ಎಸ್‌ಐಆರ್‌: ಹುನಗುಂದ, ಇಳಕಲ್‌ನಲ್ಲಿ 7,522 ಮತದಾರರಿಗೆ ನೋಟಿಸ್

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಡಿಜಿಟಲೀಕರಣದ ಬಳಿಕ ಹೆಸರು, ವಯಸ್ಸು ಹಾಗೂ ವಿಳಾಸದಲ್ಲಿ ಕಂಡುಬಂದಿರುವ ಅನುಮಾನಗಳನ್ನು ಪರಿಶೀಲಿಸುವ ಕಾರ್ಯ ಹುನಗುಂದ ವಿಧಾನಸಭಾ ಕ್ಷೇತ್ರದಲ್ಲಿ ಚುರುಕುಗೊಂಡಿದೆ. ಅನುಮಾನಾಸ್ಪದವಾಗಿ ಗುರುತಿಸಲ್ಪಟ್ಟ ಮತದಾರರಿಗೆ ನೋಟಿಸ್ ಜಾರಿಗೊಳಿಸಿ, ಸೂಕ್ತ ದಾಖಲೆಗಳ ಆಧಾರದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮತದಾರರ ನೋಂದಣಾಧಿಕಾರಿ ಶ್ರೀಶೈಲ ಕಂಕಣವಾಡಿ ತಿಳಿಸಿದ್ದಾರೆ.

- Advertisement -

ಬಾಗಲಕೋಟೆ ಜಿಲ್ಲೆಯ ಹುನಗುಂದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಗೂ ನಿಗದಿಪಡಿಸಿದ ಸ್ಥಳಗಳಲ್ಲಿ ಈಗಾಗಲೇ ವಿಚಾರಣೆ ಆರಂಭಿಸಲಾಗಿದೆ. ಮೊದಲ ಹಂತದ ವಿಚಾರಣೆಯಲ್ಲಿಯೇ ದಾಖಲೆಗಳನ್ನು ಪರಿಶೀಲಿಸಿ ಅರ್ಹತೆ ದೃಢಪಟ್ಟಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

ಮೊದಲ ವಿಚಾರಣೆಯ ನಂತರವೂ ಅಗತ್ಯ ದಾಖಲೆಗಳನ್ನು ಸಲ್ಲಿಸದ ಅಥವಾ ಪರಿಶೀಲನೆ ಅಗತ್ಯವಿರುವ ಮತದಾರರಿಗೆ ಎರಡನೇ ನೋಟಿಸ್‌ ನೀಡಿ ಮತ್ತೊಮ್ಮೆ ವಿಚಾರಣೆ ನಡೆಸಲಾಗುವುದು. ಅರ್ಹತೆ ದೃಢಪಟ್ಟ ಮತದಾರರನ್ನು ಅಂತಿಮ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗುವುದು ಎಂದು ಅವರು ವಿವರಿಸಿದರು.

ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮಾಹಿತಿ ನೀಡಿದ್ದು, ಎಸ್‌ಐಆರ್‌ ಡಿಜಿಟಲೀಕರಣದ ಬಳಿಕ 2002ರ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ, ಪೂರ್ವಜರ ಹೆಸರು ಕೂಡ ದಾಖಲಾಗದವರು ಮತ್ತು ಹೆಸರು, ವಯಸ್ಸು ಮತ್ತು ವಿಳಾಸದ ಕುರಿತು ಅನುಮಾನವಿರುವ ಮತದಾರರನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.

ಹುನಗುಂದ ತಾಲ್ಲೂಕಿನಲ್ಲಿ 356 ಹಾಗೂ ಇಳಕಲ್ ತಾಲ್ಲೂಕಿನಲ್ಲಿ 7,166 ಸೇರಿ ಒಟ್ಟು 7,522 ಮತದಾರರು ಈ ಪರಿಶೀಲನಾ ವ್ಯಾಪ್ತಿಯಲ್ಲಿದ್ದಾರೆ. ಹುನಗುಂದದಲ್ಲಿ 355 ಹಾಗೂ ಇಳಕಲ್‌ನಲ್ಲಿ 6,373 ಮಂದಿ ಸೇರಿದಂತೆ ಒಟ್ಟು 6,728 ಮತದಾರರಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ. ಇನ್ನೂ 794 ಮಂದಿಗೆ ನೋಟಿಸ್ ನೀಡುವುದು ಬಾಕಿ ಇದೆ ಎಂದು ತಿಳಿಸಿದರು.

ಈವರೆಗೆ ಹುನಗುಂದ ತಾಲ್ಲೂಕಿನ 304 ಹಾಗೂ ಇಳಕಲ್ ತಾಲ್ಲೂಕಿನ 631 ಸೇರಿ ಒಟ್ಟು 935 ಮತದಾರರ ವಿಚಾರಣೆ ಪೂರ್ಣಗೊಂಡಿದೆ. ಸೂಕ್ತ ದಾಖಲೆ ಸಲ್ಲಿಸಿದ 588 ಮಂದಿಯನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ದಾಖಲೆಗಳು ಸಮರ್ಪಕವಾಗಿಲ್ಲದ 346 ಪ್ರಕರಣಗಳನ್ನು ಹೆಚ್ಚಿನ ಪರಿಶೀಲನೆಗಾಗಿ ಜಿಲ್ಲಾ ಚುನಾವಣಾಧಿಕಾರಿಗೆ ಕಳುಹಿಸಲಾಗಿದ್ದು, ಇನ್ನೂ 6,587 ಮತದಾರರ ವಿಚಾರಣೆ ಬಾಕಿ ಇದೆ ಎಂದು ತಹಶೀಲ್ದಾರ್ ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಉಪಸ್ಥಿತರಿದ್ದರು. ದಾಖಲೆ ಆಧಾರಿತ ಪರಿಶೀಲನೆಗೆ ಒತ್ತು ನೀಡಲಾಗಿದ್ದು, ಅರ್ಹ ಮತದಾರರ ಹೆಸರು ಅಂತಿಮ ಪಟ್ಟಿಯಿಂದ ಹೊರಗುಳಿಯದಂತೆ ವಿಚಾರಣೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ...

ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ, 13 ವರ್ಷಗಳಿಂದ ಬೀದಿಯಲ್ಲೇ ಬದುಕು!

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು...

ವಿಜಯಪುರ | 13 ತಾಲೂಕುಗಳ ಪೈಕಿ 10 ಬರಪೀಡಿತ; ಹೋರಾಟ ಕೈಬಿಡಲು ಎಂ.ಬಿ ಪಾಟೀಲ್ ಮನವಿ

ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ ಒಟ್ಟು 10 ತಾಲೂಕುಗಳು ಬರಪೀಡಿತ...