ಹಿಪ್ಪರಗಿ ಬ್ಯಾರೇಜ್‌ಗೆ ಕೊಯ್ನ್ ಜಲಾಶಯದಿಂದ 2 ಟಿಎಂಸಿ ನೀರು ಹರಿಸಿ: ಶಾಸಕ ಸಿದ್ದು ಸವದಿ ಆಗ್ರಹ

Date:

ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿಯಲ್ಲಿ ಚಳಿಗಾಲದಲ್ಲೇ ನೀರಿನ ಹರಿವು ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳ ಲಕ್ಷಾಂತರ ಜನರು ಹಾಗೂ ಜಾನುವಾರುಗಳ ಕುಡಿಯುವ ನೀರಿನ ಪ್ರಮುಖ ಮೂಲವಾಗಿರುವ ಜಮಖಂಡಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ನಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಇಳಿಕೆಯಾಗಿದೆ.

ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಮುನ್ನ ಮಹಾರಾಷ್ಟ್ರದ ಕೊಯ್ನ್ ಜಲಾಶಯದಿಂದ 2 ಟಿಎಂಸಿ ನೀರನ್ನು ತಕ್ಷಣ ಬಿಡುಗಡೆಗೊಳಿಸಲು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ತೇರದಾಳ ಶಾಸಕ ಸಿದ್ದು ಸವದಿ ಆಗ್ರಹಿಸಿದ್ದಾರೆ.

- Advertisement -

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಸಮೀಪದ ಹಿಪ್ಪರಗಿ ಬ್ಯಾರೇಜ್‌ನಲ್ಲಿನ ನೀರಿನ ಸಂಗ್ರಹ ಪ್ರಮಾಣವನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 6 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಬ್ಯಾರೇಜ್‌ನಲ್ಲಿ ಸದ್ಯ ಕೇವಲ 3.5 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಈಗಾಗಲೇ ಮಳೆ ಕೊರತೆಯಿಂದ ರಾಜ್ಯದಲ್ಲಿ ಬರದ ಆತಂಕ ಎದುರಾಗಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಜನವರಿ ಅಂತ್ಯದ ವೇಳೆಗೆ ಉತ್ತರ ಕರ್ನಾಟಕ ತೀವ್ರ ಜಲಕ್ಷಾಮ ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಿಪ್ಪರಗಿ ಬ್ಯಾರೇಜ್ ಕೇವಲ ಕೃಷಿ ಚಟುವಟಿಕೆಗಳಿಗೆ ನೀರು ಒದಗಿಸುವ ಜಲಮೂಲವಲ್ಲ. ಈ ಭಾಗದ ಲಕ್ಷಾಂತರ ಜನರ ಕುಡಿಯುವ ನೀರಿನ ಅಗತ್ಯವನ್ನೂ ಪೂರೈಸುವ ಪ್ರಮುಖ ಆಧಾರವಾಗಿದೆ. ಹೀಗಾಗಿ ಪರಿಸ್ಥಿತಿ ಕೈಮೀರುವವರೆಗೆ ಕಾಯದೆ ರಾಜ್ಯ ಸರಕಾರ ಮಹಾರಾಷ್ಟ್ರ ಸರಕಾರದೊಂದಿಗೆ ತಕ್ಷಣ ಮಾತುಕತೆ ನಡೆಸಿ ಕೊಯ್ತಾ ಜಲಾಶಯದಿಂದ 2 ಟಿಎಂಸಿ ನೀರು ಬಿಡುಗಡೆಗೆ ಒಪ್ಪಿಗೆ ಪಡೆಯಬೇಕು ಎಂದು ಒತ್ತಾಯಿಸಿದರು.

ಮಳೆ ಕೊರತೆ ಹಾಗೂ ಸಮರ್ಪಕ ನೀರಿನ ಲಭ್ಯತೆಯಿಲ್ಲದೆ ಈಗಾಗಲೇ ರೈತರು ಬೆಳೆ ನಷ್ಟ ಅನುಭವಿಸುತ್ತಿದ್ದಾರೆ. ಜಮೀನುಗಳಲ್ಲಿ ಬೆಳೆಗಳು ಒಣಗುವ ಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ನೀರಿನ ವ್ಯವಸ್ಥೆ ಕಲ್ಪಿಸುವುದು ಸರಕಾರದ ಆದ್ಯತೆಯಾಗಬೇಕು. ಬರದ ತೀವ್ರತೆ ಹೆಚ್ಚಾದ ನಂತರ ಪರಿಹಾರ ಘೋಷಿಸುವುದಕ್ಕಿಂತ ಮೊದಲೇ ಸಮಸ್ಯೆ ತಡೆಗಟ್ಟಲು ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಹೇಳಿದರು.

ಕುಡಿಯುವ ನೀರು ಮತ್ತು ಕೃಷಿ ಎರಡಕ್ಕೂ ಹಿಪ್ಪರಗಿ ಬ್ಯಾರೇಜ್ ನಿರ್ಣಾಯಕವಾಗಿರುವುದರಿಂದ ಉತ್ತರ ಕರ್ನಾಟಕದ ಜನರ ಹಿತದೃಷ್ಟಿಯಿಂದ ಸರಕಾರ ತಕ್ಷಣ ಕಾರ್ಯಪ್ರವೃತ್ತವಾಗಬೇಕು. ಮಹಾರಾಷ್ಟ್ರದೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ನೀರು ಹರಿಸುವ ಮೂಲಕ ರೈತರು ಹಾಗೂ ಜನಸಾಮಾನ್ಯರಿಗೆ ಎದುರಾಗಬಹುದಾದ ಜಲಸಂಕಷ್ಟವನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...