ಮುಧೋಳ | ಮಳೆ ಅಭಾವ, ಒಣಗಿದ ಬೆಳೆ; ಬರ ಪಟ್ಟಿ ಪರಿಷ್ಕರಣೆಗೆ ರೈತರ ಆಗ್ರಹ

Date:

ಮುಂಗಾರು ಕೈಹಿಡಿಯಲಿದೆ, ಬಿತ್ತನೆ ಮಾಡಿದ ಬೆಳೆ ಕೈತುಂಬ ಫಸಲು ನೀಡಲಿದೆ ಎಂಬ ನಿರೀಕ್ಷೆಯಲ್ಲಿ ಸಾಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಜಮೀನಿಗೆ ಇಳಿದಿದ್ದ ಮುಧೋಳ ತಾಲೂಕಿನ ರೈತರಿಗೆ ಇದೀಗ ಮಳೆಯೇ ಮುಳುವಾಗಿದೆ. ಬಿತ್ತನೆ ಬಳಿಕ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದೆ ಹೊಲಗಳಲ್ಲಿನ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗುತ್ತಿದ್ದು, ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

- Advertisement -

ಮಳೆ ಕೊರತೆಯಿಂದ ಸೂರ್ಯಕಾಂತಿ, ಸಜ್ಜೆ, ಮೆಕ್ಕೆಜೋಳ, ಈರುಳ್ಳಿ, ಹೆಸರು, ಸೋಯಾಬೀನ್, ಉದ್ದು, ಅಲಸಂದಿ ಸೇರಿದಂತೆ ವಿವಿಧ ಏಕದಳ ಮತ್ತು ದ್ವಿದಳ ಧಾನ್ಯಗಳ ಬೆಳೆಗಳು ಹಾನಿಗೀಡಾಗುತ್ತಿವೆ. ಕೆಲವೆಡೆ ಬೆಳೆಗಳು ಸಂಪೂರ್ಣ ಬಾಡುವ ಹಂತ ತಲುಪಿದ್ದು, ಅವುಗಳನ್ನು ಉಳಿಸಿಕೊಳ್ಳುವುದಕ್ಕಿಂತ ಹರಗಿ ಜಮೀನು ಹಸನು ಮಾಡಿ ಪರ್ಯಾಯ ಬೆಳೆ ಬೆಳೆಯುವ ಅನಿವಾರ್ಯತೆ ರೈತರ ಮುಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಬರದ ನೆರಳಲ್ಲಿ ಮುಧೋಳ
ಮುಧೋಳ ಹಾಗೂ ಲೋಕಾಪುರ ಹೋಬಳಿ ವ್ಯಾಪ್ತಿಯಲ್ಲಿ ಮಳೆ ಕೊರತೆಯ ಪರಿಣಾಮ ಸ್ಪಷ್ಟವಾಗಿ ಗೋಚರಿಸುತ್ತಿದ್ದರೂ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸದಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ. ಹವಾಮಾನ ಇಲಾಖೆಯ ಮಾನದಂಡಗಳ ಆಧಾರದ ಮೇಲೆ ಬರ ಘೋಷಣೆ ಕೈಬಿಡಲಾಗಿರಬಹುದು. ಆದರೆ, ಮುಂಗಾರು ಪೂರ್ವದಲ್ಲಿ ಸುರಿದ ಅಲ್ಪ ಪ್ರಮಾಣದ ಮಳೆಯನ್ನು ನಂಬಿ ರೈತರು ಬಿತ್ತನೆ ಕೈಗೊಂಡಿದ್ದರು. ಬಳಿಕ ಸಕಾಲದಲ್ಲಿ ಮಳೆ ಬಾರದ ಪರಿಣಾಮ ಬಿತ್ತನೆ ಮಾಡಿರುವ ಬೆಳೆಗೆ ನೀರಿನ ಕೊರತೆ ಎದುರಾಗಿದೆ.

ತಾಲೂಕಿನ ಒಟ್ಟು 56,677 ಹೆಕ್ಟೇರ್ ಜಮೀನಿನ ಪೈಕಿ 53,272 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿದ್ದು, ಮಳೆಯಾಶ್ರಿತ ಜಮೀನುಗಳ ಜತೆಗೆ ಕೊಳವೆಬಾವಿ, ನದಿ ಹಾಗೂ ಕಾಲುವೆ ನೀರಾವರಿ ಪ್ರದೇಶಗಳೂ ಇವೆ. ಆದರೆ ಮಳೆ ಕೊರತೆಯ ತೀವ್ರತೆ ನೀರಾವರಿ ಜಮೀನುಗಳ ಮೇಲೂ ಪರಿಣಾಮ ಬೀರಿದ್ದು, ಸಮರ್ಪಕ ನೀರಿನ ಲಭ್ಯತೆ ಇಲ್ಲದೆ ಬೆಳೆ ಉಳಿಸಿಕೊಳ್ಳುವುದು ಕಷ್ಟವಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಬರ ಪಟ್ಟಿ ಪರಿಷ್ಕರಣೆಗೆ ಆಗ್ರಹ
ತಾಲೂಕಿನಲ್ಲಿ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೆಳೆ ಹಾನಿಯ ಕುರಿತು ಸಮಗ್ರ ಸಮೀಕ್ಷೆ ನಡೆಸಿ ಬರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಶೇ.33ರಿಂದ 50ರಷ್ಟು ಬೆಳೆ ಹಾನಿಯಾಗಿರುವ ಪ್ರದೇಶಗಳನ್ನು ಅಧ್ಯಯನ ಸಮಿತಿ ಪರಿಶೀಲಿಸಿ ವರದಿ ನೀಡಿದ ಬಳಿಕ ಬರ ಪರಿಹಾರಕ್ಕೆ ಅವಕಾಶವಿದೆ ಎಂಬ ಕೃಷಿ ಇಲಾಖೆ ಅಧಿಕಾರಿಗಳ ಹೇಳಿಕೆ ರೈತರಿಗೆ ಕೊಂಚ ನಿರೀಕ್ಷೆ ಮೂಡಿಸಿದೆ. ಆದರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರದ ಪ್ರಸ್ತಾವನೆ, ಕೇಂದ್ರ ಅಧ್ಯಯನ ಸಮಿತಿಯ ಸಮೀಕ್ಷೆ ಸೇರಿದಂತೆ ವಿವಿಧ ಹಂತಗಳ ಪ್ರಕ್ರಿಯೆ ವಿಳಂಬವಾಗಬಹುದು ಎಂಬ ಆತಂಕವೂ ರೈತರನ್ನು ಕಾಡುತ್ತಿದೆ.

ಹೀಗಾಗಿ ವಿಳಂಬ ಮಾಡದೆ ಮುಧೋಳ ತಾಲೂಕಿನಲ್ಲಿ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಬರ ಪಟ್ಟಿಗೆ ತಾಲೂಕನ್ನು ಸೇರಿಸುವಂತೆ ರೈತ ಮುಖಂಡರು ಒತ್ತಾಯಿಸಿದ್ದಾರೆ.

ರೈತ ಮುಖಂಡ ಯಲ್ಲಪ ಹೆಗಡೆ ಈದಿನ.ಕಾಮ್‌ ಜೊತೆ ಮಾತನಾಡಿ,”ಮುಧೋಳ ತಾಲೂಕಿನಲ್ಲಿ ಬರದ ವಾತಾವರಣ ನಿರ್ಮಾಣವಾಗಿದ್ದು, ಮುಂಗಾರು ಬೆಳೆಗಳು ಕಳೆಗುಂದಿವೆ. ಸಾಲ ಮಾಡಿ, ಬೆವರು ಸುರಿಸಿ ಬೆಳೆದ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ರೈತರ ಸಂಕಷ್ಟವನ್ನು ಮನಗಂಡು ಜಿಲ್ಲಾಡಳಿತ ಕೂಡಲೇ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಬೇಕು.” ಎಂದು ಒತ್ತಾಯಿಸಿದ್ದಾರೆ.

ಮುಧೋಳ ಸಹಾಯಕ ಕೃಷಿ ನಿರ್ದೇಶಕ ಎಸ್. ಬಿ ದೊಡ್ಡಮನಿ ಮಾತನಾಡಿ,”ಬಿತ್ತನೆ ಬಳಿಕ ಬೆಳೆಗಳ ಸ್ಥಿತಿಗತಿ ಕುರಿತು ಪ್ರಾಥಮಿಕ ಮಾಹಿತಿಯನ್ನು ಈಗಾಗಲೇ ಮೇಲಧಿಕಾರಿಗಳಿಗೆ ಸಲ್ಲಿಸಲಾಗಿದೆ. ಬರ ಪಟ್ಟಿ ಪರಿಷ್ಕರಣೆಯಾದಲ್ಲಿ ಮುಧೋಳ ತಾಲೂಕು ಬರಪೀಡಿತ ಪ್ರದೇಶವಾಗಿ ಘೋಷಣೆಯಾಗುವ ಸಾಧ್ಯತೆಯಿದೆ.”ಎಂದು ಮಾಹಿತಿ ನೀಡಿದರು.

ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿರುವ ನಡುವೆಯೇ ಮುಧೋಳ ತಾಲೂಕು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರಗುಳಿದಿರುವುದು ರೈತರ ಆತಂಕ ಹೆಚ್ಚಿಸಿದೆ. ಹೀಗಾಗಿ ಕಚೇರಿ ದಾಖಲೆಗಳ ಮಾನದಂಡಕ್ಕಿಂತ ಹೊಲದಲ್ಲಿನ ವಾಸ್ತವ ಸ್ಥಿತಿಯನ್ನು ಪರಿಗಣಿಸಿ, ತಕ್ಷಣ ಬೆಳೆ ಹಾನಿ ಸಮೀಕ್ಷೆ ನಡೆಸಿ ಬರ ಪಟ್ಟಿಯನ್ನು ಪರಿಷ್ಕರಿಸುವುದು ಅಗತ್ಯವಾಗಿದೆ. ಮಳೆ ಕೈಕೊಟ್ಟ ಸಂದರ್ಭದಲ್ಲಿ ರೈತರ ಕೈಹಿಡಿಯಬೇಕಾದ ಸರ್ಕಾರ, ಪರಿಹಾರ ಹಾಗೂ ಅಗತ್ಯ ನೆರವು ತ್ವರಿತವಾಗಿ ಒದಗಿಸಬೇಕು ಎಂಬುದು ಅನ್ನದಾತರ ಒತ್ತಾಯವಾಗಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಮಾಜ ಪರಿವರ್ತನೆಗೆ ಸಂವಿಧಾನದ ಅರಿವು ಅಗತ್ಯ: ಭೀಮಣ್ಣ ಮೇಟಿ

ಸಂವಿಧಾನದ ಆಶಯಗಳನ್ನು ಅರಿತುಕೊಂಡು ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಯುವಜನರು ಸಮಾಜ ಸುಧಾರಣೆಯಲ್ಲಿ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಳ್ಳಾರಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನ; ಸರ್ವಾಧ್ಯಕ್ಷರಾಗಿ ಸಿ.ಜಿ.ಹಂಪಣ್ಣ ಆಯ್ಕೆ

ಕನ್ನಡ ಸಾಹಿತ್ಯ ಪರಿಷತ್ತಿನ ಅಖಂಡ ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ನಗರದ...

ಬೀದರ್ | ಜಿಪಂ, ತಾಪಂ ಮೀಸಲಾತಿ ಹಂಚಿಕೆಯಲ್ಲಿ ಒಬಿಸಿಗೆ ಅನ್ಯಾಯ: ಶ್ರೀಕಾಂತ ಸ್ವಾಮಿ ಆರೋಪ

ಬೀದರ್ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ಎಂಟು ತಾಲೂಕು ಪಂಚಾಯಿತಿಗಳ ಚುನಾವಣೆಗೆ...