ದಲಿತ ಸಮುದಾಯಕ್ಕೆ ಪ್ರತಾಪ್ ಸಿಂಹ ಅವಮಾನ: ಕಾನೂನು ಕ್ರಮಕ್ಕೆ ಬಾಗಲಕೋಟೆ ದ.ಸಂ.ಸ ಪಟ್ಟು

Date:

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ದಲಿತ ಸಂಘರ್ಷ ಸಮಿತಿ (ದ.ಸಂ.ಸ) ಹಾಗೂ ದಲಿತ ಸಮುದಾಯದ ಕುರಿತು ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಬಾಗಲಕೋಟೆ ಜಿಲ್ಲಾ ಘಟಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಬಾಗಲಕೋಟೆ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ.ಸಂ.ಸ (ಡಿ. ಜೆ ಸಾಗರ ಬಣ )‌ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ, “ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ವಿಚಾರಧಾರೆ ಹಾಗೂ ಸಮಾನತೆಯ ಆಶಯಗಳ ಹಿನ್ನೆಲೆಯಲ್ಲಿ ರೂಪುಗೊಂಡಿರುವ ದಲಿತ ಸಂಘರ್ಷ ಸಮಿತಿ, 1970ರ ದಶಕದಿಂದಲೂ ಶೋಷಿತರು, ಅಸ್ಪೃಶ್ಯರು ಹಾಗೂ ದಮನಿತ ಸಮುದಾಯಗಳ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸುತ್ತಾ ಬಂದಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ದಲಿತ ಚಳವಳಿಯ ಇತಿಹಾಸ ಹಾಗೂ ಅದರ ಸಾಮಾಜಿಕ ಹಿನ್ನೆಲೆಯನ್ನು ಅರಿಯದೆ ಪ್ರತಾಪ್ ಸಿಂಹ ಅವರು ದ.ಸಂ.ಸ ಹಾಗೂ ದಲಿತ ಸಮುದಾಯದ ಕುರಿತು ಹೀಗಳೆಯುವ ರೀತಿಯಲ್ಲಿ ಮಾತನಾಡಿರುವುದು ಖಂಡನೀಯ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚೆಗೆ ನರಸೀಪುರದಲ್ಲಿ ನಡೆದ ಗಣಪತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಅವರು ನೀಡಿದ ಹೇಳಿಕೆಗಳು ಹಾಗೂ ಅವರ ನಡೆ ಸೌಹಾರ್ದಯುತ ವಾತಾವರಣಕ್ಕೆ ಧಕ್ಕೆ ತರುವಂತಿವೆ ಎಂದು ಆರೋಪಿಸಿದ ಅವರು, ಇಂತಹ ಹೇಳಿಕೆಗಳು ಸಮಾಜದಲ್ಲಿ ಜಾತಿ ಹಾಗೂ ಕೋಮು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಹೇಳಿದರು.

Advertisements

ಪ್ರತಾಪ್ ಸಿಂಹ ಅವರು ತಮ್ಮ ಹೇಳಿಕೆಗಳನ್ನು ತಕ್ಷಣವೇ ಹಿಂಪಡೆದು, ದಲಿತ ಸಮುದಾಯದ ಕ್ಷಮೆಯಾಚಿಸಬೇಕು ಎಂದು ದ.ಸಂ.ಸ ಒತ್ತಾಯಿಸಿದೆ. ಸಮಾಜದಲ್ಲಿ ಕೋಮುಭಾವನೆ ಮತ್ತು ಜಾತಿ ಸಂಘರ್ಷಕ್ಕೆ ಕಾರಣವಾಗುವಂತಹ ಹೇಳಿಕೆಗಳು ಹಾಗೂ ನಡೆಗಳಿಗೆ ಸರ್ಕಾರ ಕಡಿವಾಣ ಹಾಕಬೇಕು. ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ಹಳ್ಳದಮನಿ, ಆಶಾಬೇಗಂ ಬಿರಾದಾರ, ರಮೇಶ ಅನಗವಾಡಿ, ಹುಲ್ಲಪ್ಪ ಅಂಟರದಾನಿ ಹಾಗೂ ಬಸವರಾಜ ದೊಡಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಸಾಲ ಮರುಪಾವತಿಸಿ, ಸಹಕಾರಿ ವ್ಯವಸ್ಥೆ ಉಳಿಸಿ: ಕೊತ್ತೂರು ಮಂಜುನಾಥ್

ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಮತ್ತೆ ಸಾಲ ಸೌಲಭ್ಯ ಕಲ್ಪಿಸಲು...

ಉತ್ತರ ಕನ್ನಡ | ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ನಾಲ್ವರು ವಶಕ್ಕೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಬಿಸಗೋಡ ರಸ್ತೆ ಮಾರ್ಗದಲ್ಲಿರುವ ಸ್ಮಶಾನದ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ ‘ಮೋದಿ ಜಪ’ದ ಸಂಸದರು

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ...

ಸೆ.25ಕ್ಕೆ ಚುನಾವಣಾ ಕಚೇರಿಗಳಿಗೆ ಕಾಂಗ್ರೆಸ್ ಮುತ್ತಿಗೆ: ಸಿಇಸಿ ಗ್ಯಾನೇಶ್ ಕುಮಾರ್ ಬಂಧನ, ವಜಾಕ್ಕೆ ಆಗ್ರಹ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ತಕ್ಷಣವೇ ಬಂಧಿಸಬೇಕು,...