ಬಾಗಲಕೋಟೆ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟ ಪ್ರಕರಣದ ಸಂತ್ರಸ್ತರ ಮನೆಗೆ ಶಾಸಕ ಉಮೇಶ್ ಹೆಚ್. ಮೇಟಿ ಗುರುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಶೀಘ್ರವೇ ಪರಿಹಾರ ಒದಗಿಸುವ ಭರವಸೆ ನೀಡಿದರು.
ಶಿವಪ್ಪ ಬಿರಾದರ ಮನೆಯಲ್ಲಿ ಸಂಭವಿಸಿದ ಸ್ಫೋಟದಿಂದ ಮನೆಗೆ ಉಂಟಾದ ಹಾನಿಯನ್ನು ಪರಿಶೀಲಿಸಿದ ಶಾಸಕ ಮೇಟಿ, ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿ ಧೈರ್ಯ ತುಂಬಿದರು. ದುರ್ಘಟನೆಯಿಂದ ಕುಟುಂಬಕ್ಕೆ ಆಗಿರುವ ನಷ್ಟದ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಅವರು, ಅಗತ್ಯ ನೆರವು ಮತ್ತು ಸರ್ಕಾರದ ಪರಿಹಾರ ಶೀಘ್ರವಾಗಿ ದೊರೆಯುವಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಂತರ ಸಂಬಂಧಿತ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಚರ್ಚಿಸಿದ ಅವರು, ಘಟನೆಯ ಸಂಪೂರ್ಣ ವರದಿ ಸಿದ್ಧಪಡಿಸಿ ಸರ್ಕಾರದ ನಿಯಮಾನುಸಾರ ಪರಿಹಾರವನ್ನು ವಿಳಂಬವಿಲ್ಲದೆ ಒದಗಿಸಲು ಸೂಚಿಸಿದರು.
ಈ ವೇಳೆ ಹಣಮಂತ ಗಣಿ, ಜಟ್ಟಪ್ಪ ಮಾದಪುರ, ಹನುಮಂತ ದಡ್ಡಿ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು




