ರಾಮನಗರ, ಕನಕಪುರ, ಬಾಗಲಕೋಟೆ ವೈದ್ಯಕೀಯ ಕಾಲೇಜು ಪ್ರಸ್ತಾವನೆಗೆ ಎನ್‌ಎಂಸಿ ಬ್ರೇಕ್

Date:

ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ರಾಜ್ಯದ 3 ವೈದ್ಯಕೀಯ ಕಾಲೇಜುಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ರಾಮನಗರ, ಕನಕಪುರ ಹಾಗೂ ಬಾಗಲಕೋಟೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು.

- Advertisement -

ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ರಾಮನಗರದಲ್ಲಿ ಮತ್ತು ತಾಲೂಕು ಆಸ್ಪತ್ರೆಯ ಸಹಯೋಗದೊಂದಿಗೆ ಕನಕಪುರದಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಬೋಧಕ, ಬೋಧಕೇತರ ಸಿಬ್ಬಂದಿಯ ನೇಮಕಾತಿ ವೈಫಲ್ಯ ಮತ್ತು ಮಾನವ ಸಂಪನ್ಮೂಲಗಳ ಕೊರತೆ, ಇತರ ಮೂಲಸೌಕರ್ಯದಲ್ಲಿ ಲೋಪವಿದೆ ಎಂದು ಎನ್‌ಎಂಸಿ ರಾಜ್ಯದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಬಿಜೆಪಿ ಸರ್ಕಾರ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ವರ್ಗಾಯಿಸಿತ್ತು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಯೋಜನೆ ರೂಪಿಸಿ, ರಾಮನಗರ ಮತ್ತು ಕನಕಪುರದಲ್ಲಿ ಪ್ರತ್ಯೇಕ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿತ್ತು.

ರಾಮನಗರದ ಅರ್ಚಕರಹಳ್ಳಿ ಸಮೀಪ 600 ಕೋಟಿ ವೆಚ್ಚದಲ್ಲಿ RGUHS ಕ್ಯಾಂಪಸ್ ನಿರ್ಮಾಣ ಕಾರ್ಯ ಸಾಗುತ್ತಿದ್ದು, ಈಗಾಗಲೇ 70 ಶೇಕಡಾ ಕಾಮಗಾರಿ ಪೂರ್ಣಗೊಂಡಿದೆ. ಇತ್ತ ಬಾಗಲಕೋಟೆ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದೆ. ಆದರೆ, ಆಂತರಿಕ ಮೀಸಲಾತಿ ಅನುಷ್ಠಾನ ಒಳಗೊಂಡಂತೆ ಹಲವು ಕಾರಣಗಳಿಂದ ಈ ಕಾಲೇಜುಗಳ ಅಧಿಕೃತ ಆರಂಭಕ್ಕೆ ಬೇಕಿದ್ದ ಮಾನವ ಸಂಪನ್ಮೂಲಗಳ ನೇಮಕಾತಿಯನ್ನು ರಾಜ್ಯ ಕೈಗೊಂಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...