ಜಮಾಅತೆ ಇಸ್ಲಾಮಿ ಹಿಂದ್ ಇಳಕಲ್ ಘಟಕದ ವತಿಯಿಂದ ಸೀರತ್ ಅಭಿಯಾನದ ಅಂಗವಾಗಿ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ವಿಷಯ ಕುರಿತು ಪ್ರವಾದಿ ಮುಹಮ್ಮದ್ ಅವರ ಜೀವನ ಹಾಗೂ ಸಂದೇಶ ಕುರಿತ ವಿಶೇಷ ಕಾರ್ಯಕ್ರಮವು ನಗರದ ಟೀಚರ್ಸ್ ಕಾಲೋನಿಯಲ್ಲಿ ನಡೆಯಿತು.
ಜಮಾಅತೆ ಇಸ್ಲಾಮಿ ಹಿಂದ್ ಇಳಕಲ್ ಘಟಕದ ಸದಸ್ಯ ಡಾ. ನೂರ್ ಮೊಹಮ್ಮದ್ ಬೆಳಕುದರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರವಾದಿ ಮುಹಮ್ಮದ್ ಅವರ ಜೀವನ, ಆದರ್ಶ, ಮಾನವೀಯತೆ, ಶಾಂತಿ, ಸಹೋದರತ್ವ ಹಾಗೂ ಸೌಹಾರ್ದತೆಯ ಸಂದೇಶಗಳನ್ನು ವಿವರಿಸಿದರು.
ಪ್ರವಾದಿ ಮುಹಮ್ಮದ್ ಅವರ ಜೀವನ ಮತ್ತು ಸಂದೇಶವನ್ನು ಸಮಾಜಕ್ಕೆ ತಲುಪಿಸುವುದು, ಅವರ ಆದರ್ಶಗಳನ್ನು ಜನರಿಗೆ ಪರಿಚಯಿಸುವುದು ಹಾಗೂ ಶಾಂತಿ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಡಾ. ವಿಜಯಕುಮಾರ್ ಹಳ್ಳ, ಡಾ. ಸಂತೋಷ್ ಪೂಜಾರಿ, ಬಸವರಾಜ ಬುದಾರಪ್ಪ, ಕೆಎಸ್ಆರ್ಟಿಸಿ ಡೆಪೋ ವ್ಯವಸ್ಥಾಪಕ ರಾಘವೇಂದ್ರ ಬುದಾರಪ್ಪ ಹಾಗೂ ನಿವೃತ್ತ ಉಪನ್ಯಾಸಕಿ ಸಿದ್ದಮ್ಮ ಪಾಟೀಲ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.





