ಬಾಗಲಕೋಟೆ ಕಾಂಗ್ರೆಸ್‌ಗೆ ಹೊಸ ಸಾರಥಿ: ದಯಾನಂದ ಪಾಟೀಲ ಹೆಗಲಿಗೆ ನಾಯಕತ್ವದ ಹೊಣೆ

Date:

ಹಲವು ವರ್ಷಗಳ ಬಳಿಕ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಂಘಟನೆಯ ಸಾರಥ್ಯ ಬದಲಾಗಿದೆ. ಮುಧೋಳದ ದಯಾನಂದ ಪಾಟೀಲ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಪಕ್ಷದ ಹೈಕಮಾಂಡ್ ಯುವ ನಾಯಕತ್ವಕ್ಕೆ ಮಣೆ ಹಾಕಿದೆ.

- Advertisement -

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರು ನೂತನ ಜಿಲ್ಲಾಧ್ಯಕ್ಷರ ನೇಮಕವನ್ನು ಪ್ರಕಟಿಸಿದ್ದಾರೆ. ಇದರೊಂದಿಗೆ ಸುಮಾರು ಎಂಟು ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಜಿ. ನಂಜಯ್ಯನಮಠ ಅವರ ಅವಧಿ ಅಂತ್ಯಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಜತೆಗೆ 2028ರ ವಿಧಾನಸಭೆ ಹಾಗೂ 2029ರ ಲೋಕಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡೇ ಬಾಗಲಕೋಟೆಯಲ್ಲಿ ಪಕ್ಷ ಸಂಘಟನೆಗೆ ಹೊಸ ಚೈತನ್ಯ ನೀಡುವ ಪ್ರಯತ್ನ ಇದಾಗಿದೆ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಆರಂಭವಾಗಿದೆ.

ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ
ಈ ಬಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಲ್ಲಿ ಪಕ್ಷ ಹಿಂದಿನ ಪದ್ಧತಿಯಿಂದ ಭಿನ್ನವಾದ ಮಾರ್ಗ ಅನುಸರಿಸಿತ್ತು. ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸುವ ಮೂಲಕ ಕಾರ್ಯಕರ್ತರ ಅಭಿಪ್ರಾಯಕ್ಕೂ ಅವಕಾಶ ಕಲ್ಪಿಸಲಾಗಿತ್ತು.

ಪಕ್ಷದ ರಾಷ್ಟ್ರೀಯ ಆದಿವಾಸಿ ಘಟಕದ ಉಪಾಧ್ಯಕ್ಷ ಬೆಲ್ಲಯ್ಯ ನಾಯಕ್ ತೇಜವತ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿತ್ತು. ಅವರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯ ಕುರಿತು ಅಭಿಪ್ರಾಯ ಸಂಗ್ರಹಿಸಿದ್ದರು.

ಈ ಪ್ರಕ್ರಿಯೆಯಲ್ಲಿ ಬರೋಬ್ಬರಿ 32 ಮಂದಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು. ಬಳಿಕ ಸಚಿವರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಜಿಲ್ಲೆಯ ಪ್ರಮುಖ ಕಾಂಗ್ರೆಸ್ ನಾಯಕರ ಅಭಿಪ್ರಾಯ ಪಡೆದು ಆರು ಮಂದಿಯ ಹೆಸರನ್ನು ಕೆಪಿಸಿಸಿಗೆ ಶಿಫಾರಸು ಮಾಡಲಾಗಿತ್ತು. ಅಂತಿಮವಾಗಿ ದಯಾನಂದ ಪಾಟೀಲ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ.

ರಾಜಕೀಯ ಕುಟುಂಬದ ಹಿನ್ನೆಲೆ
ದಯಾನಂದ ಪಾಟೀಲ ಅವರು ಮಾಜಿ ಸಂಸದ ಎಸ್.ಟಿ. ಪಾಟೀಲ ಅವರ ಪುತ್ರ. ಜಿಲ್ಲೆಯ ರಾಜಕಾರಣದಲ್ಲಿ ಎಸ್.ಟಿ. ಪಾಟೀಲ ಅವರು ತಮ್ಮದೇ ಆದ ರಾಜಕೀಯ ಛಾಪು ಮೂಡಿಸಿದ್ದವರು. ಪಕ್ಷದ ಸೈದ್ಧಾಂತಿಕ ನಿಲುವಿನ ವಿಚಾರದಲ್ಲಿ ಬದ್ಧತೆ ಹೊಂದಿದ್ದ ಕುಟುಂಬದ ಹಿನ್ನೆಲೆ ದಯಾನಂದ ಅವರ ರಾಜಕೀಯ ಪಯಣಕ್ಕೂ ನೆರವಾಗಿದೆ.

ದಯಾನಂದ ಅವರ ಅಜ್ಜ-ಅಜ್ಜಿಯರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಹಿನ್ನೆಲೆ ಹೊಂದಿದ್ದಾರೆ. ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ಅವರು, ಇದೀಗ ಪಕ್ಷದ ಯುವ ಪಡೆಗೆ ದಿಕ್ಕು ನೀಡುವುದರ ಜತೆಗೆ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯನ್ನು ಬಲಪಡಿಸುವ ಸವಾಲು ಎದುರಿಸುತ್ತಿದ್ದಾರೆ.

ಸಂಘಟನೆಗೆ ಅನುಭವದ ಬಲ
52 ವರ್ಷದ ದಯಾನಂದ ಪಾಟೀಲ ಅವರು ಬಿ.ಎ., ಎಲ್‌ಎಲ್‌ಬಿ ಪದವೀಧರರಾಗಿದ್ದು, ನ್ಯಾಯವಾದಿಯಾಗಿ ಕಾರ್ಯನಿರ್ವಹಿಸಿದ್ದಾರೆ. ತಿಮ್ಮಾಪುರ ರನ್ನ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ ಭಕ್ತಿ ಸಿರೋಮಣಿ ಹೇಮರೆಡ್ಡಿ ಮಲ್ಲಮ್ಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ.

ಪಕ್ಷ ಸಂಘಟನೆಯಲ್ಲೂ ಅವರಿಗೆ ಸಾಕಷ್ಟು ಅನುಭವವಿದೆ. ಎರಡು ಬಾರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿರುವ ಅವರು, ವಿವಿಧ ರಾಜ್ಯಗಳ ಚುನಾವಣಾ ಸಂಘಟನಾ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ.

2022ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ನುವೆಮ್ ಕ್ಷೇತ್ರದ ಉಸ್ತುವಾರಿ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಉಸ್ತುವಾರಿ ಹಾಗೂ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಇತ್ತೀಚೆಗೆ ನಡೆದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ಪಕ್ಷದ ಪರವಾಗಿ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

ರೆಡ್ಡಿ ಸಮುದಾಯಕ್ಕೆ ಸೇರಿದ ದಯಾನಂದ ಅವರು ಹೈಕಮಾಂಡ್ ಹಾಗೂ ಜಿಲ್ಲೆಯ ಕಾಂಗ್ರೆಸ್ ನಾಯಕರೊಂದಿಗೆ ಹೊಂದಿರುವ ಸಂಪರ್ಕವೂ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವಲ್ಲಿ ಪ್ರಮುಖ ಅಂಶವಾಗಿದೆ ಎನ್ನಲಾಗುತ್ತಿದೆ.

ಯುವಕರಿಗೆ ಆದ್ಯತೆ, ಹಿರಿಯರ ವಿಶ್ವಾಸದ ಪರೀಕ್ಷೆ
ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ಹೊಸ ವೇಗ ನೀಡುವುದು ನೂತನ ಅಧ್ಯಕ್ಷರ ಮುಂದಿರುವ ಪ್ರಮುಖ ಹೊಣೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಂದ ಆರಂಭಿಸಿ ಮುಂದಿನ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳವರೆಗೆ ಪಕ್ಷವನ್ನು ತಳಮಟ್ಟದಲ್ಲಿ ಸಜ್ಜುಗೊಳಿಸುವ ಜವಾಬ್ದಾರಿ ಅವರ ಮೇಲಿದೆ.

ಯುವಕರನ್ನು ಪಕ್ಷದತ್ತ ಸೆಳೆಯುವುದು, ಬೂತ್ ಮಟ್ಟದ ಸಂಘಟನೆಯನ್ನು ಚುರುಕುಗೊಳಿಸುವುದು, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುವುದು ಹಾಗೂ ಹಿರಿಯ ನಾಯಕರನ್ನು ಒಗ್ಗೂಡಿಸಿಕೊಂಡು ಸಾಗುವುದು ದಯಾನಂದ ಅವರ ಮುಂದಿರುವ ಪ್ರಮುಖ ಸವಾಲುಗಳಾಗಿವೆ.

ಸೈದ್ಧಾಂತಿಕ ತಳಹದಿಯಲ್ಲಿ ಪಕ್ಷ ಸಂಘಟನೆ
ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ದಯಾನಂದ ಪಾಟೀಲ, ಸೈದ್ಧಾಂತಿಕ ತಳಹದಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವುದು ತಮ್ಮ ಮುಖ್ಯ ಗುರಿ ಎಂದು ಹೇಳಿದ್ದಾರೆ.

ಪಕ್ಷದ ಹೈಕಮಾಂಡ್ ನೀಡುವ ಸೂಚನೆ ಹಾಗೂ ಮಾರ್ಗದರ್ಶನದಂತೆ ಸಂಘಟನಾ ಕಾರ್ಯ ಕೈಗೊಳ್ಳಲಾಗುವುದು. ಹಿರಿಯರು ಮತ್ತು ಕಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರ ಸಹಕಾರದೊಂದಿಗೆ ಪಕ್ಷವನ್ನು ಬಲಪಡಿಸುವುದಾಗಿ ಅವರು ತಿಳಿಸಿದ್ದಾರೆ.

ಹೀಗಾಗಿ, ಬಾಗಲಕೋಟೆ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯೊಂದಿಗೆ ಸಂಘಟನೆಯಲ್ಲೂ ಹೊಸ ಅಧ್ಯಾಯ ಆರಂಭವಾಗಿದ್ದು, ದಯಾನಂದ ಪಾಟೀಲ ಅವರ ಸಾರಥ್ಯದಲ್ಲಿ ಪಕ್ಷ ಯಾವ ರೀತಿಯ ರಾಜಕೀಯ ರೂಪುರೇಷೆ ರೂಪಿಸಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...

ಕಲಬುರಗಿ | ನಕಲಿ ಎಸ್‌ಟಿ ಪ್ರಮಾಣ ಪತ್ರಗಳಿಗೆ ಕಡಿವಾಣ, ಮೀಸಲಾತಿ ರಕ್ಷಣೆಗೆ ಆಗ್ರಹ

ನಕಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಜಾತಿ ಪ್ರಮಾಣಪತ್ರಗಳ ಹಾವಳಿಗೆ ಕಡಿವಾಣ ಹಾಕಬೇಕು...