ಮುಗಳೊಳ್ಳಿ ಶಾಲೆ ಕಾಂಕ್ರೀಟ್ ಕುಸಿತ: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ

Date:

ಬಾಗಲಕೋಟೆ ಜಿಲ್ಲೆಯ ಮುಗಳೊಳ್ಳಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ವಿದ್ಯಾರ್ಥಿಗಳ ಮೇಲೆ ಕಾಂಕ್ರೀಟ್ ಕುಸಿದು ಗಾಯಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ, ಶಿಕ್ಷಣ ಇಲಾಖೆ ಆಯುಕ್ತರು, ಧಾರವಾಡದ ಮುಖ್ಯ ಹೆಚ್ಚುವರಿ ಆಯುಕ್ತರು, ಬಾಗಲಕೋಟೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಶಿಕ್ಷಣ ಇಲಾಖೆ ಡಿಡಿಪಿಐ, ಕ್ಷೇತ್ರ ಶಿಕ್ಷಣಾಧಿಕಾರಿ, ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದರೂ ವಿದ್ಯಾರ್ಥಿಗಳ ತರಗತಿಗಳನ್ನು ಅದೇ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು. ಕಟ್ಟಡದ ದುಸ್ಥಿತಿ ಕುರಿತು ಪೋಷಕರು ಈ ಹಿಂದೆಯೇ ಆತಂಕ ವ್ಯಕ್ತಪಡಿಸಿದ್ದರು ಎಂಬುದು ಮಾಧ್ಯಮಗಳ ವರದಿಯಿಂದ ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು ಹಾಗೂ ಶಾಲಾ ಕಟ್ಟಡಗಳ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸುವುದು ಸಂಬಂಧಿಸಿದ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಲೋಕಾಯುಕ್ತರು ತಿಳಿಸಿದ್ದಾರೆ.

ಜಿಲ್ಲೆಯ ಸರ್ಕಾರಿ ಶಾಲೆಗಳ ಪರಿಶೀಲನೆಗೆ ಸೂಚನೆ
ಮುಗಳೊಳ್ಳಿ ತಾಂಡಾ ಘಟನೆ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಶಾಲಾ ಕಟ್ಟಡಗಳ ಸುರಕ್ಷತೆ ಕುರಿತು ಸಮಗ್ರ ಪರಿಶೀಲನೆ ನಡೆಸಲು ಲೋಕಾಯುಕ್ತರು ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿನ ಕೆಲವು ಶಾಲೆಗಳನ್ನು ರಾಂಡಮ್ ಆಗಿ ಆಯ್ಕೆ ಮಾಡಿಕೊಂಡು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರು ಸೂಚಿಸಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಪ್ರತಿಯೊಂದು ಸರ್ಕಾರಿ ಶಾಲೆಯ ಸುರಕ್ಷತಾ ಲೆಕ್ಕಪರಿಶೋಧನೆ (ಸೇಫ್ಟಿ ಆಡಿಟ್) ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ.

ಶಾಲಾ ಕಟ್ಟಡದ ಸ್ಥಿತಿ, ವಿದ್ಯಾರ್ಥಿಗಳ ಸುರಕ್ಷತೆ, ಮೂಲಸೌಕರ್ಯ, ಆಟದ ಮೈದಾನ, ಶೌಚಾಲಯ, ಕಾಂಪೌಂಡ್ ಹಾಗೂ ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಬೇಕಿದೆ.

ಶಿಥಿಲ ಶಾಲೆಗಳ ಸಂಪೂರ್ಣ ಮಾಹಿತಿ ಸಲ್ಲಿಕೆ
ಶಿಥಿಲಾವಸ್ಥೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಕಟ್ಟಡಗಳ ಸಂಪೂರ್ಣ ವಿವರವನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಅಂತಹ ಶಾಲೆಗಳ ಹೆಸರು, ಗ್ರಾಮ, ಕಟ್ಟಡ ನಿರ್ಮಾಣವಾದ ವರ್ಷ, ಪ್ರಸ್ತುತ ಕಟ್ಟಡದ ಸ್ಥಿತಿ ಹಾಗೂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು ನೀಡಬೇಕಾಗಿದೆ.

ಅಸುರಕ್ಷಿತ ಕಟ್ಟಡದಲ್ಲಿ ತರಗತಿ ನಡೆಸದಂತೆ ಸೂಚನೆ
ಶಾಲಾ ಕಟ್ಟಡ ಅಸುರಕ್ಷಿತ ಎಂದು ಗುರುತಿಸಲ್ಪಟ್ಟಿದ್ದರೆ, ಅಂತಹ ಕಟ್ಟಡದಲ್ಲಿ ಯಾವುದೇ ಕಾರಣಕ್ಕೂ ತರಗತಿಗಳನ್ನು ನಡೆಸಬಾರದು. ಅಗತ್ಯವಿದ್ದಲ್ಲಿ ಪರ್ಯಾಯ ಸುರಕ್ಷಿತ ಸ್ಥಳದಲ್ಲಿ ತರಗತಿಗಳನ್ನು ನಡೆಸಬೇಕು ಎಂದು ಲೋಕಾಯುಕ್ತರು ಸ್ಪಷ್ಟ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿ ಸಿಇಒ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಜಿಲ್ಲೆಯ ಶಾಲಾ ಕಟ್ಟಡಗಳ ಸಮಗ್ರ ಸುರಕ್ಷತಾ ಆಡಿಟ್ ನಡೆಸಿ, ಕೈಗೊಂಡ ಕ್ರಮಗಳ ಅನುಪಾಲನಾ ವರದಿಯನ್ನು ನಾಲ್ಕು ವಾರಗಳೊಳಗೆ ಸಲ್ಲಿಸುವಂತೆ ನಿರ್ದೇಶಿಸಲಾಗಿದೆ.

ವಿದ್ಯಾರ್ಥಿಗಳ ಸುರಕ್ಷತೆಯಲ್ಲಿ ನಿರ್ಲಕ್ಷ್ಯಕ್ಕೆ ಅವಕಾಶ ನೀಡದಂತೆ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳ ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸುವುದು ಇದೀಗ ಅಗತ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಯಾದಗಿರಿ | ಸಮಾಜ ಪರಿವರ್ತನೆಗೆ ಸಂವಿಧಾನದ ಅರಿವು ಅಗತ್ಯ: ಭೀಮಣ್ಣ ಮೇಟಿ

ಸಂವಿಧಾನದ ಆಶಯಗಳನ್ನು ಅರಿತುಕೊಂಡು ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಯುವಜನರು ಸಮಾಜ ಸುಧಾರಣೆಯಲ್ಲಿ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಳ್ಳಾರಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನ; ಸರ್ವಾಧ್ಯಕ್ಷರಾಗಿ ಸಿ.ಜಿ.ಹಂಪಣ್ಣ ಆಯ್ಕೆ

ಕನ್ನಡ ಸಾಹಿತ್ಯ ಪರಿಷತ್ತಿನ ಅಖಂಡ ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ನಗರದ...