ಬ್ರೇನ್ ಸ್ಟ್ರೋಕ್ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದು ಅವಶ್ಯ: ನರರೋಗ ತಜ್ಞ ಡಾ. ರಾಕೇಶ ಎ.ವಿ

Date:

ಮೆದುಳಿನ ಪಾರ್ಶ್ವವಾಯು (ಬ್ರೇನ್ ಸ್ಟ್ರೋಕ್) ಸಂಭವಿಸಿದಾಗ ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಅತ್ಯಂತ ಮುಖ್ಯ. ಲಕ್ಷಣಗಳನ್ನು ಆರಂಭದಲ್ಲಿಯೇ ಗುರುತಿಸಿ, ವಿಳಂಬವಿಲ್ಲದೆ ಚಿಕಿತ್ಸೆ ಕೊಡಿಸುವ ಮೂಲಕ ಗಂಭೀರ ಪರಿಣಾಮಗಳನ್ನು ಕಡಿಮೆ ಮಾಡಬಹುದು ಎಂದು ನರರೋಗ ತಜ್ಞ ಡಾ. ರಾಕೇಶ ಎ.ವಿ ಹೇಳಿದರು.

- Advertisement -

ಬಾಗಲಕೋಟೆ ನಗರದ ಬಿಟಿಡಿಎ ಸಭಾಭವನದಲ್ಲಿ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಆಶ್ರಯದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಾಗಿ ಹಮ್ಮಿಕೊಂಡಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

“ಸ್ಟ್ರೋಕ್ ಸಂಭವಿಸಿದಾಗ ಸಮಯ ಅತ್ಯಂತ ಅಮೂಲ್ಯವಾಗಿದ್ದು, ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ದೊರೆಯಬೇಕು. ಮುಖ ಒಂದು ಕಡೆ ವಾಲುವುದು, ಕೈ ಅಥವಾ ಕಾಲಿನಲ್ಲಿ ಹಠಾತ್ ದೌರ್ಬಲ್ಯ ಕಾಣಿಸಿಕೊಳ್ಳುವುದು, ಮಾತನಾಡಲು ತೊಂದರೆಯಾಗುವುದು ಸ್ಟ್ರೋಕ್‌ನ ಪ್ರಮುಖ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ಮಾಡದೆ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಬೇಕು. ಆರಂಭಿಕ ಹಂತದಲ್ಲಿ ಚಿಕಿತ್ಸೆ ದೊರೆತರೆ ಅಂಗವೈಕಲ್ಯ ಹಾಗೂ ಇತರ ಗಂಭೀರ ಪರಿಣಾಮಗಳ ಅಪಾಯವನ್ನು ಕಡಿಮೆ ಮಾಡಲು ಸಾಧ್ಯ” ಎಂದು ತಿಳಿಸಿದರು.

ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ಹೊಂದಬೇಕು. ಸ್ಟ್ರೋಕ್‌ನ ಲಕ್ಷಣಗಳನ್ನು ಗುರುತಿಸುವುದು, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ವಿಜಯಕುಮಾರ ಹೊಸೂರ, ಖಜಾಂಜಿ ತುಕಾರಾಂ ಟಿ.ಎನ್. ಸೇರಿದಂತೆ ಕ್ಲಬ್‌ನ ಸದಸ್ಯರು ಪಾಲ್ಗೊಂಡಿದ್ದರು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ವಾಣಿ ವಿಜಯಕುಮಾರ ಹೊಸೂರ, ಪ್ರತಿಭಾ ದಂಡಿನ ಸೇರಿದಂತೆ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು.

ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಇಂಜಿನಿಯರ್ ಚಂದ್ರಹಾಸ ಬಂಡಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಎಸ್. ಕರಗಾರ ಅವರು ಆರೋಗ್ಯ ಜಾಗೃತಿ ಮೂಡಿಸುವ ಇಂತಹ ಉಪಯುಕ್ತ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್‌ನ ಕಾರ್ಯವನ್ನು ಶ್ಲಾಘಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ ಮೋದಿ ಪ್ರಚಾರ ನಡೆಸಿದರೆ ಶಿಷ್ಟಾಚಾರವೇ?

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...