ಎನ್ಯೂಮರೇಷನ್ ಫಾರ್ಮ್ ಸಲ್ಲಿಸಿ ಮತದಾನದ ಹಕ್ಕು ಉಳಿಸಿಕೊಳ್ಳಿ: ಮೊಹಮ್ಮದ್ ಸಿರಾಜ್ ಹುಣಚಗಿ

Date:

ಭಾರತ ಚುನಾವಣಾ ಆಯೋಗದ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ Special Intensive Revision (SIR-2026) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ ಇಳಕಲ್ ಘಟಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪ್ರತಿಯೊಬ್ಬ ಮತದಾರರು ನಿಗದಿತ ಅವಧಿಯೊಳಗೆ ಎನ್ಯೂಮರೇಷನ್ ಫಾರ್ಮ್ ಸಲ್ಲಿಸುವಂತೆ ಮನವಿ ಮಾಡಲಾಯಿತು.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಇಳಕಲ್ ಘಟಕದ ಅಧ್ಯಕ್ಷ ಮೊಹಮ್ಮದ್ ಸಿರಾಜ್ ಹೂನಚಗಿ, “2026ರ ಜೂನ್ 30ರಿಂದ ಆರಂಭಗೊಂಡಿರುವ SIR-2026 ಪ್ರಕ್ರಿಯೆಯು ಆಗಸ್ಟ್ 8ರವರೆಗೆ ನಡೆಯಲಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಈ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಮತದಾನದ ಹಕ್ಕು ಭಾರತೀಯ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಅತ್ಯಂತ ಅಮೂಲ್ಯ ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಈ ಹಕ್ಕನ್ನು ಉಳಿಸಿಕೊಳ್ಳಲು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸರಿಯಾಗಿ ದಾಖಲಾಗಿರುವುದು ಅಗತ್ಯವಾಗಿದೆ. ಆದ್ದರಿಂದ ಯಾವುದೇ ನಿರ್ಲಕ್ಷ್ಯ ವಹಿಸದೆ ಎನ್ಯೂಮರೇಷನ್ ಫಾರ್ಮ್ ಸಂಪೂರ್ಣವಾಗಿ ಭರ್ತಿ ಮಾಡಿ, ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಗೆ (BLO) ನಿಗದಿತ ಅವಧಿಯೊಳಗೆ ಸಲ್ಲಿಸಬೇಕು ಎಂದು ಮನವಿ ಮಾಡಿದರು.

“ಅರ್ಜಿ ಸಲ್ಲಿಸಿದ ಬಳಿಕ ಸ್ವೀಕೃತಿ ರಶೀದಿ (Acknowledgement) ಪಡೆಯುವುದನ್ನು ಮರೆಯಬಾರದು. ನಿಗದಿತ ಅವಧಿಯೊಳಗೆ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಭವಿಷ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಸಾಧ್ಯತೆ ಇರುವುದರಿಂದ ಕೊನೆಯ ದಿನಾಂಕಕ್ಕಾಗಿ ಕಾಯದೆ ಕೂಡಲೇ ಈ ಕಾರ್ಯವನ್ನು ಪೂರ್ಣಗೊಳಿಸಿ” ಎಂದು ಸಲಹೆ ನೀಡಿದರು.

ಪ್ರತಿಯೊಬ್ಬ ನಾಗರಿಕರು ತಮ್ಮ ಕುಟುಂಬದ ಸದಸ್ಯರು, ಬಂಧು-ಬಳಗ, ನೆರೆಹೊರೆಯವರು ಹಾಗೂ ಇತರ ಅರ್ಹ ಮತದಾರರಿಗೂ ಈ ಕುರಿತು ಮಾಹಿತಿ ನೀಡಿ, ಎಲ್ಲರೂ ತಮ್ಮ ಮತದಾನದ ಹಕ್ಕನ್ನು ಸುರಕ್ಷಿತವಾಗಿರಿಸಿಕೊಳ್ಳಲು ಸಹಕರಿಸಬೇಕು. ಸಮಾಜದ ಎಲ್ಲಾ ವರ್ಗದ ಜನರು ಚುನಾವಣಾ ಆಯೋಗದ ಈ ಮಹತ್ವದ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಅವರು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಇಳಕಲ್ ಘಟಕದ ಕಾರ್ಯದರ್ಶಿ ಮುಜಮ್ಮಿಲ್ ಹಾಕಿ ಮತದಾರರ ಜಾಗೃತಿ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಘಟನೆಯ ಸದಸ್ಯರಾದ ಲಾಲ್‌ಸಾಬ್ ಭಂಡಾರಿ, ಹಬೀಬ್ ತವರಗೇರಿ, ಬಾಷಾ ಐನೂರ್ ಹಾಗೂ ರಫೀಕ್ ಸಾಬ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...