ಜಮಖಂಡಿ | ಬಿಡದಿ ರೈತರ ʻಭೂ ಸ್ವಾಧೀನʼ ಖಂಡನೀಯ: ಶಾಸಕ ಜಗದೀಶ ಗುಡಗುಂಟಿ

Date:

ರಿಯಲ್ ಎಸ್ಟೇಟ್ ಲಾಬಿಗೆ ಮಣಿದು ಬಿಡದೆ ಟೌನ್‌ಶಿಪ್ ಹೆಸರಿನಲ್ಲಿ 7,481 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನವನ್ನು ತಕ್ಷಣ ಕೈಬಿಡಬೇಕು ಎಂದು ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಆಗ್ರಹಿಸಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರ ಜಮೀನು ಕಬಳಿಸಲು ಸರ್ಕಾರ ವಿವಿಧ ತಂತ್ರಗಳನ್ನು ಬಳಸುತ್ತಿದ್ದು, ಅಧಿಕಾರಿಗಳ ಮೂಲಕ ರೈತರ ಮೇಲೆ ಒತ್ತಡ ಹಾಗೂ ಬೆದರಿಕೆ ಹಾಕುವ ಕೆಲಸ ನಡೆಯುತ್ತಿದೆ. ಇದು ರೈತ ವಿರೋಧಿ ನಡೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

“ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಮರ್ಪಕ ಮಳೆಯ ಕೊರತೆಯಿಂದ ಬಿತ್ತನೆ ಕಾರ್ಯವೇ ನಡೆದಿಲ್ಲ. ರೈತರು ಬರದ ಸಂಕಷ್ಟಕ್ಕೆ ಸಿಲುಕಿದ್ದು, ಎಕರೆಗೆ ₹50 ಸಾವಿರ ಪರಿಹಾರ ಘೋಷಿಸಬೇಕು. ಜೊತೆಗೆ ರಾಜ್ಯದ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು” ಎಂದು ಒತ್ತಾಯಿಸಿದರು.

“ಬರಪರಿಹಾರ ವಿತರಣೆ, ಬೆಳೆ ವಿಮೆ ಪರಿಹಾರ, ಪಿಎಂಎಫ್‌ಬಿವೈ ಯೋಜನೆ ಅನುಷ್ಠಾನ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ರಸಗೊಬ್ಬರ ಹಾಗೂ ಬೀಜ ಪೂರೈಕೆ ಸೇರಿದಂತೆ ಕೃಷಿ ಕ್ಷೇತ್ರದ ಹಲವು ವಿಷಯಗಳಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕಿಸಾನ್ ಸನ್ಮಾನ್ ಯೋಜನೆಯಡಿ ರಾಜ್ಯ ಸರ್ಕಾರ ನೀಡಬೇಕಿದ್ದ ಪಾಲಿನ ಹಣವನ್ನೂ ಸ್ಥಗಿತಗೊಳಿಸಲಾಗಿದೆ” ಎಂದು ದೂರಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ₹90 ಸಾವಿರ ಕೋಟಿ ಅಗತ್ಯವಿದ್ದರೂ ಸರ್ಕಾರ ಕೇವಲ ₹7 ಸಾವಿರ ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಯೋಜನೆಗೆ ಅಗತ್ಯವಿರುವ ಸಾವಿರಾರು ಎಕರೆ ಭೂಮಿಗೆ ಪರಿಹಾರ ನೀಡುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಹಿಪ್ಪರಗಿ ಜಲಾಶಯದ ಕ್ರೆಸ್ಟ್‌ಗೇಟ್ ಅಳವಡಿಕೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಜಮಖಂಡಿ ನಗರದ ಯುಜಿಡಿ ಯೋಜನೆ ಜಾರಿಗೊಳಿಸಲು ಸುಮಾರು ₹1,800 ಕೋಟಿ ಅನುದಾನ ಅಗತ್ಯವಿದ್ದು, ಅದರ ಬ್ಲೂಪ್ರಿಂಟ್ ಸರ್ಕಾರಕ್ಕೆ ಸಲ್ಲಿಸಲಾಗಿದೆ. ನಗರ ಅಭಿವೃದ್ಧಿಗೆ ಜನಸಂಖ್ಯೆಗೆ ಅನುಗುಣವಾಗಿ ಸುಮಾರು 2,200 ಎಕರೆ ಭೂಮಿ ಅಗತ್ಯವಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...