ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

Date:

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ ವಿಶೇಷವಾಗಿ ಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿ ಜಮಖಂಡಿಯಲ್ಲಿ ರಾಜ್ಯ ರೈತ ಸಂಘ ಮತ್ತು ನಂದಿ ಸೇನೆ ನೇತೃತ್ವದಲ್ಲಿ ರೈತರು ಎತ್ತಿನ ಬಂಡಿಯಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕು ಆಡಳಿತ ಸೌಧದ ಎದುರು ಜಮಾಯಿಸಿದ ರೈತರು, ಎತ್ತುಗಳೊಂದಿಗೆ ಕೃಷಿ ಪದ್ಧತಿಯನ್ನು ಉಳಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಬಳಿಕ ತಹಸೀಲ್ದಾರ್ ಅನಿಲ್ ಬಡಿಗೇರ್ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ರೈತ ಮುಖಂಡ ಮಹೇಶ್ ದೇಶಪಾಂಡೆ ಮಾತನಾಡಿ, “ಕೃಷಿ ಚಟುವಟಿಕೆಯಲ್ಲಿ ರೈತನಿಗೆ ಆಪ್ತವಾಗಿದ್ದ ಎತ್ತುಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಜೋಡೆತ್ತುಗಳನ್ನು ಹೊಂದಿರುವ ರೈತರಿಗೆ ತಿಂಗಳಿಗೆ ರೂ. 11 ಸಾವಿರ ಪ್ರೋತ್ಸಾಹಧನ ನೀಡುವ ಮೂಲಕ ಸರ್ಕಾರ ನಂದಿ ಸಂಸ್ಕೃತಿಯನ್ನು ಉಳಿಸಬೇಕು” ಎಂದು ಒತ್ತಾಯಿಸಿದರು.

“ಎತ್ತುಗಳು ಕೇವಲ ಕೃಷಿ ಕಾರ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ಅವುಗಳಿಂದ ದೊರೆಯುವ ಸಗಣಿ ಸೇರಿದಂತೆ ವಿವಿಧ ಸಂಪನ್ಮೂಲಗಳನ್ನು ಬಳಸಿ ಜೈವಿಕ ಗೊಬ್ಬರ ಹಾಗೂ ಬಯೋಗ್ಯಾಸ್ ಉತ್ಪಾದನೆ ಮಾಡಬಹುದಾಗಿದೆ. ಹೀಗಾಗಿ ಎತ್ತು ಆಧಾರಿತ ಕೃಷಿಯನ್ನು ಪರಿಸರ ಸ್ನೇಹಿ ಕೃಷಿ ಪದ್ಧತಿಯಾಗಿ ಸರ್ಕಾರ ಪರಿಗಣಿಸಬೇಕು” ಎಂದು ಹೇಳಿದರು.

ತಾಲೂಕು ರೈತ ಸಂಘದ ಉಪಾಧ್ಯಕ್ಷ ಸಿದ್ದು ಗೌಡ ಪಾಟೀಲ ಮಾತನಾಡಿ, “ಎತ್ತುಗಳೊಂದಿಗೆ ಕೃಷಿ ಮಾಡುವ ರೈತನೇ ನಿಜವಾದ ‘ನೇಗಿಲ ಯೋಗಿ’. ಕೃಷಿಯಲ್ಲಿ ಯಂತ್ರಗಳ ಬಳಕೆ ಹೆಚ್ಚಿದಂತೆ ಮಣ್ಣಿನ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತಿದೆ. ಭೂಮಿಯ ಇಂಗಾಲದ ಪ್ರಮಾಣ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಎತ್ತು ಆಧಾರಿತ ಕೃಷಿಯ ಮಹತ್ವದ ಕುರಿತು ವಿಶ್ವವಿದ್ಯಾಲಯಗಳು ನಡೆಸಿರುವ ಸಂಶೋಧನೆಗಳ ವರದಿಗಳನ್ನು ಸರ್ಕಾರ ತರಿಸಿಕೊಂಡು ಸೂಕ್ತ ನೀತಿ ರೂಪಿಸಬೇಕು” ಎಂದು ಆಗ್ರಹಿಸಿದರು.

ಸಿದ್ದೇಶ್ವರ ಸ್ವಾಮಿಗಳ ಹೆಸರಿನಲ್ಲಿ ‘ನಂದಿ ಸಂಸ್ಕೃತಿ ಪುನಶ್ಚೇತನ ಕಾನೂನು’ ಜಾರಿಗೊಳಿಸಬೇಕು, ರಾಜ್ಯ ಬಜೆಟ್‌ನಲ್ಲಿ ಶೇ.10ರಷ್ಟು ಅನುದಾನ ಮೀಸಲಿಡಬೇಕು. ನಂದಿ ಆಧಾರಿತ ವಿದ್ಯುತ್, ಅಡುಗೆ ಎಣ್ಣೆ, ಗ್ಯಾಸ್, ಔಷಧ ಹಾಗೂ ಗೊಬ್ಬರ ಸೇರಿದಂತೆ ವಿವಿಧ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಬೇಕು ಎಂದು ಒತ್ತಾಯಿಸಿದರು.

ಅಜಯ ಕುಲಕರ್ಣಿ ಮಾತನಾಡಿ, “ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾನುವಾರುಗಳ ಸಂರಕ್ಷಣೆಗೆ ಪ್ರತ್ಯೇಕ ಯೋಜನೆ ರೂಪಿಸಬೇಕು. ಮಾನವ ಜೀವನದ ಸಮೃದ್ಧಿಗೆ ಪ್ರಾಣಿ, ಪಕ್ಷಿ ಹಾಗೂ ಜಾನುವಾರುಗಳ ಅಸ್ತಿತ್ವವೂ ಅಗತ್ಯವಾಗಿದ್ದು, ಅವುಗಳ ಸಂರಕ್ಷಣೆಯಿಂದ ಪರಿಸರ ಸಮತೋಲನ ಕಾಪಾಡಲು ಸಾಧ್ಯ” ಎಂದರು.

ಪ್ರತಿಭಟನೆಯಲ್ಲಿ ರೈತ ಸಂಘದ ಅಧ್ಯಕ್ಷ ಶ್ರೀಶೈಲ ಭೂಮಾರ, ಮುತ್ತಪ್ಪ ಕೋಮಾರ, ಬಾಹುಬಲಿ ನ್ಯಾಮಗೌಡ, ವಿಷ್ಣು ಕಂಕಣವಾಡಿ, ವಿಠ್ಠಲ್ ಚೌಹಾನ, ಬಿ.ಆರ್. ಸಿರಗುಪ್ಪಿ, ಜಿ.ಎಚ್. ಪಾಟೀಲ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾರರೇ ಎಚ್ಚರ, ನಿಮ್ಮ ಬೂತ್‌ನಲ್ಲಿ ಫಾರ್ಮ್-7 ಅರ್ಜಿ ಸಲ್ಲಿಕೆಯಾಗಿದೆಯೇ ಪರಿಶೀಲಿಸಿ: ಸಿಎಂ ಡಿಕೆಶಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಸಲ್ಲಿಕೆಯಾಗಿರುವ ಫಾರ್ಮ್-7 ಅರ್ಜಿಗಳ ಕುರಿತು ಎಚ್ಚರಿಕೆ...

SIR: ರಾಜ್ಯದಲ್ಲಿ ಲಕ್ಷಾಂತರ ದಲಿತ, ಬುಡಕಟ್ಟು, ಅಲ್ಪಸಂಖ್ಯಾತ ಮತ್ತು ಮಹಿಳಾ ಮತದಾರರ ಹೆಸರು ಡಿಲೀಟ್

ರಾಜ್ಯದಲ್ಲಿ ಇತ್ತೀಚೆಗೆ ನಡೆಸಲಾದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ಕೆಪಿಎಸ್‌ಸಿ ಅಕ್ರಮ: ಗರಿಷ್ಠ ಅಂಕ ಪಡೆದ 14 ಅಭ್ಯರ್ಥಿಗಳಿಗೆ ಪರೀಕ್ಷೆಗೂ ಮುನ್ನವೇ ಸಿಕ್ಕಿತ್ತು ಪ್ರಶ್ನೆಗಳು!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯರ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ...

ಚಾಮರಾಜನಗರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ...