ಜಮಖಂಡಿ | ದಲಿತ ಯುವಕನ ಹತ್ಯೆ ಪ್ರಕರಣ: ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

Date:

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ತನಿಖೆ ಕೈಗೊಂಡು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ(ಡಿ ಜೆ ಸಾಗರ ಬಣ) ಬಾಗಲಕೋಟೆ ಜಿಲ್ಲಾ ಸಮಿತಿಯಿಂದ ಜಮಖಂಡಿ ವಲಯದ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

“ಸಾವಳಗಿ ಗ್ರಾಮದಲ್ಲಿ ಮಾರ್ಚ್‌ 11ರಂದು ದಲಿತ ಯುವಕ(ಸುದೀಪ ಬಸಪ್ಪ ಪಾಂಗೆ)ನ ಹತ್ಯೆಯಾಗಿರುವುದು ಖಂಡನೀಯ. ಅಂದು ಗ್ರಾಮದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಗ್ರಾಮದ ಸಾರ್ವಜನಿಕರು ಮತ್ತು ವಿದ್ಯಾರ್ಥಿನಿಯರ ಬೋಧಕರು ಭಾಗವಹಿಸುವುದು ಸಹಜ. ಆದರೆ ಈ ಕಾರ್ಯಕ್ರಮಕ್ಕೆ ಬಂದೋಬಸ್ತ್ ಅಥವಾ ಪರವಾನಿಗೆ ಪಡೆದುಕೊಂಡಿ‌ದ್ದರ ಬಗ್ಗೆ ತನಿಖೆ ಮಾಡಬೇಕಿತ್ತು. ಆದರೆ ಯಾವುದೇ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿರಲಿಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

“ಸಾರ್ವಜನಿಕರು ಸಾಕಷ್ಟು ಜನರಿದ್ದರೂ ಕೂಡ ಸಾಯುವ ಮಟ್ಟಕ್ಕೆ ಹಲ್ಲೆ ಮಾಡಿರುವುದನ್ನು ನೋಡಿದರೆ, ಸ್ಥಳೀಯ ಪೊಲೀಸರ ಕರ್ತವ್ಯದ ಬಗ್ಗೆ ಅನುಮಾನ ಬರುವುದು ಸಹಜ. ಸ್ಥಳೀಯವಾಗಿಯೇ ಠಾಣೆ ಇದ್ದು, ಸುಮಾರು 30 ಮಂದಿಗೂ ಅಧಿಕ ಸಿಬ್ಬಂದಿಗಳಿದ್ದರೂ, ಕಾರ್ಯಕ್ರಮದ ಬಗ್ಗೆ ಮಾಹಿತಿ ತಿಳಿದುಕೊಂಡು ಬಂದೋಬಸ್ತ್ ಕಾರ್ಯ ನಿರ್ವಹಿಸಬಹುದಾಗಿತ್ತು. ಆದರೆ ಇಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರು ಹಾಗೂ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ದಲಿತ ಯುವಕನ ಹತ್ಯೆಯಾಗಿದೆ”‌ ಎಂದು ಆರೋಪಿಸಿದರು.

“ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಿಸಿಟಿವಿ ವಿಡಿಯೊ ನೋಡಿದರೆ ಆರೋಪಿಗಳಿಗೆ ಯಾವುದೇ ರೀತಿಯ ಕಾನೂನಿನ ಭಯ ಇಲ್ಲದಿರುವುದು ಸಾಬೀತಾಗುತ್ತದೆ. ವಿಡಿಯೊದಲ್ಲಿ ಕಾಣುವಂತಹ ಮತ್ತು ಈ ಘಟನೆಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾದಂತಹ ಎಲ್ಲರನ್ನೂ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಕರ್ತವ್ಯ ನಿರ್ಲಕ್ಷ್ಯ ಮಾಡಿದ ಅಧಿಕಾರಿಗಳ ಮೇಲೆಯೂ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಪ್ರೀತಿ-ಸ್ನೇಹವೇ ನಿಜವಾದ ದೇವರು: ಸಾಹಿತಿ ಪ್ರೊ. ತುಕಾರಾಂ

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ, ಜಮಖಂಡಿ ತಾಲೂಕು ಸಂಚಾಲಕರಾದ ದೀಪಕ ಕಂಕಣವಾಡಿ, ರಬಕವಿ ಬನಹಟ್ಟಿ, ತಾಲೂಕು ಸಂಚಾಲಕರು ಬಸವರಾಜ ದೊಡಮನಿ, ಸಾವಳಗಿ ವಲಯ ಸಂಚಾಲಕರು ಅಮಿತ್‌ ಸೂರಗೊಂಡ್, ಸದಾಶಿವ ಐನಾಪುರ, ಅಶೋಕ ಸಿಂಗೆ, ಶಾಮ್ ಹಿಪ್ಪರಗಿ, ಶಂಕರ ಹೊಸಮನಿ, ಶಹಜಾನಂದ ದೊಡ್ಡಮನಿ, ಸೋಮು ಶಿಂಗೆ, ವಿಠ್ಠಲ ಕಾಂಬ್ಳೆ, ವಿದ್ಯಾಸಾಗರ್ ಹೊಸಮನಿ, ಬಸವರಾಜ ಶ್ರೀನಾಥ, ಹಣಮಂತ ಶಿಂಗೆ ಇನ್ನೂ ಅನೇಕ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ರೈತ ಸಾಧಕರಿಗೆ ಗೌರವದ ವೇದಿಕೆ; ಡಿ. 23ರಿಂದ ತೋಟಗಾರಿಕೆ ಮೇಳ

ತೋಟಗಾರಿಕೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ರೈತರು ಹಾಗೂ ರೈತ ಮಹಿಳೆಯರನ್ನು ಗುರುತಿಸಿ...

ಬಾಗಲಕೋಟೆ | SIR : ಕರಡು ಪಟ್ಟಿಗೆ 15,227 ಹೊಸ ಮತದಾರರು ಸೇರ್ಪಡೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ 18...

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...

ಬಾಗಲಕೋಟೆ | ಪತ್ರಕರ್ತರ ಸಾಮಾಜಿಕ ಕಾಳಜಿ ಸಮಾಜದ ಅಭಿವೃದ್ಧಿಗೆ ಪೂರಕ: ಬಸವರಾಜ ಛಲವಾದಿ

ಸಮಾಜದಲ್ಲಿನ ಸಮಸ್ಯೆಗಳನ್ನು ಗುರುತಿಸಿ, ಜನರ ಧ್ವನಿಯಾಗಿ ಕಾರ್ಯನಿರ್ವಹಿಸುವ ಪತ್ರಕರ್ತರು ತಮ್ಮ ಬರವಣಿಗೆಯ...