ಜಮಖಂಡಿ | ಬರ ಪರಿಹಾರ, ಸಾಲ ಮನ್ನಾ ಆಗ್ರಹಿಸಿ ರೈತರ ಪ್ರತಿಭಟನೆ

Date:

ರಾಜ್ಯದಲ್ಲಿ ನಿಗದಿತ ಪ್ರಮಾಣದ ಮಳೆಯಾಗದೆ ಬರಗಾಲದ ಛಾಯೆ ಮೂಡಿದೆ, ಕೊಳವೆ ಬಾವಿಗಳು, ಬಾವಿ, ನದಿ, ಹಳ್ಳ-ಕೊಳ್ಳ ಸಂಪೂರ್ಣ ಬತ್ತಿವೆ. ಇದರಿಂದ ರೈತರು ಕಂಗಾಲಾಗಿದ್ದು, ಕೂಡಲೇ ಸರ್ಕಾರ ಒಣಗುತ್ತಿರುವ ಬೆಳೆಗಳಿಗೆ ಪರಿಹಾರ ಘೋಷಣೆ ಮಾಡಬೇಕು ಎಂದು ಯುವ ರೈತ ಮುಖಂಡ ಯಲ್ಲಪ್ಪ ಹೆಗಡೆ ಸರ್ಕಾರಕ್ಕೆ ಆಗ್ರಹಿಸಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ರೈತರ ಸಾಲ ಮನ್ನಾ , ಬರ ಪರಿಹಾರ ಹಾಗೂ ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ತಾಲೂಕು ಅಧ್ಯಕ್ಷ ಶ್ರೀಶೈಲ ಭೂಮವಾರ ಮಾತನಾಡಿ, “ಮಳೆ ಬಾರದಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಬೆಳೆಯಿರದೆ ಬರಗಾಲದ ಸ್ಥಿತಿ ನಿರ್ಮಾಣವಾದ್ದರಿಂದ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ಆಸರೆಯಾಗಬೇಕು” ಎಂದರು.

ಮುಖಂಡ ಗೂಡಸಾಬ ಹೊನವಾಡ ಮಾತನಾಡಿ, “ವಿದ್ಯುತ್ ಖಾಸಗೀಕರಣದಿಂದ ರೈತರಿಗೆ ಅನಾನುಕೂಲವಾಗುತ್ತದೆ. ಸರ್ಕಾರ ಈ ಯೋಜನೆ ಕೈಬಿಡಬೇಕು, ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಮುಖಂಡ ರಾಜು ನದಾಫ್ ಮಾತನಾಡಿ, “ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಪ್ರತಿಯೊಂದು ಇಲಾಖೆಯಲ್ಲಿ ಶುಲ್ಕದ ನಾಮಫಲಕ ಅಳವಡಿಸಬೇಕು. ರೈತರನ್ನು ಅತ್ತಿಂದಿತ್ತ ಅಲೆದಾಡಿಸದೆ ಸರಿಯಾದ ಸಮಯಕ್ಕೆ ದಾಖಲೆ ಒದಗಿಸಬೇಕು. ಹೆಚ್ಚುವರಿ ಹಣ ತೆಗೆದುಕೊಳ್ಳಬಾರದು. ಸರಿಯಾದ ಸಮಯಕ್ಕೆ ಅಧಿಕಾರಿಗಳು ಕಚೇರಿಗೆ ಹಾಗೂ ಗ್ರಾಮಕ್ಕೆ ಭೇಟಿ ನೀಡಬೇಕು” ಎಂದು ಒತ್ತಾಯಿಸಿದರು.

ಕಲ್ಲಪ್ಪ ಬಿರಾದಾರ್, ಸಿದ್ದಪ್ಪ ಬನಜನವರ್, ಪ್ರಸನ್ನ ಜಮಖಂಡಿ, ಬಾಹುಬಲಿ ನ್ಯಾಮಗೌಡ, ಸುರೇಶ ಹಂಚಿನಾಳ, ಸಿದ್ದನಗೌಡ ಪಾಟೀಲ, ಸಿದ್ದಪ್ಪ ಬಳಗನ್ನವರ್, ಶಿವಾಜಿ ಕದಮ, ಶ್ರೀಶೈಲ ಮೈಗೂರ್, ಚಿದಾನಂದ ಬಿರಾದಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

ಕೋಲಾರ | ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಡಾ. ನಾಗರಾಜ್

ಆಗ್ನೇಯ ಪದವೀಧರರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ...