ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ ನೀರಿಗೂ ಪರದಾಟ!

Date:

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ ಕೊರತೆಯಿಂದ ಬರದ ಬವಣೆಗೆ ಸಿಲುಕಿದೆ. ಮುಂಗಾರು ಕೈಕೊಟ್ಟಿದೆ, ಹಿಂಗಾರೂ ನಿರೀಕ್ಷಿತ ಪ್ರಮಾಣದಲ್ಲಿ ಸುರಿದಿಲ್ಲ. ಪರಿಣಾಮ ಬೆಳೆ ಒಣಗುವ ಆತಂಕ ಒಂದೆಡೆಯಾದರೆ, ಮತ್ತೊಂದೆಡೆ ಜನ -ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದೇ ಜಿಲ್ಲಾಡಳಿತಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಮಳೆಯಿಲ್ಲದೆ ಭೂಮಿ ಬರಡಾಗುತ್ತಿದೆ. ಜಲಮೂಲಗಳಲ್ಲಿನ ನೀರಿನ ಮಟ್ಟ ಕುಸಿಯುತ್ತಿದೆ. ಸದ್ಯ ನದಿಗಳಲ್ಲಿ ಕಾಣುತ್ತಿರುವ ಅಲ್ಪ ಪ್ರಮಾಣದ ನೀರೇ ಜಿಲ್ಲೆಯ ಜನರ ಪಾಲಿಗೆ ಜೀವಜಲದ ಆಸರೆಯಾಗಿದೆ. ಆದರೆ ಈ ನೀರನ್ನು ಕೃಷಿಗೆ ಬಳಸಬೇಕೋ, ಕುಡಿಯುವ ಉದ್ದೇಶಕ್ಕೆ ಕಾಯ್ದಿರಿಸಬೇಕೋ ಎಂಬ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ.

- Advertisement -

ಹಿಪ್ಪರಗಿಯಲ್ಲಿ ಉಳಿದಿರುವುದು 2.5 ಟಿಎಂಸಿ ನೀರು!

ಜಿಲ್ಲೆಯ ಜೀವನಾಡಿಯಾಗಿರುವ ಕೃಷ್ಣಾ ನದಿಯ ಹಿಪ್ಪರಗಿ ಬ್ಯಾರೇಜ್‌ನಲ್ಲಿ ಸದ್ಯ ಕೇವಲ 2.5 ಟಿಎಂಸಿ ನೀರು ಸಂಗ್ರಹವಿದೆ. ಬ್ಯಾರೇಜ್‌ನ ಒಟ್ಟು ಸಾಮರ್ಥ್ಯ 6 ಟಿಎಂಸಿ. ಲಭ್ಯವಿರುವ ನೀರನ್ನು ಕೃಷಿ ಚಟುವಟಿಕೆಗಳಿಗೂ ಬಳಸಿದರೆ ಮುಂದಿನ ಒಂದು ತಿಂಗಳಲ್ಲೇ ಬ್ಯಾರೇಜ್ ಬರಿದಾಗುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ...

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ ಅನರ್ಹ ವ್ಯಕ್ತಿಯನ್ನೂ ಸೇರಿಸಿಲ್ಲ ಎಂದು ಚುನಾವಣಾ ಆಯೋಗ ಹೇಳುತ್ತದೆ. ಆದರೆ, ಮತದಾರರ ಪಟ್ಟಿಯಲ್ಲಿರುವ ಅಂಕಿಅಂಶಗಳು ಮತ್ತು ದಾಖಲೆಗಳು ಬೇರೆಯದ್ದೇ ಕಥೆ...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಹೀಗಾಗಿ ಸದ್ಯ ಸಂಗ್ರಹವಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿದರೆ ಜುಲೈವರೆಗೆ ನೀರು ಕಾಯ್ದುಕೊಳ್ಳಬಹುದು ಎಂಬ ಲೆಕ್ಕಾಚಾರವಿದೆ. ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳ 20ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಪ್ರಮುಖ ಜಲಮೂಲವಾಗಿರುವ ಹಿಪ್ಪರಗಿ ಬ್ಯಾರೇಜ್‌ನ ನೀರನ್ನು ಎಚ್ಚರಿಕೆಯಿಂದ ನಿರ್ವಹಿಸುವುದು ಅನಿವಾರ್ಯವಾಗಿದೆ. ಇದೇ ಕಾರಣಕ್ಕೆ ಮಹಾರಾಷ್ಟ್ರದಿಂದ 4 ಟಿಎಂಸಿ ನೀರು ಪಡೆಯಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎನ್ನಲಾಗಿದೆ.

ಘಟಪ್ರಭೆಯಲ್ಲಿ ತುಸು ನೆಮ್ಮದಿ; ಅತಿಬಳಕೆಯಾದರೆ ಸಂಕಷ್ಟ

ಘಟಪ್ರಭಾ ನದಿಯಲ್ಲಿ ನೀರಿನ ಪರಿಸ್ಥಿತಿ ಸದ್ಯಕ್ಕೆ ತುಸು ಸಮಾಧಾನಕರವಾಗಿದೆ. ಇತ್ತೀಚೆಗೆ ಹಿಡಕಲ್ ಜಲಾಶಯದಿಂದ 1 ಟಿಎಂಸಿ ನೀರನ್ನು ನದಿಗೆ ಹರಿಸಿರುವುದರಿಂದ ನದಿ ಪಾತ್ರದ ಬ್ಯಾರೇಜ್‌ಗಳಲ್ಲಿ ನೀರಿನ ಸಂಗ್ರಹ ಹೆಚ್ಚಾಗಿದೆ.

ಆದರೆ ಈ ನೆಮ್ಮದಿ ಹೆಚ್ಚು ದಿನ ಉಳಿಯುವ ಭರವಸೆ ಇಲ್ಲ. ಬಿಸಿಲಿನ ತೀವ್ರತೆ ಹೆಚ್ಚಿದಂತೆ ಆವಿಯಾಗುವ ನೀರಿನ ಪ್ರಮಾಣವೂ ಹೆಚ್ಚಲಿದೆ. ಇದರ ಜತೆಗೆ ನೀರಿನ ಅತಿಯಾದ ಬಳಕೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಬಹುದು.

ಹಿಡಕಲ್ ಜಲಾಶಯದಿಂದ ವರ್ಷಕ್ಕೆ 4 ಟಿಎಂಸಿ ನೀರು ಪೂರೈಸುವ ನಿಯಮವಿದ್ದರೂ, ಸಾಮಾನ್ಯವಾಗಿ ಬೇಸಿಗೆ ಅವಧಿಯಲ್ಲಿ ಪರ್ಯಾಯ ವ್ಯವಸ್ಥೆಯಾಗಿ ನೀರು ಹರಿಸಲಾಗುತ್ತದೆ. ಆದರೆ ಈ ಬಾರಿ ಬೇಸಿಗೆ ಬರುವ ಮುನ್ನವೇ ನೀರನ್ನು ಕಾಯ್ದಿರಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹಲವು ವರ್ಷಗಳ ಬಳಿಕ ಇಂತಹ ಪರಿಸ್ಥಿತಿ ಎದುರಾಗಿದೆ.

ಮಲಪ್ರಭೆ ಒಣಗಿದರೆ ಬಾದಾಮಿ, ಹುನಗುಂದಕ್ಕೆ ಸಂಕಷ್ಟ

ಕೃಷ್ಣಾ ಮತ್ತು ಘಟಪ್ರಭಾ ನದಿಗಳಿಗಿಂತ ಮಲಪ್ರಭಾ ನದಿಯ ಪರಿಸ್ಥಿತಿ ಹೆಚ್ಚು ಆತಂಕಕಾರಿಯಾಗಿದೆ. ಬಾದಾಮಿ ಮತ್ತು ಹುನಗುಂದ ಭಾಗಗಳಲ್ಲಿ ಹರಿಯುವ ಮಲಪ್ರಭಾ ನದಿಯಲ್ಲಿ ನಿರೀಕ್ಷಿತ ಪ್ರಮಾಣದ ನೀರಿನ ಸಂಗ್ರಹವಿಲ್ಲ.

ನದಿಯಲ್ಲಿ ನೀರಿನ ಪ್ರಮಾಣ ಕುಸಿದರೆ ಬೆಳಗಾವಿ ಜಿಲ್ಲೆಯ ನವಿಲುತೀರ್ಥ ಜಲಾಶಯದಿಂದ ನೀರು ಹರಿಸಿಕೊಳ್ಳುವುದು ಅನಿವಾರ್ಯವಾಗಲಿದೆ. ಸಾಮಾನ್ಯವಾಗಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಮಲಪ್ರಭಾ ನದಿಗೆ ನೀರು ಹರಿಸಲಾಗುತ್ತದೆ. ಆದರೆ ಈ ಬಾರಿ ಬೇಸಿಗೆಯ ಆರಂಭಕ್ಕೂ ಮುನ್ನವೇ ನೀರಿನ ನಿರ್ವಹಣೆ ಕುರಿತು ಗಂಭೀರ ಚಿಂತನೆ ನಡೆಸಬೇಕಾದ ಸ್ಥಿತಿ ಎದುರಾಗಿದೆ. ನದಿ ಪಾತ್ರವೇ ಬತ್ತಿಹೋದರೆ ಬಾದಾಮಿ, ಹುನಗುಂದ ಭಾಗದ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವುದು ದೊಡ್ಡ ಸವಾಲಾಗಲಿದೆ.

ಜಾಕ್‌ವೆಲ್ ಸಮಸ್ಯೆ; ನಗರ, ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಬವಣೆ

ಜಿಲ್ಲೆಯಲ್ಲಿ ನೀರಿನ ಸಮಸ್ಯೆಯ ಮುನ್ಸೂಚನೆ ಈಗಾಗಲೇ ಕಾಣಿಸಿಕೊಳ್ಳುತ್ತಿದೆ. ಜಾಕ್‌ವೆಲ್‌ನ ಪಂಪ್‌ಸೆಟ್‌ಗಳಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಯಿಂದ ಹುನಗುಂದ ಮತ್ತು ಇಳಕಲ್ ನಗರಗಳಲ್ಲಿ ನೀರಿನ ಕೊರತೆ ಎದುರಾಗಿದೆ.

ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿಯೂ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ.

ಇತ್ತ ಬಾಗಲಕೋಟೆ ನಗರವನ್ನು ಆವರಿಸಿದ್ದ ಹಿನ್ನೀರು ಹಿಂದಕ್ಕೆ ಸರಿದಿದೆ. ಒಮ್ಮೆ ನೀರಿನಿಂದ ತುಂಬಿದ್ದ ಸಿಮೆಂಟ್ ಕ್ವಾರಿಗಳಲ್ಲಿಯೂ ನೀರಿನ ಮಟ್ಟ ಇಳಿಕೆಯಾಗಿದೆ. ಜನವರಿಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆವಿಯಾಗುವ ನೀರಿನ ಪ್ರಮಾಣ ಹೆಚ್ಚಲಿದೆ. ಇದು ಈಗಿರುವ ನೀರಿನ ಸಂಗ್ರಹದ ಮೇಲೆ ಮತ್ತಷ್ಟು ಒತ್ತಡ ಹೇರುವ ಆತಂಕವಿದೆ.

ಖಾಸಗಿ ಬೋರ್‌ವೆಲ್‌ಗಳ ಮೊರೆ; ಜಿಲ್ಲಾಡಳಿತದಿಂದ ಕ್ರಿಯಾ ಯೋಜನೆ

ಬರದ ತೀವ್ರತೆ ಹೆಚ್ಚುವ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜಿಲ್ಲಾಡಳಿತ ಪರ್ಯಾಯ ಕ್ರಮಗಳಿಗೆ ಮುಂದಾಗಿದೆ. ಅಗತ್ಯವಿರುವ ಕಡೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ನಡೆಸಲಾಗುತ್ತಿದೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ಸುಗಮಗೊಳಿಸಲು ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಎಂ. ತಿಳಿಸಿದ್ದಾರೆ.

ನೀರಿದೆ ಎಂದು ನಿರ್ಲಕ್ಷ್ಯ ಬೇಡ; ಹನಿ ಹನಿಯೂ ಅಮೂಲ್ಯ!

ಬಾಗಲಕೋಟೆ ಜಿಲ್ಲೆಯಲ್ಲಿ ಸದ್ಯ ನದಿಗಳಲ್ಲಿ ಅಲ್ಪ ಪ್ರಮಾಣದ ನೀರಿನ ಸಂಗ್ರಹವಿದೆ ಎಂಬುದೇ ಸಮಾಧಾನದ ಸಂಗತಿ. ಆದರೆ ಅದನ್ನು ಸಮೃದ್ಧಿಯ ಸಂಕೇತವೆಂದು ಭಾವಿಸುವಂತಿಲ್ಲ. ಮಳೆ ಕೈಕೊಟ್ಟಿರುವ ಸಂದರ್ಭದಲ್ಲಿ ಇರುವ ನೀರನ್ನು ವಿವೇಚನೆಯಿಂದ ಬಳಸುವುದು ಅತ್ಯಂತ ಮುಖ್ಯವಾಗಿದೆ.

ಕೃಷಿ, ಕುಡಿಯುವ ನೀರು, ಜಾನುವಾರುಗಳ ಅಗತ್ಯಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಿದೆ. ಜಲಮೂಲಗಳ ಸಂರಕ್ಷಣೆ, ನೀರಿನ ಮಿತಬಳಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಸಮರ್ಪಕವಾಗಿ ಜಾರಿಯಾಗದಿದ್ದರೆ ಮುಂದಿನ ಬೇಸಿಗೆ ಜಿಲ್ಲೆಗೆ ಮತ್ತಷ್ಟು ಕಠಿಣವಾಗುವ ಸಾಧ್ಯತೆಯಿದೆ.

ಬರದ ಬಿಸಿ ಹೆಚ್ಚಾಗುವ ಮುನ್ನವೇ ಆಡಳಿತ ಎಚ್ಚೆತ್ತುಕೊಳ್ಳಬೇಕಿದೆ. ಇಲ್ಲದಿದ್ದರೆ ಇಂದು ಕಾಣುತ್ತಿರುವ ನೀರಿನ ಆತಂಕ ನಾಳೆ ಜಲಸಂಕಷ್ಟವಾಗಿ ಪರಿಣಮಿಸುವುದರಲ್ಲಿ ಅನುಮಾನವಿಲ್ಲ.

WhatsApp Image 2025 02 05 at 18.09.20 1
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಕ್ಷಾತೀತವಾಗಿ 73ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್ ಯಶಸ್ವಿಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ ಕರೆ

"ನಾನು ಕ್ರೀಡಾಭಿಮಾನಿಯೇ ಹೊರತು ಕ್ರೀಡಾಪಟುವಲ್ಲ. ಆದರೆ, ನಮ್ಮ ಜಿಲ್ಲೆಯ ಕೀರ್ತಿಗಾಗಿ ಸಹಕಾರ...

ಮಧ್ಯಾಹ್ನವೇ ಮಳೆ ಅಬ್ಬರ: ಇನ್ನೂ 3 ದಿನ ರಾಜ್ಯದ 13 ಜಿಲ್ಲೆಗಳಿಗೆ ಭಾರೀ ಮಳೆ

ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ, ಮತ್ತೆ ಆರ್ಭಟಿಸಲಾರಂಭಿಸಿದೆ. ಇಂದು (ಮಂಗಳವಾರ)...

ಉತ್ತರ ಕನ್ನಡ | ಜಿ.ಪಂ, ತಾ.ಪಂ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು 12 ತಾಲೂಕುಗಳ ಪಂಚಾಯಿತಿ...

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...