ್ತು ಚರ್ಚೆ ನಡೆಸಿ, ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸುವುದಾಗಿ ಹೇಳಿದರು. ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯಯತ್ನಿಸುವೆ” ಎಂದು ಭರವಸೆ ನೀಡಿದರು.

ಮುಖಂಡ ಡಾ. ಮಹಾಂತೇಶ ಕಡಿಪಟ್ಟಿ ಮಾತನಾಡಿ, “ವರ್ಷಗಳಿಂದ ಬಾಕಿ ಉಳಿದಿರುವ ಸಂತ್ರಸ್ತರ ಬೇಡಿಕೆಗಳನ್ನು ಸರ್ಕಾರ ವಿಳಂಬ ಮಾಡದೇ ಶೀಘ್ರ ಈಡೇರಿಸಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಮುಖಂಡ ಹಸನ್ ಪಿಂಜಾರ ಸೇರಿದಂತೆ ಸಂತ್ರಸ್ತರು ತಮ್ಮ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಪತ್ರವನ್ನು ಹನುಮಂತ ನಿರಾಣಿ ಅವರಿಗೆ ಸಲ್ಲಿಸಿದರು.

ಧರಣಿ ಸ್ಥಳದಲ್ಲಿ ಬಸವರಾಜ ಬಡ್ಡಿ, ಅಜ್ಜಪ್ಪ ನಾಡಗೌಡ, ಮಹಾಂತೇಶ ನಾಡಗೌಡ, ಸಂಗಣ್ಣ ಹೊಸೂರ, ಕಲ್ಲಪ್ಪ ಆನೆಹೊಸೂರ, ಭೀಮಣ್ಣ ಅಡಿಹಾಳ, ಸರೋಜಮ್ಮ ಹಿರೇಮಠ, ಮೀನಾಕ್ಷಿ ಗುಂಜಹಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...