ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಜೂನ್ 10ರ ಬೆಳಿಗ್ಗೆ 10.30 ರಿಂದ 1.30ರವರೆಗೆ ಜಮಖಂಡಿ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದು, ಸಾರ್ವಜನಿಕರಿಂದ ದೂರುಗಳನ್ನು ಆಹ್ವಾನಿಸಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿನಾಕಾರಣ ವಿಳಂಬ ಹಾಗೂ ಇನ್ನಿತರ ತೊಂದರೆ ಆಗಿದ್ದರೆ ಅಂತಹ ಅಧಿಕಾರಿ ಮತ್ತು ನೌಕರರ ವಿರುದ್ಧ ಸಾರ್ವಜನಿಕರು ಜನಸಂಪರ್ಕ ಸಭೆಗೆ ಹಾಜರಾಗಿ ಲಿಖಿತ ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ.
ಇದನ್ನೂ ಓದಿದ್ದೀರಾ? ಕೊಪ್ಪಳ | ಜೂ.30ರಿಂದ ಜು.29ವರೆಗೆ ಎಸ್ಐಆರ್
ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಸ್ಥಳೀಯ ಅಧಿಕಾರಿಗಳೊಂದಿಗೆ ಇತ್ಯರ್ಥ ಪಡಿಸಲಾಗುತ್ತದೆ. ಇತ್ಯರ್ಥವಾಗದೇ ಇದ್ದ ದೂರುಗಳನ್ನು ನಿಗದಿತ ಅರ್ಜಿ ನಂ.1 ಮತ್ತು 2ರ ನಮೂನೆಯಲ್ಲಿ ಸ್ವೀಕರಿಸಿ ಅವುಗಳನ್ನು ಲೋಕಾಯುಕ್ತರಿಗೆ ಕಳುಹಿಸಲಾಗುತ್ತದೆ.
ಮಾಹಿತಿಗೆ ಬಾಗಲಕೋಟೆ ಲೋಕಾಯುಕ್ತ ಕಚೇರಿ ದೂ.ಸಂ. 08354-236200, 295170, 20.9364062510, 93640 62558, 93640 62641 ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಪ್ರಕಟಣೆ ತಿಳಿಸಿದೆ.





