ಜಮಖಂಡಿ | ಜು.19ರಂದು ಗೋಟೆಯಲ್ಲಿ ಬಸವ-ಭೀಮ ಸಂಗಮ ಸಹೋದರತ್ವ ಸಮಾವೇಶ

Date:

ಜಮಖಂಡಿ ತಾಲ್ಲೂಕಿನ ಗೋಟೆ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜುಲೈ 19ರಂದು ಬೆಳಿಗ್ಗೆ 11 ಗಂಟೆಗೆ ಸತ್ಯ ಶೋಧಕ ಸಂಘದ ಆಶ್ರಯದಲ್ಲಿ ಬಸವ-ಭೀಮ ಸಂಗಮ ಸಹೋದರತ್ವ ಸಮಾವೇಶ ಆಯೋಜಿಸಲಾಗಿದೆ.

- Advertisement -

ಸಮಾವೇಶದ ಸಾನ್ನಿಧ್ಯವನ್ನು ಮೈಸೂರಿನ ಉರಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಓಲೆಮಠದ ಆನಂದ ದೇವರು ವಹಿಸಲಿದ್ದಾರೆ. ರಾಜ್ಯದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆ ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸತ್ಯ ಶೋಧಕ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪರಶುರಾಮ ಮಹಾರಾಜ ಆಶಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಆರ್.ಬಿ. ತಿಮ್ಮಾಪೂರ, ಜಗದೀಶ ಗುಡಗುಂಟಿ, ಉಮೇಶ ಮೇಟಿ, ಮಾಜಿ ಶಾಸಕ ಆನಂದ ನ್ಯಾಮಗೌಡ, ಸುಶೀಲಕುಮಾರ ಬೆಳಗಲಿ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಹೋದರತ್ವದ ಸಂದೇಶವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶದ ಯಶಸ್ಸಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...