ಇಳಕಲ್ | ಉದ್ಯೋಗಾಕಾಂಕ್ಷಿಗಳಿಗೆ ‘ಜಾಬ್ ಬ್ರಿಡ್ಜ್’ ಅಭಿಯಾನ

Date:

ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕವು ಆಗಸ್ಟ್‌ 1ರಿಂದ 15ರವರೆಗೆ ‘ಜಾಬ್ ಬ್ರಿಡ್ಜ್’ ಉದ್ಘಾಟನಾ ಅಭಿಯಾನ ಹಮ್ಮಿಕೊಂಡಿದೆ.

- Advertisement -

ಇಳಕಲ್‌ನ ಜಮಾಅತೆ ಇಸ್ಲಾಮಿ ಹಿಂದ್(JIH) ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಇಲಕಲ್ ಅಧ್ಯಕ್ಷ ಹುಸೈನ್ ಭಾಷಾ ಸೋಲಿಬಾವಿ ಅವರು ‘ಜಾಬ್ ಬ್ರಿಡ್ಜ್’ ವೆಬ್‌ಸೈಟ್‌ನ ಪೋಸ್ಟರ್‌ ಲೋಕಾರ್ಪಣೆ ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಕಾರ್ಯಕ್ರಮದಲ್ಲಿ ಮಾತನಾಡಿದ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯ ಕಾರ್ಯದರ್ಶಿ ಮುರ್ತುಜಾ ಕಕ್ಬಾಲ್, “ಆಧುನಿಕ ಕಾಲದಲ್ಲಿ ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಉದ್ಯೋಗದ ಹೆಸರಿನಲ್ಲಿ ಯುವಕರನ್ನು ವಂಚಿಸುವ ಪ್ರಕರಣಗಳೂ ಹೆಚ್ಚಾಗುತ್ತಿವೆ. ಈ ಹಿನ್ನೆಲೆ ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವೆ ವಿಶ್ವಾಸಾರ್ಹ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ‘ಜಾಬ್ ಬ್ರಿಡ್ಜ್’ ಎಂಬ ದೀರ್ಘಕಾಲಿಕ ಯೋಜನೆಯನ್ನು ಜಾರಿಗೆ ತರಲಾಗಿದೆ” ಎಂದು ತಿಳಿಸಿದರು.

“ಜಾಬ್ ಬ್ರಿಡ್ಜ್ ಯೋಜನೆಯ ಮೂಲಕ ಕಂಪನಿಗಳು ಹಾಗೂ ಉದ್ಯಮಿಗಳು ತಮ್ಮ ಉದ್ಯೋಗಾವಕಾಶಗಳ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬಹುದಾಗಿದೆ. ಅದೇ ವೇಳೆ ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಸೂಕ್ತ ಮಾಹಿತಿಯನ್ನು ತಲುಪಿಸಿ, ಇಬ್ಬರ ನಡುವೆ ಸಂಪರ್ಕ ಸಾಧಿಸುವ ಕೆಲಸವನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕೈಗೊಳ್ಳಲಿದೆ. ಈ ಯೋಜನೆ ಯಶಸ್ವಿಯಾಗಲು ಸಾರ್ವಜನಿಕರ ಸಹಕಾರ ಅಗತ್ಯ” ಎಂದು ಅವರು ಹೇಳಿದರು.

ಇದನ್ನೂ ಓದಿದ್ದೀರಾ? ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ನಿಂದ ಯುವಕರಿಗಾಗಿ ‘ಜಾಬ್ ಬ್ರಿಡ್ಜ್’ ವೆಬ್ ಸೈಟ್ ಲೋಕಾರ್ಪಣೆ

ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳು www.jobbridgenode.com ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 6366234200 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಇಲಕಲ್ ನಗರಾಧ್ಯಕ್ಷ ಮೊಹಮ್ಮದ್ ಸಿರಾಜ್ ಹುಣಚಗಿ, ಹಬೀಬಿ ಸೇರಿದಂತೆ ಪ್ರಮುಖರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ...

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ...

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...