ಆಲಮಟ್ಟಿ– ಕುಷ್ಟಗಿ ರೈಲು ಮಾರ್ಗಕ್ಕೆ ಭೂಮಿ ಒದಗಿಸಲು ರೈಲ್ವೇ ಹೋರಾಟ ಸಮಿತಿಯ ಮನವಿ

Date:

ರಾಜ್ಯದಲ್ಲಿ ಹೊಸ ರೈಲು ಮಾರ್ಗಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಹಾಗೂ ಅನುದಾನ ಒದಗಿಸುವಂತೆ ಒತ್ತಾಯಿಸಿ, ರೈಲ್ವೆ ಹೋರಾಟ ಸಮಿತಿಯ ಪದಾಧಿಕಾರಿಗಳು ಇಂದು ಬೆಂಗಳೂರಿನಲ್ಲಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿಜಯಾನಂದ ಕಾಶಪ್ಪನವರ್, ಸರ್ಕಾರದ ಮುಖ್ಯ ಸಚೇತಕರಾದ ಶಾಸಕ ಅಶೋಕ್ ಪಟ್ಟಣ ಅವರ ವಿಧಾನಸಭಾ ಕಾರ್ಯಾಲಯಕ್ಕೆ ಭೇಟಿ ನೀಡಿ ಮನವಿ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷರಾದ ಕುತ್ಬುದ್ದೀನ್ ಕಾಜಿ ಅವರು, ಆಲಮಟ್ಟಿ–ಕುಷ್ಟಗಿ 91 ಕಿ.ಮೀ. ರೈಲ್ವೆ ಮಾರ್ಗದ ಅಂತಿಮ ಸಮೀಕ್ಷಾ ವರದಿಯ ದಾಖಲೆಗಳನ್ನು ಸಚಿವರಿಗೆ ಸಲ್ಲಿಸಿದರು. ಈ ಮಾರ್ಗದ ಅನುಷ್ಠಾನಕ್ಕಾಗಿ ರೈಲ್ವೆ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಿ, ರಾಜ್ಯ ಸರ್ಕಾರದಿಂದ ಅಗತ್ಯ ಭೂಮಿ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಇದೇ ವೇಳೆ, ಕುಡಚಿ ರೈಲ್ವೆ ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸುವಂತೆಯೂ ಸಮಿತಿ ಒತ್ತಾಯಿಸಿತು. ಈ ಮಾರ್ಗಕ್ಕೆ ಅಗತ್ಯವಿರುವ ಶೇ.95ರಷ್ಟು ಭೂಮಿಯನ್ನು ರಾಜ್ಯ ಸರ್ಕಾರ ಈಗಾಗಲೇ ಒದಗಿಸಿದೆ. ಹೀಗಾಗಿ ರಾಜ್ಯ ಸರ್ಕಾರವು ರೈಲ್ವೆ ಇಲಾಖೆಯ ಮೇಲೆ ಒತ್ತಡ ತಂದು ಕಾಮಗಾರಿಯನ್ನು ತೀವ್ರಗತಿಯಲ್ಲಿ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು. ಲೋಕಾಪುರದವರೆಗೆ ರೈಲ್ವೆ ಮಾರ್ಗ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿಯವರೆಗೆ ಪ್ಯಾಸೆಂಜರ್ ರೈಲು ಸೇವೆ ಪ್ರಾರಂಭಿಸಲು ರೈಲ್ವೆ ಇಲಾಖೆಯ ಮೇಲೆ ಒತ್ತಡ ತರಬೇಕೆಂದು ಮನವಿ ಸಲ್ಲಿಸಲಾಯಿತು.

ಲೋಕಾಪುರ–ರಾಮದುರ್ಗ–ಶಿರಸಂಗಿ–ಸವದತ್ತಿ ಯಲ್ಲಮ್ಮ–ಧಾರವಾಡ ಹೊಸ ರೈಲ್ವೆ ಮಾರ್ಗದ ಅನುಷ್ಠಾನಕ್ಕೂ ವಿಶೇಷ ಒತ್ತು ನೀಡಲಾಯಿತು. ಈಗಾಗಲೇ ಈ ಮಾರ್ಗದ ಸಮೀಕ್ಷೆಗೆ ಕೇಂದ್ರ ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಯೋಜನೆ ಅನುಷ್ಠಾನಗೊಂಡರೆ ಅಗತ್ಯ ಭೂಮಿ ಹಾಗೂ ಅನುದಾನ ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂಬುದನ್ನು ಕೇಂದ್ರ ರೈಲ್ವೆ ಇಲಾಖೆಗೆ ಅಧಿಕೃತ ಪತ್ರದ ಮೂಲಕ ತಿಳಿಸಲು ನಿಯೋಗ ಮನವಿ ಮಾಡಿತು.

ನಿಯೋಗದ ಮನವಿಯಲ್ಲಿನ ಎಲ್ಲ ವಿಷಯಗಳನ್ನು ಗಂಭೀರವಾಗಿ ಆಲಿಸಿದ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ್ ಹಾಗೂ ಸರ್ಕಾರದ ಮುಖ್ಯ ಸಚೇತಕರಾದ ಶಾಸಕ ಅಶೋಕ್ ಪಟ್ಟಣ ಅವರು, ರಾಜ್ಯದಲ್ಲಿ ಹೊಸ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಮತ್ತು ಅನುದಾನ ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ರೈಲ್ವೆ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಕುತ್ಬುದ್ದೀನ್ ಕಾಜಿ ಅವರ ನೇತೃತ್ವದ ನಿಯೋಗಕ್ಕೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನಿಯೋಗದಲ್ಲಿ ಡಾ. ಎಂ.ಕೆ. ಯಾದವಾಡ, ಜೈನೆಖಾನ್, ಸಂಜೀವ ಜೋತಾವರ, ರಮೇಶ್ ಗಲಗಲಿ, ಸದಾಶಿವ ಕವ್ವಾಸಿ, ಮಲ್ಲಿಕಾರ್ಜುನ ವಂದಾಲ, ಡಾ. ರವಿ ಜಮಖಂಡಿ, ಪ್ರಶಾಂತ ಕಾವೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂದರ್ಶನ | ಶೋಷಿತರ ಸ್ವಾಭಿಮಾನದ ಹೋರಾಟಕ್ಕೆ ದನಿಯಾದ ದಲಿತ ಚಳವಳಿ : ಮಾರುತಿ ಬೌದ್ಧೆ

ಶೋಷಿತರ ಬದುಕಿನಲ್ಲಿ ಸ್ವಾಭಿಮಾನ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಬೆಳಕು ಮೂಡಿಸುವ...

ಉಡುಪಿ | ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ‘ಅನ್ವೇಷಣಂ-2.0’ ಕಾರ್ಯಕ್ರಮ

ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಗಳಿಗೆ ಸೀಮಿತವಾಗದೆ, ಬದುಕಿನ ಸವಾಲುಗಳನ್ನು ಎದುರಿಸುವ ಅವಕಾಶಗಳನ್ನು...

ನ.30ರವರೆಗೆ ನೀರು ಹರಿಸಲು ಆಗ್ರಹಿಸಿ ಯಾದಗಿರಿ ಜಿಲ್ಲೆ ಬಂದ್; ಸರ್ಕಾರಕ್ಕೆ ಸಾಮೂಹಿಕ ಸಂಘಟನೆಗಳ ಎಚ್ಚರಿಕೆ

ಬಸವಸಾಗರ ಜಲಾಶಯದಿಂದ ರೈತರ ಕೃಷಿ ಬೆಳೆಗಳಿಗೆ ನವೆಂಬರ್ 30ರವರೆಗೆ ನಿರಂತರವಾಗಿ ನೀರು...

ಬೀದರ್‌ | ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ 24 ಗಂಟೆಯೊಳಗೆ ಪರಿಹಾರ ಕಲ್ಪಿಸಿ: ಈಶ್ವರ ಖಂಡ್ರೆ

ಬೀದರ್‌ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಯೊಳಗೆ ಪರ್ಯಾಯ...