ಇಳಕಲ್ | ಒಳಮೀಸಲಾತಿ: ಮಾ.25ರಂದು ಬಲಗೈ ಸಮುದಾಯಗಳಿಂದ ಬೃಹತ್ ಪ್ರತಿಭಟನೆ

Date:

‌ನಾಗಮೋಹನ್ ದಾಸ್ ವರದಿಯಲ್ಲಿ ಬಲಗೈ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಇದೇ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಚಲವಾದಿ ಸಮಾಜದ ಗಿರೀಶ್ ಹಾಸನವರ ತಿಳಿಸಿದರು.

- Advertisement -

ಇಳಕಲ್ ನಗರದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, “ಈ ಪ್ರತಿಭಟನೆಯು ಜ್ಞಾನಪ್ರಕಾಶ್ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಶರಣಪ್ಪ ಅಮದಿಹಾಳ ಮಾತನಾಡಿ, “ಮೀಸಲಾತಿಯ ರೋಸ್ಟರ್ ವ್ಯವಸ್ಥೆಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ʼಬೆಂಗಳೂರು ಚಲೋʼ ಪ್ರತಿಭಟನೆ ಆಯೋಜಿಸಲಾಗಿದೆ” ಎಂದು ಹೇಳಿದರು.

ಹುನಗುಂದ ಹಾಗೂ ಇಲಕಲ್ ಭಾಗಗಳಿಂದ ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಬಲಗೈ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಯಲಿದೆ. ಸರ್ಕಾರ ತಕ್ಷಣ ಸಮಸ್ಯೆಯನ್ನು ಪರಿಹರಿಸಿ, ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಚಲವಾದಿ ಸಮಾಜದ ಮುಖಂಡ ಸುರೇಶ್ ಜಂಗ್ಲಿ ಮಾತನಾಡಿ, “ನಾಗಮೋಹನ್ ದಾಸ್ ವರದಿಯನ್ನು ಪರಿಷ್ಕರಿಸಬೇಕು ಅಥವಾ ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂಬುದು ಬಲಗೈ ಸಮುದಾಯದ ಪ್ರಮುಖ ಬೇಡಿಕೆಯಾಗಿದೆ. ಒಳಮೀಸಲಾತಿ ವಿಷಯದಲ್ಲಿ ಚಲವಾದಿ ಸಮುದಾಯದ ಉಳಿವಿನ ಪ್ರಶ್ನೆ ಉದ್ಭವಿಸಿರುವುದರಿಂದ, ಈ ಹೋರಾಟವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಯಮನೂರು ಚಲವಾದಿ, ಶಾಮಣ್ಣ ಮುಧೋಳ, ಬಸವರಾಜ್ ಚಲವಾದಿ, ಯಮನಪ್ಪ ಬೀಳಗಿ, ಆನಂದ ಚಲವಾದಿ, ಅಂಬಣ್ಣ ಚಲವಾದಿ, ರಾಮಣ್ಣ ಬೆನಕಂಡೋಣಿ, ಪಾವಡಪ್ಪ ಚಲವಾದಿ, ಹೇಮಂತ ಚಲವಾದಿ, ಗೈಬು ಚಲವಾದಿ, ನಾಗೇಶ್ ಮುದುಗಲ್ಲ, ಸಂಗಮೇಶ ಜಂಗ್ಲಿ, ವಸಂತ ಮುಧೋಳ, ಗುರು ನಾಡಿಗೇರ, ಸುರೇಶ್ ದೊಡ್ಡಮನಿ, ಮಹಾಂತೇಶ ನಾರಾಯಣಿ ಸೇರಿದಂತೆ ಅನೇಕರು ಬಹುತೇಕರು ಇದ್ದರು.

ವಿಜಯಪುರ ನಗರದ ಸಾರಿ ಪುತ್ರ ಬುದ್ದ ವಿಹಾರ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಚಲವಾದಿ ಸಮಾಜದ ಜಿಲ್ಲಾ ಮುಖಂಡ ರಾಜಶೇಖರ ಯಡಳ್ಳಿ ಅವರು ಮಾತನಾಡಿ, “ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ಆಯೋಗದ ವರದಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬಗಳ ಸಮೀಕ್ಷೆಯ ಅಂಕಿಅಂಶಗಳೊಂದಿಗೆ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ಆಯೋಗದ ಅಂಕಿ ಅಂಶಗಳನ್ನು ಹೋಲಿಕೆ ಮಾಡುವುದು, ವ್ಯತ್ಯಾಸಗಳು ಕಂಡುಬಂದಲ್ಲಿ ಪರಿಶಿಷ್ಟ ಜಾತಿಯ ಎಲ್ಲ ಕುಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳ್ಳಬೇಕು” ಎಂದರು.

ಒಳಮೀಸಲಾತಿ ವಿಜಯಪುರ

ಶಶಿಕಾಂತ ಹೊನವಾಡಕರ್ ಮಾತನಾಡಿ, “ರಾಜ್ಯ ಸರ್ಕಾರವು‌ 2025ರ ಸೆಪ್ಟೆಂಬರ್ 03ರಂದು ಯಾವುದೇ ಮಾನದಂಡವನ್ನು ಅನುಸರಿಸದೇ ಅವೈಜ್ಞಾನಿಕವಾಗಿ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆಯುವುದು, ಸಮಾಜ ಕಲ್ಯಾಣ ಇಲಾಖೆಯ ಸುತ್ತೋಲೆ ನಿರ್ದೇಶನದಂತೆ ಜಾತಿ ಪ್ರಮಾಣ ಪತ್ರಗಳನ್ನು ಪ್ರವರ್ಗ – A, B ಮತ್ತು C ಎಂದು ವರ್ಗೀಕರಿಸಿರುವುದನ್ನು ಹಿಂಪಡೆದು ಮೂಲ ಜಾತಿಗಳನ್ನು ನಮೂದಿಸಿ, ಜಾತಿ ಪ್ರಮಾಣ ಪತ್ರಗಳನ್ನು ನೀಡಲು ಸೂಕ್ತ ಆದೇಶ ಹೊರಡಿಸುವುದು, ಪರಿಶಿಷ್ಟ ಜಾತಿ ಸಮುದಾಯಕ್ಕೆ ಈಗಾಗಲೇ ನೀಡಿರುವ ಖಾಯಂ ಜಾತಿ ಪ್ರಮಾಣ ಪತ್ರಗಳನ್ನು ಹೊಸ ಜಾತಿ ಪ್ರಮಾಣ ಪತ್ರಗಳೊಂದಿಗೆ ಪರಿಗಣಿಸಲು ಸೂಕ್ತ ಆದೇಶ ಹೊರಡಿಸುವುದು, ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳನ್ನು ಬಲಗೈ ಗುಂಪಿನಲ್ಲಿ ಉದ್ಯೋಗ, ಶಿಕ್ಷಣ ಮತ್ತು ಇತರೆ ಸೌಲಭ್ಯ ಪಡೆಯಲು ಅಧಿಸೂಚನೆ ಹೊರಡಿಸುವುದು, ಚಿತ್ರದುರ್ಗ ಜಿಲ್ಲೆಯಲ್ಲಿ ಹೊಲಯ ಸಮುದಾಯ ಕೇವಲ 223 ಎಂದು ನ್ಯಾಯಮೂರ್ತಿ ನಾಗಮೋಹನ್‌ದಾಸ್ ವರದಿಯಲ್ಲಿ ದಾಖಲಿಸಿರುವುದನ್ನು ಮರುಪರಿಶೀಲಿಸಿ ಉದ್ದೇಶ ಪೂರ್ವಕವಾಗಿ ಬಲಗೈ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ಮಾಡಿರುವ ಆಯೋಗದ ಅಧ್ಯಕ್ಷರು ಹಾಗೂ ಅಧಿಕಾರಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 15 ಕೋಟಿ ದೋಚಿದ ಸೈಬರ್ ವಂಚಕರು: ಬೆಳಗಾವಿಯಲ್ಲಿ ವೃದ್ಧ ಉದ್ಯಮಿ ಕಂಗಾಲು

ಈ ಪತ್ರಿಕಾಗೋಷ್ಠಿಯಲ್ಲಿ ಶಶಿಕಾಂತ್ ಹೊನವಾಡಕರ್, ಅಡಿವೆಪ್ಪ ಸಾಲಗಲ್ಲ, ನಾಗರಾಜ ಲಂಬು, ರಮೇಶ ಕೌಲಗಿ, ಶರಣು ಸಿಂಧೆ, ಪರಶುರಾಮ ದಿಂಡವಾರ, ಯಮನಪ್ಪ ಗುಣಕಿ, ಚನ್ನು ಕಟ್ಟಿಮನಿ, ರಾಜು ತೊರವಿ, ಸುರೇಶ ಬಬಲೇಶ್ವರ, ಮಲ್ಲು ಹಾದಿಮನಿ ಮತ್ತು ಅನಿಲ ಹೊಸಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ದಲಿತ ಸಂಘಟನೆ, ನೀಲಿ ಶಾಲಿನ ಕುರಿತು ಅವಹೇಳನಕಾರಿ ಹೇಳಿಕೆ: ಮುತ್ತಣ್ಣ ಮೇತ್ರಿ ಆಕ್ರೋಶ

ಮಾಜಿ ಸಂಸದ ಪ್ರತಾಪ್ ಸಿಂಹ ದಲಿತ ಸಂಘಟನೆಗಳು, ದಲಿತ ಮುಖಂಡರು ಹಾಗೂ...