ಹುನಗುಂದ | ಮಹಿಳೆಯರ ಜೀವನದ ಗುಣಮಟ್ಟದ ಮೇಲೆ ವಲಸೆ ವ್ಯತಿರಿಕ್ತ ಪರಿಣಾಮ: ಡಾ. ಭುವನೇಶ್ವರಿ

Date:

ವಲಸೆ ಎಂಬುದು ಉತ್ತರ ಕರ್ನಾಟಕದ ಪ್ರಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಅದು ಮಹಿಳೆಯರ ಜೀವನದ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಒಡಲದನಿ ಮಹಿಳಾ ಒಕ್ಕೂಟದ ನಿರ್ದೇಶಕಿ ಡಾ.ಭುವನೇಶ್ವರಿ ಕಾಂಬಳೆ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಹುನಗುಂದ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

“ನಮ್ಮ ಸಂಶೋಧನಾ ಅಧ್ಯಯನದ ದಿನಗಳಲ್ಲಿಈ ಬಗ್ಗೆ ಮನವರಿಕೆಯಾಗಿದೆ. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮೂಲಕ ವಲಸೆಯನ್ನು ತಡೆಯುವ ಯತ್ನವಾಗಿ ‘ಒಡಲದನಿ’ ಮಹಿಳಾ ಒಕ್ಕೂಟ ಆರಂಭವಾಯಿತು. ಒಕ್ಕೂಟದ ಮೂಲಕ ನೂರಾರು ಜನ ಅಸಂಘಟಿತ ಮಹಿಳಾ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸಿಲು ಸಾಧ್ಯವಾಗಿದೆ. ತಮ್ಮ ಒಕ್ಕೂಟದ ಮಹಿಳೆಯರು ಶಕ್ತಿ ಯೋಜನೆಯನ್ನು ಸಮರ್ಥವಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಯಾಗುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವಿಜಯಮಹಾಂತೇಶ ಗದ್ದನಕೇರಿ ಮಾತನಾಡಿ, ವಲಸೆಯಂತಹ ಸಾಮಾಜಿಕ ಸಮಸ್ಯೆಗೆ ‘ಒಡಲದನಿ’ ಹಾಗೂ ಅದರ ಸಂಸ್ಥಾಪಕರು ಕಂಡುಕೊಂಡಿರುವ ನವೀನ ಹಾಗೂ ಪರಿಣಾಮಕಾರಿ ಮಾರ್ಗವನ್ನು ಶ್ಲಾಘಿಸಿದರು.

ಇದನ್ನೂ ಓದಿ: ಬಾಗಲಕೋಟೆ | ಗಬ್ಬೆದ್ದ ಮೂತ್ರಾಲಯಗಳು; ಸಾರ್ವಜನಿಕ ಅಸಮಾಧಾನ, ನಗರಸಭೆ ಮೌನ

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಸಾವಿತ್ರಿ ತಪೇಲಿ ಮಾತನಾಡಿದರು. ಪ್ರಾಚಾರ್ಯ ಸಿಕಂದರ್‌ ಧನ್ನೂರ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಎಸ್. ಜಿ.ಎಮ್ಮಿ, ಸಿ.ಜಿ.ಹವಾಲ್ದಾರ, ದೇವು ಡಂಬಳ, ರಾಣಿ ತೋಪಲಕಟ್ಟಿ, ಬಸವರಾಜ ಹೊಸಮನಿ, ಬಿ.ವೈ.ಕೊಡಗಾನೂರ ಮಹಿಳಾ ವೇದಿಕ ಸಂಚಾಲಕಿ ದಾನಮ್ಮ ಮಠದ, ಸುರೇಶ ಎಚ್‌. ಎಸ್. ಬಿ. ವೈ.ಆಲೂರ ಇದ್ದರು. ಸನಾ ಶಿರಸಂಗಿ ನಿರೂಪಿಸಿದರು, ನಾಗವೇಣಿ ಗರಡಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ಎಸ್‌ಐಆರ್‌: ಹುನಗುಂದ, ಇಳಕಲ್‌ನಲ್ಲಿ 7,522 ಮತದಾರರಿಗೆ ನೋಟಿಸ್

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಡಿಜಿಟಲೀಕರಣದ ಬಳಿಕ...

ಬಾಗಲಕೋಟೆ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ; ಸೆ.19, 20ರಂದು ವಿಶೇಷ ಅಭಿಯಾನ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಎಲ್ಲ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...